ಗಾಳಿಪಟ ಹಾರಾಟಕ್ಕೆ ಗಾಳಿ ಕೊರತೆ, ನಿರಾಸೆ

Team Udayavani, Oct 1, 2018, 11:45 AM IST

m3-galipata.jpg

ಮೈಸೂರು: ದಸರೆಯ ಸಂಭ್ರಮ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಿದ್ದ ಗಾಳಿಪಟ ಉತ್ಸವ ಎರಡನೇ ದಿನವೂ ಸಾರ್ವಜನಿಕರನ್ನು ಆಕರ್ಷಿಸುವಲ್ಲಿ ಯಶಸ್ವಿಯಾದರೂ ಗಾಳಿಪಟಗಳ ಹಾರಾಟಕ್ಕೆ ಗಾಳಿಯ ವೇಗದಲ್ಲಿ ಸ್ಥಿರತೆ ಕಾಣಿಸದ ಪರಿಣಾಮ ದೊಡ್ಡ ಗಾಳಿಪಟಗಳ ಹಾರಾಟ ಸಾಧ್ಯವಾಗದೆ ನಿರಾಸೆ ಮೂಡಿಸಿತು. 

ನಗರದ ಲಲಿತ್‌ಮಹಲ್‌ ಹೆಲಿಪ್ಯಾಡ್‌ನ‌ಲ್ಲಿ  ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ದಸರಾ ಮಹೋತ್ಸವ ಪ್ರಯುಕ್ತ ಎರಡು ದಿನಗಳ ಗಾಳಿಪಟ ಉತ್ಸವಕ್ಕೆ ಭಾನುವಾರ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ದೊರೆಯಿತು. ಗಾಳಿಪಟ ಉತ್ಸವದಲ್ಲಿ ವಿವಿಧ ವಿನ್ಯಾಸದ ಆಕರ್ಷಕ ಗಾಳಿಪಟಗಳ ಹಾರಾಟ ಕಣ್ತುಂಬಿಕೊಳ್ಳಲು ನೂರಾರು ಮಂದಿ ಮಕ್ಕಳೊಂದಿಗೆ ಆಗಮಿಸಿದ್ದರು.

ಆದರೆ ಮೊದಲ ದಿನದಂತೆ ಎರಡನೇ ದಿನವೂ ಗಾಳಿಯ ಕೊರತೆ ಕಂಡುಬಂದ ಪರಿಣಾಮ ಗಾಳಿಪಟ ಉತ್ಸವದ ಸಂಭ್ರಮಕ್ಕೆ ಕೊಂಚ ಅಡ್ಡಿಯುಂಟು ಮಾಡಿತು. ಗಾಳಿಪಟ ಉತ್ಸವದ ಅಂಗವಾಗಿ ನಡೆದ ಕಾರ್ಯಗಾರದಲ್ಲಿ ಮಂಗಳೂರಿನ ಪ್ರಶಾಂತ್‌ ಹಾಗೂ ಮುಂಬೈನ ಅಶೋಕ್‌ ಷಾ, ಮಕ್ಕಳನ್ನು ಸಂತೋಷಪಡಿಸುವ ಹಾಗೂ ಅವರ ಕುತೂಹಲ ಕೆರಳಿಸುವ ನಿಟ್ಟಿನಲ್ಲಿ ವಿವಿಧ ಆಕಾರದ,

ಬಣ್ಣಬಣ್ಣದ ಗಾಳಿಪಟಗಳನ್ನು ಮಕ್ಕಳೆದುರೆ ತಯಾರಿಸಿದರು. ಈ ಸಂದರ್ಭದಲ್ಲಿ ಬಾಲಂಗೋಚಿ ಎಲ್ಲಾ ಗಾಳಿಪಟಕ್ಕೂ ಬೇಕಾ, ಎಷ್ಟು ದೂರ ಹಾರುತ್ತವೆ, ಏಕೆ ದೊಡ್ಡ ಗಾಳಿಪಟಗಳು ಹಾರುತ್ತಿಲ್ಲ, ಹೀಗೆ ಮಕ್ಕಳ ಮುಗ್ಧ ಪ್ರಶ್ನೆಗೆ ಪ್ಲೆ„ಯರ್ಸ್‌ ಉತ್ತರ ನೀಡಿದರು. ಇನ್ನು ಗಾಳಿಪಟ ಉತ್ಸವಕ್ಕೆ ಆಗಮಿಸಿದ್ದ ಪ್ರೇಕ್ಷಕರು ಡಿಜೆ ಸಂಗೀತಕ್ಕೆ ಹೆಜ್ಜೆಹಾಕಿ ಸಂಭ್ರಮಿಸಿದರು. 

ಗಜಪಡೆಗೆ ಸಿಡಿಮದ್ದು ಸಿಡಿಸುವ ತಾಲೀಮು: ನಾಡಹಬ್ಬ ದಸರೆಯ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆ, ಅಶ್ವರೋಹಿ ಪಡೆಗೆ ಎರಡನೇ ಬಾರಿಗೆ ಸಿಡಿಮದ್ದು ಸಿಡಿಸುವ ತಾಲೀಮ ನಡೆಸಲಾಯಿತು. ಅರಮನೆಯ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ಚಿನ್ನದ ಅಂಬಾರಿ ಹೊರಲಿರುವ ಅರ್ಜುನ ನೇತೃತ್ವದ ಗಜಪಡೆಯ 12 ಆನೆಗಳು, 22 ಕುದುರೆಗಳನ್ನು ನಿಲ್ಲಿಸಿ ನಾಲ್ಕು ಸುತ್ತುಗಳಲ್ಲಿ 21 ಕೂಶಲ ಕೂಶಲು ತೋಪು ಸಿಡಲಾಯಿತು. 

ಮೈಸೂರು ನಗರದ ಸಿಎಆರ್‌ನ ನುರಿತ 30 ಸಿಬ್ಬಂದಿ ಏಕಕಾಲದಲ್ಲಿ ಫಿರಂಗಿಗಳಿಂದ ಸಿಡಿಮದ್ದು ಸಿಡಿಸಿದರು. ಮೊದಲ ಬಾರಿಯ ತಾಲೀಮಿನಲ್ಲಿ ಸಿಡಿಮದ್ದಿನ ಶಬ್ದಕ್ಕೆ ಬೆಚ್ಚಿದ್ದ ಧನಂಜಯ, ದ್ರೋಣ, ಚೈತ್ರ ಆನೆಗಳು ಹೆಚ್ಚಾಗಿ ವಿಚಲಿತಗೊಳ್ಳಲಿಲ್ಲ. 

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.