ವಿದ್ಯಾರ್ಥಿಗಳಿಂದ ವನ್ಯಜೀವಿ ಸಪ್ತಾಹ ಜಾಗೃತಿ ಜಾಥಾ


Team Udayavani, Oct 9, 2017, 12:31 PM IST

msm1.jpg

ಹುಣಸೂರು: ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ವತಿಯಿಂದ  ಹುಣಸೂರು ನಗರದಲ್ಲಿ ಆಯೋಜಿಸಿದ್ದ 63ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ವನ್ಯಜೀವಿ ಜಾಗೃತಿ ಜಾಥಾ ನಡೆಸಿದರು. 

ಮೈಸೂರು ರಸ್ತೆಯ ದೇವರಾಜ ಅರಸ್‌ ಪುತ್ಥಳಿ ಬಳಿಯಿಂದ ಹೊರಟ ಜಾಥಾಕ್ಕೆ ಡಿವೆ.ಎಸ್‌.ಪಿ.ಭಾಸ್ಕರ್‌ ರೆ, ನಾಗರಹೊಳೆ ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ಮಣಿಕಂದನ್‌ ಚಾಲನೆ ನೀಡಿದರು. ಜಾಥಾದಲ್ಲಿ ಹುಲಿವೇಷದಾರಿಗಳ ನರ್ತನ, ವಿದ್ಯಾರ್ಥಿಗಳ ಪರಿಸರ ಪೂರಕ ಘೋಷಣೆಗಳು, ಇಲಾಖೆ ತರಬೇತಿ ಸಿಬ್ಬಂದಿಗಳ ಆಕರ್ಷಕ ಪಥಸಂಚಲನ ಆಕರ್ಷಿಸಿತು.

ಜಾಥಾನಂತರ ವನ್ಯಜೀವಿ ವಿಭಾಗದ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ಮಣಿಕಂಠನ್‌ ಸಪ್ತಾಹದ ಬಗ್ಗೆ ಮಾತನಾಡಿ, ಸಾರ್ವಜನಿಕರಲ್ಲಿ ಕಾಡು ಪ್ರೀತಿ, ವನ್ಯಜೀವಿಗಳ ಸಂರಕ್ಷಣೆ ಕುರಿತು ಜಾಗತಿ ಮೂಡಿಸಲು ಪ್ರತಿವರ್ಷ ಅಕ್ಟೋಬರ್‌ ಮೊದಲ ವಾರದಲ್ಲಿ ಜಾಥಾ ನಡೆಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಕಾಡಂಚಿನ ಹುಣಸೂರು, ಎಚ್‌.ಡಿ.ಕೋಟೆ ತಾಲೂಕು ಹಾಗೂ ಕೊಡಗು ಭಾಗದಲ್ಲೂ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಅ.13ಕ್ಕೆ ಸಮಾರೋಪ ಸಮಾರಂಭ ಹುಣಸೂರು ಅಂಬೇಡ್ಕರ್‌ ಭವನದಲ್ಲಿ ನಡೆಯಲಿದ್ದು, ಭಾಗವಹಿಸುವಂತೆ ಕೋರಿದರು.

ಈ ಬಾರಿ ತಡವಾಗಿಯಾದರೂ ಸಾಕಷ್ಟು ಮಳೆ ಬಿದ್ದಿದ್ದು, ಉದ್ಯಾನವನದ ಎಲ್ಲಾ ಕೆರೆಗಳು ಭರ್ತಿಯಾಗಿವೆ. ಅಲ್ಲದೆ ಬೇಸಿಗೆಯಲ್ಲಿ ಸೋಲಾರ್‌ ಪಂಪ್‌ ಸೆಟ್‌ ಮೂಲಕ ನೀರು ತುಂಬಿಸಿದ್ದು, ಉದ್ಯಾನವನ ಹಸಿರು ಮಯವಾಗಿ ನಳನಳಿಸುತ್ತಿರುವುದು ಎಲ್ಲರಲ್ಲೂ ಸಂತಸ ಮೂಡಿಸಿದೆ ಎಂದರು.

3 ಕಿ.ಮೀ.ಗೂ ಹೆಚ್ಚು ದೂರ ನಡೆದ ಜಾಥಾದಲ್ಲಿ ಎಸಿಎಫ್ಗಳಾದ ಪ್ರಸನ್ನಕುಮಾರ್‌, ಪೌಲ್‌ ಆಂಟೋನಿ, ವಲಯ ಅರಣ್ಯಾಧಿಕಾರಿಗಳಾದ ಸುರೇಂದ್ರ, ಶಿವರಾಂ, ಮಧುಸೂಧನ್‌,ಕಿರಣ್‌ ಕುಮಾರ್‌, ಇಲವಾಲದ ಅರಣ್ಯ ಇಲಾಖೆ ತರಬೇತಿ ನಿರತ ಡಿಆರ್‌ಎಫ್ಒ ತಂಡ, ಅರಣ್ಯ ಸಿಬ್ಬಂದಿ, ಟ್ಯಾಲೆಂಟ್‌ ಶಾಲೆ, ಮಹಿಳಾ ಸರ್ಕಾರಿ, ಜ್ಞಾನಧಾರಾ, ಸಂತಜೋಸಫ‌ರ ಪದವಿ ಕಾಲೇಜುಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.