ಸ್ತ್ರೀಯರು ಶಿಕ್ಷಣ ಪಡೆದರೂ ಉದ್ಯೋಗಸ್ಥರಾಗಲು ಹಿಂದೇಟು


Team Udayavani, Aug 28, 2019, 3:00 AM IST

stri

ಹುಣಸೂರು: ಮಹಿಳೆಯರು ಹೆಚ್ಚಿನ ಉದ್ಯೋಗ ಗಿಟ್ಟಿಸುವ ಜೊತೆಗೆ ಎಲ್ಲಾ ಕ್ಷೇತ್ರಗಳಿಗೂ ದಾಪುಗಾಲಿಡಬೇಕು. ಇದು ವಿದ್ಯಾರ್ಥಿ ದಿಸೆಯಿಂದಲೇ ಆಗುವುದು ಒಳಿತು ಎಂದು ಮೈಸೂರು ವಿವಿ ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ಮುಖ್ಯಸ್ಥೆ ಪ್ರೊ.ಎಂ.ಇಂದಿರಾ ಸಲಹೆ ನೀಡಿದರು.

ನಗರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಮೈಸೂರು ವಿವಿಯ ಎನ್‌ಎಸ್‌ಎಸ್‌ ಘಟಕದ ಸಹಯೋಗದಲ್ಲಿ ಎನ್‌ಎಸ್‌ಎಸ್‌ ಸುವರ್ಣ ಸಂಭ್ರಮ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಶೇಷ ಉಪನ್ಯಾಸದಲ್ಲಿ “ಸ್ವಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣ’ ವಿಷಯದ ಕುರಿತು ಅವರು ಮಾತನಾಡಿದರು.

ದೊಡ್ಡ ಹೊಡೆತ: ಹೆಣ್ಣುಮಕ್ಕಳು ಪುರುಷರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತಿದ್ದರೂ ಉದ್ಯೋಗಸ್ಥರಾಗುವ ಹಂತದಲ್ಲಿ ಮಹಿಳೆಯರ ಪ್ರಮಾಣ ತೀರ ಕಡಿಮೆಯಿದೆ. ಹೀಗಾಗಿ ಮಹಿಳೆಯರ ಸಬಲೀಕರಣಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಮಹಿಳೆಯರು ಶಿಕ್ಷಣ ಹೊಂದಿದರೂ ಕಡೆಗೆ ಮದುವೆ, ಮಕ್ಕಳು, ಸಂಸಾರವೇ ಅಂತಿಮವೆನ್ನುವಂತೆ ಉದ್ಯೋಗಸ್ಥರಾಗುವುದನ್ನು ಕಡೆಗಣಿಸುತ್ತಿದ್ದಾರೆ ಎಂದು ವಿಷಾದಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತಿತರ ಸಂಸ್ಥೆಗಳ ಮೂಲಕ ಮಹಿಳಾ ಸ್ವಸಹಾಯ ಸಂಘಗಳು ಅಸ್ತಿತ್ವಕ್ಕೆ ಬಂದ ನಂತರ ಮಹಿಳೆಯರಲ್ಲಿ ಉಳಿತಾಯ ಮಹತ್ವ, ಸ್ವ ಉದ್ಯೋಗ, ನಾಯಕತ್ವ ಬೆಳವಣಿಗೆ, ಪ್ರಶ್ನಿಸುವ, ಆರ್ಥಿಕ ಸ್ವಾವಲಂಬನೆ ಮೂಲಕ ಸಬಲೀಕರಣದ ಜೊತೆಗೆ ಹೋರಾಟದ ಮನೋಭಾವ ಬೆಳೆದಿದೆ. ಆದರೂ ಸಹ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆಯಾಗಿದ್ದು, ಯುವಪಡೆ ಇದನ್ನು ಮೆಟ್ಟಿ ಮುಂದೆ ಬರಬೇಕೆಂದು ಕಿವಿಮಾತು ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕ ಸುರೇಶ್‌, ಸ್ವಸಹಾಯ ಸಂಘಗಳ ಸ್ಥಾಪನೆ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಗಣ್ಯರು ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಜ್ಞಾನಪ್ರಕಾಶ್‌, ದೇವರಾಜ ಅರಸು ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟೇಶಯ್ಯ, ಎನ್‌ಎಸ್‌ಎಸ್‌ ಘಟಕದ ಸಂಚಾಲಕ ಡಾ.ಕೆ.ಎಸ್‌.ಭಾಸ್ಕರ್‌, ಅಧ್ಯಾಪಕ ಡಾ.ಆನಂದ್‌, ಐಕ್ಯೂಎಸಿ ಸಂಚಾಲಕ ದೀಪುಕುಮಾರ್‌, ಧರ್ಮಸ್ಥಳ ಯೋಜನೆಯ ರಾಣಿ ಸೇರಿದಂತೆ ನಗರದ ಜ್ಞಾನಧಾರ ಕಾಲೇಜು, ಅರಸು ಕಾಲೇಜು, ಹನಗೋಡು ಪ್ರಥಮದರ್ಜೆ ಕಾಲೇಜು, ಸರಗೂರು, ಎಚ್‌.ಡಿ.ಕೋಟೆ, ಕೆ.ಆರ್‌.ನಗರ, ಬೆಟ್ಟದಪುರ, ಕೊಪ್ಪ, ಸಾಲಿಗ್ರಾಮ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಎನ್ನೆಸ್ಸೆಸ್‌ಗೆ 50 ವರ್ಷ: 50 ಕಾರ್ಯಕ್ರಮ: ಎನ್‌ಎಸ್‌ಎಸ್‌ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಬಿ.ಚಂದ್ರಶೇಖರ್‌ ಮಾತನಾಡಿ, ಎನ್‌ಎಸ್‌ಎಸ್‌ ಆರಂಭವಾಗಿ 50 ವರ್ಷ ಸಂದ ಹಿನ್ನೆಲೆಯಲ್ಲಿ 50 ಕಾರ್ಯಕ್ರಮ ರೂಪಿಸಲಾಗಿದ್ದು, ಎಲ್ಲಾ ಕಾಲೇಜುಗಳಲ್ಲೂ ಸಹ ವಿಭಿನ್ನ ರೀತಿ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಜಾಗೃತಿಗೊಳಿಸಲಾಗುತ್ತಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಮಹಿಳೆಯರಿಗೆ ರಾಜಕೀಯ ಸಬಲೀಕರಣ ಸಿಕ್ಕಿದೆ. ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣದಿಂದ ದೇಶದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳುವಂತಾಗಬೇಕಿದೆ. ಅಭಿವೃದ್ಧಿ ಎನ್ನುವುದು ಕೇವಲ ಒಂದು ಕೈನಿಂದ ಅಥವಾ ಒಂದು ಸಮುದಾಯದಿಂದ ಮಾತ್ರ ಸಾಧ್ಯವಿಲ್ಲ. ಎಲ್ಲರನ್ನೊಳಗೊಂಡ ಜವಾಬ್ದಾರಿಯುತ ನಡೆಯೇ ಸರ್ವರ ಅಭಿವೃದ್ಧಿಗೆ ಪೂರಕ ಮತ್ತು ಪ್ರೇರಕ ಎಂದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.