ಎಂ.ಟಿ.ಬಿ.ನಾಗರಾಜ್‌ ಕ್ಷಮೆಗೆ ಮಹಿಳಾ ಕಾಂಗ್ರೆಸ್‌ ಆಗ್ರಹ

Team Udayavani, Nov 24, 2019, 3:00 AM IST

mtb-naga

ಮೈಸೂರು: ಹೊಸಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪದ್ಮಾವತಿ ಸುರೇಶ್‌ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿರುವ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್‌ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಹೆಣ್ಣು ಮಕ್ಕಳು ಉಪ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಂ.ಟಿ.ಬಿ.ನಾಗರಾಜ್‌ಗೆ ಹೆಣ್ಣು ಮಗಳು ಎದುರಾಳಿಯಾಗಿರುವುದು ಭಯ ಮೂಡಿಸಿರಬಹುದು. ಅದಕ್ಕಾಗಿ ಪದ್ಮಾವತಿ ಅವರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ನ ಮಹಿಳಾ ಅಭ್ಯರ್ಥಿ ನನಗ್ಯಾವ ಲೆಕ್ಕ ಎಂಬ ಎಂಟಿಬಿ ಹೇಳಿಕೆ ಖಂಡನೀಯ. ಹೆಣ್ಣು ಮಕ್ಕಳು ಅಡುಗೆ ಮನೆ, ಮಕ್ಕಳನ್ನು ನೋಡಿಕೊಂಡು, ಮನೆಯ ಕಸ ಮುಸುರೆ ಎತ್ತಲು ಸೀಮಿತ ಎನಿಸಿರಬಹುದು ಎಂದರು.

ಸಮಾಜದಲ್ಲಿ ಶೇ.50 ಮಹಿಳೆಯರಿದ್ದು, ನಾವೂ ದೇಶವನ್ನು ಮುನ್ನಡೆಸುತ್ತಾ ಬಂದಿದ್ದೇವೆ. ತೊಟ್ಟಿಲು ತೂಗುವ ಕೈ ದೇಶವನ್ನೂ ಆಳಬಲ್ಲದು ಎಂಬುದನ್ನು ಇಂದಿರಾಗಾಂಧಿ ತೋರಿಸಿದ್ದಾರೆ. ಜಯಲಲಿತಾ, ಶೀಲಾ ದೀಕ್ಷಿತ್‌, ಮಾಯಾವತಿ ಅವರು ರಾಜ್ಯ ಆಳಲಿಲ್ವಾ. ಬಿಜೆಪಿಯ ನಿರ್ಮಲಾ ಸೀತಾರಾಮನ್‌ ಹೆಣ್ಣು ಮಗಳಲ್ವಾ. ಮೋದಿ ಸರ್ಕಾರದಲ್ಲಿ ಹಿಂದಿನ ಅವಧಿಯಲ್ಲಿ ರಕ್ಷಣಾ ಇಲಾಖೆ, ಈಗ ಹಣಕಾಸು ಖಾತೆಯ ಜವಾಬ್ದಾರಿ ಕೊಟ್ಟಿಲ್ಲವೇ.

ನಿಮ್ಮದೇ ಪಕ್ಷದಲ್ಲಿ ಹೆಣ್ಣು ಮಗಳಿಗೆ ಅಧಿಕಾರ ಕೊಟ್ಟು ಆಕೆಯನ್ನು ಅಪಮಾನಿಸುತ್ತಿದ್ದೀರಾ. ಬಿಜೆಪಿಯಲ್ಲಿ ಹೆಣ್ಣು ಮಕ್ಕಳು ಶಾಸಕರು, ಮಂತ್ರಿ ಆಗಿರಲಿಲ್ಲವೇ? ಮಂಡ್ಯದ ಸ್ವಾಭಿಮಾನಿ ಜನ ಹೆಣ್ಣು ಮಗಳು ಸುಮಲತಾ ಅವರ ಕೈ ಹಿಡಿಯಲಿಲ್ಲವೇ ಎಂದ ಅವರು, ಮೋದಿ ಅವರ ಬೇಟಿ ಬಚಾವೋ-ಬೇಟಿ ಪಡಾವೋ ಘೋಷಣೆಗೆ ನಿಮ್ಮ ಹೇಳಿಕೆ ಅಪಮಾನ ಮಾಡಿದಂತಲ್ಲವೇ ಎಂದು ಪ್ರಶ್ನಿಸಿದರು. ಸಂವಿಧಾನ, ಮಹಿಳಾ ವಿರೋಧಿ ಬೇಜವಾಬ್ದಾರಿ ಹೇಳಿಕೆಯನ್ನು ಎಂಟಿಬಿ ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಜನ ತೀರ್ಪು ಕೊಡ್ತಾರೆ: ಉಪ ಚುನಾವಣೆಯಲ್ಲಿ ಅನರ್ಹರು ಬೇಕಾ. ಸ್ವಾಭಿಮಾನಿಗಳು ಬೇಕಾ ಎಂಬುದನ್ನು ಕ್ಷೇತ್ರದ ಜನ ತೀರ್ಮಾನ ಮಾಡುತ್ತಾರೆ. ಅನರ್ಹತೆ, ಜನತಾ ನ್ಯಾಯಾಲಯ ಎತ್ತಿಹಿಡಿಯುತ್ತೆ ಎಂಬ ವಿಶ್ವಾಸವಿದೆ ಎಂದರು. ಆಡಳಿತ ಪಕ್ಷದವರು ಅಧಿಕಾರಿ ವರ್ಗವನ್ನು ಕೈಗೊಂಬೆ ಮಾಡಿಕೊಂಡು ಉಪ ಚುನಾವಣೆ ನಡೆಸುತ್ತಿದ್ದಾರೆ. ಇಷ್ಟು ವರ್ಷದಿಂದ ರಾಜಕೀಯದಲ್ಲಿರುವ ಎಚ್‌.ವಿಶ್ವನಾಥ್‌, ಉಪ ಚುನಾವಣೆ ವೇಳೆ ಹುಣಸೂರನ್ನು ಹೊಸ ಜಿಲ್ಲೆ ಮಾಡುವ ಬಗ್ಗೆ ಮಾತನಾಡುತ್ತಾರೆ.

ಒಂದೂವರೆ ವರ್ಷ ಶಾಸಕರಾಗಿ ಕ್ಷೇತ್ರದತ್ತ ತಿರುಗಿ ನೋಡದವರ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ. ಅವರ ಹೇಳಿಕೆಗಳಿಗೆ ಹೆಚ್ಚಿನ ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು. ಮಹಿಳಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ಲತಾ, ನಗರ ಉಪಾಧ್ಯಕ್ಷೆ ಸುಜಾತಾರಾವ್‌, ರಾಣಿ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.