2 ದಿನದಿಂದ ಕೆಲಸ ಸ್ಥಗಿತ: ಎಲ್ಲೆಡೆ ಕಸದ ರಾಶಿ
Team Udayavani, Nov 4, 2018, 12:36 PM IST
ನಂಜನಗೂಡು: ನಗರದಲ್ಲಿ ಕಳೆದ ಎರಡು ದಿನಗಳಿಂದ ಕಸ ವಿಲೇವಾರಿ ವಾಹನ ಚಾಲಕರು ಕೆಲಸವನ್ನು ಸ್ಥಗಿತಗೊಳಿಸಿರುವುದರಿಂದ ಎಲ್ಲೆಡೆ ಕಸದ ರಾಶಿ ಕಾಣುತ್ತಿದೆ. ನಗರಸಭೆ ವ್ಯಾಪ್ತಿಯಲ್ಲಿ ಕಸವನ್ನು ವಾಹನಗಳ ಮೂಲಕ ಸಾಗಿಸುವ ಚಾಲಕರಿಗೆ ಕಳೆದ 12 ತಿಂಗಳಿಂದ ವೇತನ ನೀಡಿಲ್ಲ. ಹೀಗಾಗಿ ತ್ವರಿತವಾಗಿ ಬಾಕಿ ವೇತನ ಪಾವತಿಸಬೇಕು ಎಂದು ಆಗ್ರಹಿಸಿ ಕೆಲಸವನ್ನು ಸ್ಥಗಿತಗೊಳಿಸಿದ್ದಾರೆ.
ಸಂಧಾನ ಸಭೆ: ಈ ಹಿನ್ನೆಲೆಯಲ್ಲಿ ಕಸ ವಿಲೇವಾರಿ ವಾಹನ ಚಾಲಕರೊಂದಿಗೆ ಸಭೆ ನಡೆಸಿದ ನಗರಸಭೆ ಆಯುಕ್ತ ವಿಜಯ್‌ಕುಮಾರ್ ಹಾಗೂ ಉಪಾಧ್ಯಕ್ಷ ಪ್ರದೀಪ್, ತ್ವರಿತವಾಗಿ ಬಾಕಿ ವೇತನ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು. ಸೋಮವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಸಂಬಳ ಬಿಡುಗಡೆಗೆ ಮನವರಿಕೆ ಮಾಡಿಕೊಡಲಾಗುವುದು.
ಕೂಡಲೇ ತ್ಯಾಜ್ಯ ವಿಲೇವಾರಿ ಕಾರ್ಯ ಕೈಗೊಳ್ಳುವಂತೆ ವಾಹನ ಚಾಲಕರಲ್ಲಿ ಮನವಿ ಮಾಡಿದರು. ಆದರೆ, ಇದಕ್ಕೆ ಬಗ್ಗದ ವಾಹನ ಚಾಲಕರು, ಕಳೆದ ಜೂನ್ ತಿಂಗಳಿನಲ್ಲೂ ಕೂಡ ಇದೇ ರೀತಿ ಭರವಸೆ ನೀಡಲಾಗಿತ್ತು. ಆದರೆ, ಇದುವರೆಗೂ ಕಾರ್ಯಗತವಾಗಿಲ್ಲ. ಬರೀ ಆಶ್ವಾಸನೆಗಳ ಮೂಲಕ ಕಾಲಹರಣ ಮಾಡಲಾಗುತ್ತಿದೆ. ಹೀಗಾಗಿ ಬಾಕಿ ವೇತನ ನೀಡಿದರೆ ಮಾತ್ರ ಕೆಲಸ ಪ್ರಾರಂಭಿಸುವುದಾಗಿ ಪಟ್ಟು ಹಿಡಿದರು.
ಹೀಗಾಗಿ ಸಂಧಾನ ಸಭೆ ವಿಫಲವಾಯಿತು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಡಿ.ಆರ್. ರಾಜು, ಆರೋಗ್ಯಾಧಿಕಾರಿ ಅರ್ಚನಾ, ಮುಖಂಡ ಕಮಲೇಶ್ ಹಾಗೂ ವಾಹನ ಚಾಲಕರಾದ ಕುಮಾರ್, ಪ್ರಸನ್ನ, ಬಾಲು, ಕೃಷ್ಣ , ಬಸವರಾಜು, ಬಸವಣ್ಣ, ಶಿವು, ಗಣೇಶ, ಮಣಿ, ಬಸವ, ನಂಜುಂಡಸ್ವಾಮಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.