Mysore:ಕಲ್ಲಡ್ಕ ಪ್ರಭಾಕರ ಭಟ್ ಮೇಲಿಂದ ಇಳಿದು ಬಂದಿಲ್ಲ,ವಿರುದ್ಧ ಕ್ರಮ ಖಂಡಿತ: ಸಚಿವ ತಂಗಡಗಿ
Team Udayavani, Jan 2, 2024, 6:19 PM IST
ಮೈಸೂರು: ಕಲ್ಲಡ್ಕ ಪ್ರಭಾಕರ ಭಟ್ ಮೇಲಿಂದ ಇಳಿದು ಬಂದಿಲ್ಲ, ಅವರ ಮೇಲೂ ಕ್ರಮ ತೆಗೆದುಕೊಳ್ಳುವ ಕೆಲಸ ಆಗುತ್ತಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ಬಗ್ಗೆ ಪ್ರಕರಣ ದಾಖಲಾಗಿದ್ದರೂ ಅವರನ್ನು ಬಂಧಿಸಲು ಸರ್ಕಾರ ವಿಫಲವಾಯಿತೇ ಎಂಬ ಮಾಧ್ಯಮಗಳ ಪ್ರಶ್ನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಯಾರನ್ನೂ ಪೋಷಣೆ, ರಕ್ಷಣೆ ಮಾಡುವ ಮಾತೇ ಇಲ್ಲ ಎಂದರು.
ಡಿಕೆಶಿ ವಿರುದ್ಧ ಬಿಜೆಪಿ ಹುನ್ನಾರ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಇದು ನೂರಕ್ಕೆ ನೂರು ಸತ್ಯ. ಸಿಬಿಐ, ಇಡಿ ಸಂಸ್ಥೆಗಳನ್ನು ಬಿಜೆಪಿಯವರು ಸ್ವಂತ ಆಸ್ತಿಯಾಗಿ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಕಾನೂನಾತ್ಮಕವಾಗಿ ವಾಪಸ್ ಪಡೆದಿದ್ದರೂ, ಮತ್ತೊಮ್ಮೆ ಎದುರಿಸುವ ಕೆಲಸ ಮಾಡುತ್ತಿದ್ದಾರೆ. ಇದರ ಮೂಲಕ ಬಿಜೆಪಿ ಪಕ್ಷದ ವಿರುದ್ಧ ಟೀಕೆ ಮಾಡುವವರ ಬಗ್ಗೆ, ಪ್ರಭಾವಿಗಳ ಬಗ್ಗೆ ದ್ವೇಷದ ರಾಜಕೀಯ ಮಾಡಲಾಗುತ್ತಿದೆ. ಅಂತಹವರನ್ನು ಟಾರ್ಗೆಟ್ ಮಾಡಿ ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.
ಬಿಜೆಪಿಯವರ ಮೇಲೆ ಯಾಕೆ ಇಡಿ, ಸಿಬಿಐ ಕೇಸ್ ಗಳನ್ನು ಹಾಕುತ್ತಿಲ್ಲ? ಭ್ರಷ್ಟಾಚಾರ, ಸುಳ್ಳು ಹೇಳುವುದೆ ಬಿಜೆಪಿ ಅಜೆಂಡಾ ಆಗಿದೆ. ಜನರ ಧಾರ್ಮಿಕ ಭಾವನೆಗಳ ಜೊತೆ ಆಟ ಆಡುತ್ತಿದ್ದಾರೆ. ಭಾವನಾತ್ಮಕ ವಿಚಾರಗಳನ್ನು ಜನರ ಮೇಲೆ ಹೇರಿ ಜನರನ್ನು ದಿಕ್ಕು ತಪ್ಪಿಸುವುದೇ ಬಿಜೆಪಿ ಅಜೆಂಡಾ. ಅಭಿವೃದ್ಧಿ ಕಾರ್ಯಗಳ ಬಗ್ಗೆ ಅವರಿಗೆ ಚಿಂತನೆ ಇಲ್ಲ ಎಂದು ಟೀಕಿಸಿದರು.
ಸರ್ಕಾರಿ ಶಾಲೆ ಮುಚ್ಚುವುದಿಲ್ಲ: ರಾಜ್ಯದ ಗಡಿ ಭಾಗದಲ್ಲಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಈಗಾಗಲೇ ಕೇರಳ ಗಡಿ ಭಾಗಕ್ಕೆ ಭೇಟಿ ಕೊಟ್ಟು ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಅದರ ಬಗ್ಗೆ ಸೂಕ್ತ ಕ್ರಮ ವಹಿಸುತ್ತೇವೆ ಎಂದು ಪ್ರತಿಕ್ರಿಯೆ ನೀಡಿದರು.
ರಂಗಾಯಣದ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಶೀಘ್ರದಲ್ಲೇ ನಡೆಯಲಿದೆ. ಸದ್ಯಕ್ಕೆ ನಾನೇ ಅದರ ನಿರ್ದೇಶಕ, ಅಧ್ಯಕ್ಷ ಎಲ್ಲವೂ ಆಗಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಾನೂನು ವಿರುದ್ಧ ಹೋಗಬಾರದು: ಕನ್ನಡಪರ ಹೋರಾಟಗಾರರ ಬಂಧನ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕನ್ನಡ, ನಾಡು, ನುಡಿ ಜಲದ ಹೋರಾಟಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ. ಆದರೆ, ಕಾನೂನನ್ನು ಕೈಗೆ ತೆಗೆದುಕೊಳ್ಳುವುದು ಸರಿಯಲ್ಲ. ಸರ್ಕಾರ ಈಗಾಗಲೇ 60:40ರ ಅನುಪಾತದಡಿಯಲ್ಲಿ ಕನ್ನಡ ಬಳಕೆಗೆ ನಿರ್ದೇಶನ ನೀಡಿದೆ. ಅದನ್ನು ತಪ್ಪದೇ ಪಾಲನೆ ಮಾಡಬೇಕು. ಕಾನೂನಿನ ಮುಂದೆ ನಾವು, ನೀವು ಎಲ್ಲರೂ ಒಂದೇ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.