ನಂಜುಂಡೇಶ್ವರನ ಪ್ರಸಾದ ಯಾರಿಗೆ?
Team Udayavani, Feb 27, 2018, 12:37 PM IST
ಮೈಸೂರು: ಉಪ ಚುನಾವಣೆಯಿಂದ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜಿದ್ದಾಜಿದ್ದಿನ ಕಣವಾಗಿ ರಾಜ್ಯದ ಗಮನಸೆಳೆದಿದ್ದ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಮುಂಬರುವ ಚುನಾವಣೆಗೆ ಕದನ ಕಣ ಕಾವೇರುತ್ತಿದೆ.
ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಶಾಸಕ ಕಳಲೆ ಎನ್.ಕೇಶವಮೂರ್ತಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಚುನಾವಣೆಗೆ ಸಜಾjಗುತ್ತಿದ್ದರೆ, ಉಪ ಚುನಾವಣೆಯ ಭಾರೀ ಜಿದ್ದಾಜಿದ್ದಿನ ಕಾಳಗದಲ್ಲಿ ಸೋಲುಂಡಿರುವ ಹಿರಿಯ ರಾಜಕಾರಣಿ ವಿ.ಶ್ರೀನಿವಾಸಪ್ರಸಾದ್ ಅವರು ಸೋಲಿನ ಸೇಡು ತೀರಿಸಿಕೊಳ್ಳಲು ತಂತ್ರಗಾರಿಕೆಯಲ್ಲಿ ನಿರತರಾಗಿದ್ದರೆ, ಜಿಲ್ಲೆಯ 11 ಕ್ಷೇತ್ರಗಳ ಪೈಕಿ ಹತ್ತು ಕ್ಷೇತ್ರಗಳ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಜೆಡಿಎಸ್, ನಂಜನಗೂಡು ಕ್ಷೇತ್ರದಲ್ಲಿ ಅಭ್ಯರ್ಥಿ ಹಾಕದೆ ಕಾದು ನೋಡುವ ತಂತ್ರ ಅನುಸರಿಸುತ್ತಿದೆ.
ಸಾಮಾನ್ಯ ಕ್ಷೇತ್ರವಾಗಿದ್ದ ನಂಜನಗೂಡು, 2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯಾದ ಸಂದರ್ಭದಲ್ಲಿ ಮೀಸಲು ಕ್ಷೇತ್ರವಾಯಿತು. 70ರ ದಶಕದಲ್ಲಿ ಒಮ್ಮೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದು ಬಿಟ್ಟರೆ, ಚಾಮರಾಜ ನಗರ ಸಂಸದರಾಗಿ ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದ ವಿ.ಶ್ರೀನಿವಾಸಪ್ರಸಾದ್ ಅವರು, 2008ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ 42867 ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾದರೆ,
ಪ್ರಬಲ ಪೈಪೋಟಿ ನೀಡಿದ ಬಿಜೆಪಿ ಅಭ್ಯರ್ಥಿ ಎಸ್.ಮಹದೇವಯ್ಯ ಅವರು 42159 ಮತಗಳನ್ನು ಪಡೆದು ಕೇವಲ 708 ಮತಗಳ ಅಂತರದಲ್ಲಿ ಸೋಲನುಭವಿಸಿದರು. ಜೆಡಿಎಸ್ ಅಭ್ಯರ್ಥಿಯಾಗಿದ್ದ ಕಳಲೆ ಎನ್.ಕೇಶವಮೂರ್ತಿ ಅವರು 25551 ಮತಗಳನ್ನು ಪಡೆದರೆ, ಬಿಎಸ್‌ಪಿಯ ಸಿ.ಎಂ.ಮಹದೇವಪ್ಪ4513 ಮತಗಳಿಸಿದ್ದರು.
2013ರ ಚುನಾವಣೆ ವೇಳೆಗೆ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಯಿಂದ ಹೊರಬಂದು ಸ್ಥಾಪಿಸಿದ್ದ ಕೆಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಎಸ್.ಮಹದೇವಯ್ಯ 28312 ಮತ ಪಡೆದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ಡಾ.ಶಿವರಾಮ್ 7074 ಮತಗಳನ್ನಷ್ಟೇ ಗಳಿಸಿದರು. ಜೆಡಿಎಸ್‌ನ ಕಳಲೆ ಎನ್.ಕೇಶವಮೂರ್ತಿ 41843 ಮತಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನಕ್ಕೇರಿದರೆ ಶ್ರೀನಿವಾಸಪ್ರಸಾದ್ ಅವರು ಈ ಬಾರಿ 50784 ಮತಗಳನ್ನು ಪಡೆದು 8941 ಮತಗಳ ಅಂತರದಿಂದ ಗೆಲುವು ಸಾಧಿಸಿದರು.
ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿ.ಶ್ರೀನಿವಾಸಪ್ರಸಾದ್ ಅವರನ್ನು ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೈ ಬಿಟ್ಟ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದರು.
ಇದರಿಂದ ಎದುರಾದ ಉಪ ಚುನಾವಣೆಯಲ್ಲಿ ಜೆಡಿಎಸ್‌ನ ಕಳಲೆ ಕೇಶವಮೂರ್ತಿ ಅವರು ಕಾಂಗ್ರೆಸ್ ಸೇರಿ ಅಭ್ಯರ್ಥಿಯಾದರೆ, ಜೆಡಿಎಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸಲಿಲ್ಲ. ಹೀಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಾನೇರ ನಡೆದ ಸ್ಪರ್ಧೆಯನ್ನು ಎರಡೂ ಪಕ್ಷಗಳು ಪ್ರತಿಷ್ಠೆಯಾಗಿ ತೆಗೆದುಕೊಂಡು ಸ್ವತಃ ಯಡಿಯೂರಪ್ಪಅವರು ತಿಂಗಳುಗಳ ಕಾಲ ಠಿಕಾಣಿ ಹೂಡಿ ಮತದಾರರ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಸಂಪುಟದ ಬಹುತೇಕ ಸಚಿವರು ವಾರಗಳ ಕಾಲ ನಂಜನಗೂಡಿನಲ್ಲಿ ಬೀಡುಬಿಟ್ಟು ತಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ದುಡಿದರೆ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಮತ್ತು ಅವರ ಪುತ್ರ ಸುನೀಲ್ ಬೋಸ್ ಅವರ ವಿಶೇಷ ಪ್ರಯತ್ನದಿಂದಾಗಿ 86212 ಮತಗಳನ್ನು ಪಡೆದ ಕಳಲೆ ಕೇಶವಮೂರ್ತಿ ಗೆಲುವಿನ ನಗೆ ಬೀರಿದರೆ, ಶ್ರೀನಿವಾಸಪ್ರಸಾದ್ ಅವರು 64878 ಮತಗಳನ್ನು ಪಡೆದು 21334 ಮತಗಳ ಅಂತರದಿಂದ ಸೋಲನುಭವಿಸಿದರು.
ಕೈ ಟಿಕೆಟ್‌ಗೆ ಬೇರೆಯದೆ ಲೆಕ್ಕಾಚಾರ: ಮುಂಬರುವ ಚುನಾವಣೆಗೆ ಕಾಂಗ್ರೆಸ್‌ನಿಂದ ಹಾಲಿ ಶಾಸಕರಿಗೇ ಟಿಕೆಟ್ ಎನ್ನಲಾಗುತ್ತಿದ್ದರೂ ಪಕ್ಷದೊಳಗೆ ಅದರಲ್ಲೂ ಮುಖ್ಯಮಂತ್ರಿಯವರ ಆಪ್ತ ವಲಯದಲ್ಲಿ ಬೇರೆಯದೆ ಲೆಕ್ಕಾಚಾರಗಳು ನಡೆಯುತ್ತಿವೆ. ತಿ.ನರಸೀಪುರ ಕ್ಷೇತ್ರದಲ್ಲಿ ಕಳೆದ ಬಾರಿ ಪ್ರಯಾಸದ ಗೆಲುವು ಸಾಧಿಸಿದ್ದ ಸಚಿವ ಮಹದೇವಪ್ಪ ಅವರಿಗೆ ನಂಜನಗೂಡು ಕ್ಷೇತ್ರದ ಮೇಲೂ ಕಣ್ಣಿದೆ. ಅದಕ್ಕೆ ತಕ್ಕಂತೆ ಈಗಾಗಲೇ ಪೂರಕ ಸಿದ್ಧತೆಗಳನ್ನೂ ಮಾಡಿಕೊಂಡಿದ್ದಾರೆ.
ಇತ್ತ ಬಿಜೆಪಿಯಲ್ಲಿ ಶ್ರೀನಿವಾಸಪ್ರಸಾದ್ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವುದರಿಂದ ಆ ಪಕ್ಷದ ಅಭ್ಯರ್ಥಿಯಾರಾಗಲಿದ್ದಾರೆ ಎಂಬುದು ಕುತೂಹಲಕ್ಕೆಡೆ ಮಾಡಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಕೋಟೆ ಎಂ.ಶಿವಣ್ಣ, ಎರಡು ಬಾರಿ ಸೋಲನುಭವಿಸಿರುವ ಎಸ್.ಮಹಾದೇವಯ್ಯ, ಪ್ರಸಾದ್ ಅವರ ಅಳಿಯ ಹರ್ಷವರ್ಧನ್ ಅವರೂ ಆಕಾಂಕ್ಷಿಗಳಾಗಿದ್ದಾರೆ.
ಆದರೆ, ಬಿಜೆಪಿ ನಾಯಕರು ಮತ್ತು ಪ್ರಸಾದ್ ಅವರ ಬೆಂಬಲಿಗರು ಪ್ರಸಾದ್ ಅವರೇ ಸ್ಪರ್ಧೆ ಮಾಡಬೇಕು ಎಂದು ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ. ಜೆಡಿಎಸ್‌ನಲ್ಲಿ ಸೋಮಸುಂದರ್ ಮತ್ತು ಬೆಳವಾಡಿ ಶಿವಕುಮಾರ್ ಆಕಾಂಕ್ಷಿಗಳಾಗಿದ್ದಾರೆ.
ಆದರೆ, ಶ್ರೀನಿವಾಸಪ್ರಸಾದ್ ಅವರು ತೆಗೆದುಕೊಳ್ಳುವ ತೀರ್ಮಾನವನ್ನು ಇತರೆ ಪಕ್ಷಗಳೂ ಎದುರು ನೋಡುತ್ತಿದೆ. ಸಚಿವ ಮಹದೇವಪ್ಪ ಕಾಂಗ್ರೆಸ್ ಟಿಕೆಟ್ ತಂದರೆ ಕಳಲೆ ಕೇಶವಮೂರ್ತಿ ಮತ್ತೆ ಹೊರೆ ಹೊತ್ತರೂ ಅಚ್ಚರಿ ಇಲ್ಲ. ಕಾಂಗ್ರೆಸ್‌ನಲ್ಲಿ ಈ ಬೆಳವಣಿಗೆ ಆಗದಿದ್ದಲ್ಲಿ ಜೆಡಿಎಸ್ ಬಿಜೆಪಿಯಿಂದ ಬರುವವರಿಗೆ ಮಣೆ ಹಾಕುವ ಸಾಧ್ಯತೆಗಳು ಹೆಚ್ಚಿವೆ.
* ಗಿರೀಶ್ ಹುಣಸೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಮಗಳ-ಅಳಿಯಗೆ ಮುಡಾ ಸೈಟ್: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು
Actor Darshan: ಇಂದು ನಟ ದರ್ಶನ್ ಮೈಸೂರಿಗೆ ಆಗಮನ
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
MUST WATCH
ಹೊಸ ಸೇರ್ಪಡೆ
The Rise Of Ashoka: ಅಶೋಕನ ರಕ್ತಚರಿತೆ
Shimoga: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಅಣ್ಣನಿಂದಲೇ ತಮ್ಮನ ಕೊಲೆ
Team India: ಪಾಂಡ್ಯಾಗೆ ಉಪನಾಯಕತ್ವವೂ ಇಲ್ಲ: ಈ ಆಟಗಾರನಿಗೆ ಹೊಸ ಜವಾಬ್ದಾರಿ
Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.