ಗೆಲ್ಲುವ ಅಭ್ಯರ್ಥಿಗಳು ಕಣಕ್ಕೆ: ಮಹದೇವಪ್ಪ
Team Udayavani, May 13, 2019, 3:00 AM IST
ತಿ.ನರಸೀಪುರ: ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಸಮನ್ವಯತೆ ಕಾಯ್ದುಕೊಂಡು ಬನ್ನೂರು ಪುರಸಭೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಹಿರಿಯ ಮುಖಂಡ, ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮನವಿ ಮಾಡಿದರು.
ತಾಲೂಕಿನ ರಂಗಸಮುದ್ರ ಗ್ರಾಮದ ಬಳಿಯಿರುವ ಸುಮಂಗಲಿ ಕಲ್ಯಾಣ ಮಂಟಪದಲ್ಲಿ ನಡೆದ ಬನ್ನೂರು ಪುರಸಭಾ ಚುನಾವಣೆಯ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯ ಸೋಲಿನ ನ್ಯೂನತೆಗಳು ಮರುಕಳಿಸಬಾರದು. ಅಭ್ಯರ್ಥಿಗಳು ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ದುಡಿಯುವ ಮೂಲಕ ಪುರಸಭೆ ಆಡಳಿತವನ್ನು ಕೈ ತೆಕ್ಕೆಗೆ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಬನ್ನೂರು ಪುರಸಭೆಯ 23 ವಾರ್ಡ್‌ಗಳಿಗೂ ಗೆಲ್ಲುವಂತಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಅಭ್ಯರ್ಥಿಗಳ ಆಯ್ಕೆ ಸಮಿತಿ ಎಲ್ಲಾ ವಾರ್ಡ್‌ಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಟಿಕೆಟ್ ವಂಚಿತರು ಅಸಮಧಾನಗೊಂಡು ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸದೆ ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಸಂಪೂರ್ಣ ಸಹಕಾರವನ್ನು ನೀಡಬೇಕು ಎಂದು ಮನವಿ ಮಾಡಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯು ರಾಜಕೀಯ ಪಕ್ಷದ ಸಂಘಟನೆಯ ಬೇರುಗಳನ್ನು ಭದ್ರಪಡಿಸುವುದರಿಂದ ಪುರಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು. ಪುರಸಭೆ ಮಾಜಿ ಅಧ್ಯಕ್ಷ ಡಿ.ಪದ್ಮನಾಭ ಮಾತನಾಡಿ, ಬನ್ನೂರು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ.ಗಳ ಯೋಜನೆ ರೂಪಿಸಿ,
ಅನುದಾನ ನೀಡಿದ ಡಾ.ಎಚ್.ಸಿ.ಮಹದೇವಪ್ಪ ಅವರ ಜನಪರ ಮತ್ತು ಅಭಿವೃದ್ಧಿ ಕಾಳಜಿಯಿಂದ ಪುರಸಭೆ ಚುನಾವಣೆಯನ್ನು ಗೆಲ್ಲಲು ಸಹಕಾರಿಯಾಗಲಿದೆ. ಯಾವುದೇ ವಾರ್ಡ್‌ನಲ್ಲಿ ಅಭ್ಯರ್ಥಿ ಯಾರೇ ಆದರೂ ಅವರ ಗೆಲುವಿಗೆ ನಾವೆಲ್ಲರೂ ಒಗ್ಗಟ್ಟಿನಿಂದ ದುಡಿಯೋಣ ಎಂದು ತಿಳಿಸಿದರು.
ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಜಿಲ್ಲಾ ಪಂಚಾಯ್ತಿ ಸದಸ್ಯ ಮಂಜುನಾಥನ್, ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನಸ್ವಾಮಿ, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ವಜ್ರೆಗೌಡ, ಪುರಸಭಾ ಮಾಜಿ ಅಧ್ಯಕ್ಷರಾದ ಅಜೀಜ್ ಉಲ್ಲಾ,
ಮುನಾವರ್ ಪಾಷ, ಮಾಜಿ ಉಪಾಧ್ಯಕ್ಷರಾದ ಬಿ.ಎಸ್.ರಾಮಲಿಂಗೇಗೌಡ, ಬಿ.ಎಸ್.ರವೀಂದ್ರಕುಮಾರ್, ಪುರಸಭೆ ಮಾಜಿ ಸದಸ್ಯರಾದ ಬಿ.ಭೈರವಮೂರ್ತಿ, ಬಿ.ಸುಮಿತ್ರಾ, ಎಪಿಎಂಸಿ ಮಾಜಿ ನಿರ್ದೇಶಕ ಉಕ್ಕಲಗೆರೆ ಬಸವಣ್ಣ, ಗ್ರಾಮ ಪಂಚಾಯ್ತಿ ಸದಸ್ಯ ಎಂ.ರಾಜು, ಮುಖಂಡರಾದ ಪೀರ್‌ಖಾನ್ ಸೇರಿದಂತೆ ಇನ್ನಿತರರು ಹಾಜರಿದ್ದರು.
* ಪ್ರಕಾಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.