“ಕೆಲಸ ಮಾಡ್ಕೊಡೋದು ಅಧಿಕಾರಿಗಳ ಕರ್ತವ್ಯ’


Team Udayavani, Jan 26, 2017, 12:26 PM IST

mys2.jpg

ಮೈಸೂರು: ಸಾರ್ವಜನಿಕರ ಕೆಲಸ ಮಾಡಿಕೊಡಲು ಅಲೆದಾಡಿಸುವುದು, ವಿಳಂಬ ಮಾಡುವುದು ಕೂಡ ಭ್ರಷ್ಟಾಚಾರ. ಕೆಲಸ ಮಾಡುವುದು ಅಧಿಕಾರಿಗಳ ಕರ್ತವ್ಯ. ಸಾಮಾಜಿಕ ಹೊಣೆಗಾರಿಕೆ ಅರಿತು, ಜನಪರ ಕಾಳಜಿ ಇಟ್ಟುಕೊಂಡು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ನಗರದ ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬುಧವಾರ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಭೆಗೆ ಬರುವಾಗ ಸಂಪೂರ್ಣ ಮಾಹಿತಿ ಇಟ್ಟುಕೊಂಡು ಬರಬೇಕು. ಬೆರಳ ತುದಿಯಲ್ಲಿ ಮಾಹಿತಿ ಇರ ಬೇಕು. ಸಭೆಗೆ ಬಂದು ಮಾಹಿತಿ ಇಲ್ಲ ಎಂದು ಹೇಳುವುದು ನಾಚಿಕೆಗೇಡು. ಸರ್ಕಾರ ಬಹಳ ಕಾರ್ಯ ಕ್ರಮ ಜಾರಿಗೆ ತಂದಿದೆ.

ವಿಶೇಷವಾಗಿ ಬಡವರು, ಮಹಿಳೆಯರು, ರೈತರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ಸಾವಿರಾರು ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಅದನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದರು. ಮೈಸೂರಿಗೆ ಬಂದಾಗ ಸಾವಿರಾರು ಜನ ತನಗೆ ಅರ್ಜಿ ಕೊಡುತ್ತಾರೆ. ಇದು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿಲ್ಲ ಎಂದರ್ಥವಾಗುತ್ತದೆ. ಜನ ಸಂಪರ್ಕ ಸಭೆ ಮಾಡಿ, ಸ್ಥಳೀಯ ಮಟ್ಟದಲ್ಲಿ ಸಮಸ್ಯೆ ಇತ್ಯರ್ಥ ಮಾಡಬೇಕೆಂದು ಡೀಸಿ, ಸಿಇಒ ಅವರ ಸಭೆಯಲ್ಲೂ ಸಹ ಸೂಚನೆ ನೀಡಿದ್ದೇನೆ ಎಂದರು. 

ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕೆಲಸ ಮಾಡುವುದಲ್ಲ, ಅದಕ್ಕಾಗಿ ಗುಮಾಸ್ತರು ಇರುತ್ತಾರೆ. ಮೇಲುಸ್ತುವಾರಿ ಮಾಡುವುದು ಅಧಿಕಾರಿಗಳ ಕೆಲಸ ಎಂದು ಅವರು ತಿಳಿಸಿದರು. ಆಹಾರ ಇಲಾಖೆಯಲ್ಲಿ ಯಾರೋ ಮಾಡಿದ ತಪ್ಪಿಗಾಗಿ, ಜಿಲ್ಲೆಯ 40 ಸಾವಿರ ಜನರಿಗೆ ಪಡಿತರ ಸಿಕ್ಕಿಲ್ಲ. ವಾಸ್ತವವನ್ನು ಅರ್ಥ ಮಾಡಿಕೊಂಡು, ಪ್ರಾಯೋಗಿಕ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು, ತ್ವರಿತವಾಗಿ ಇತ್ಯರ್ಥ ಮಾಡ ಬೇಕು ಎಂದು ಸೂಚಿಸಿದರು.

ಖಾಸಗಿ ಜಮೀನಿನಲ್ಲಿ ಅರಣ್ಯ ಅಧಿಕಾರಿಗಳು ಮರಗಳನ್ನು ಬೆಳೆಸಿದ್ದಾರೆ. ಒಪ್ಪಂದದಂತೆ ಅರ್ಧಭಾಗವನ್ನು ಸರ್ಕಾರಕ್ಕೆ ತೆಗೆದುಕೊಂಡು ರೈತರಿಗೆ ಜಮೀನು ಬಿಟ್ಟುಕೊಡದೇ ಇರುವುದು ಒಂದು ರೀತಿಯ ಕಿರುಕುಳ. ವಿವೇಚನೆಯನ್ನು ಬಳಸಿ ಇಂತಹ ಸಮಸ್ಯೆಯನ್ನು ನಿವಾರಿಸಬೇಕು ಎಂದು ಹೇಳಿದರು.

ಕಾಂಗ್ರೆಸ್‌ಗೆ ಅಭ್ಯರ್ಥಿ ಕೊರತೆ ಇಲ್ಲ: ಮುಖ್ಯಮಂತ್ರಿ
ಮೈಸೂರು:
ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ ಪಕ್ಷದಲ್ಲಿ ಅಭ್ಯರ್ಥಿಯ ಕೊರತೆ ಇಲ್ಲ. ಮೊದಲು ಚುನಾವಣೆ ಘೋಷಣೆಯಾಗಲಿ, ಆನಂತರ ಅಭ್ಯರ್ಥಿ ಹೆಸರು ಪ್ರಕಟಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ವಿಧಾನಪರಿಷತ್‌ ವಿರೋಧಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ, ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.

ರೈತರಿಗೂ ವೇತನ ಆಯೋಗ ರಚಿಸುವಂತೆ ಮನವಿ: ಸರ್ಕಾರಿ ನೌಕರರಿಗೆ ರಚಿಸಿರುವಂತೆ ರೈತರಿಗೂ ವೇತನ ಆಯೋಗ ರಚಿಸಬೇಕೆಂದು ಶಾಸಕ ಕೆ.ಎಸ್‌. ಪುಟ್ಟಣ್ಣಯ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ನಗರದ ಟಿ.ಕೆ. ಲೇಔಟ್‌ನಲ್ಲಿರುವ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಸರ್ಕಾರ ರೈತರ ಪರ ಬಜೆಟ್‌ ಮಂಡಿಸಬೇಕು.

25 ಸಾವಿರ ಕೋಟಿ ಅನುದಾನವನ್ನು ರೈತರಿಗೆ ನೀಡಬೇಕೆಂದು ಮನವಿ ಸಲ್ಲಿಸಿದ್ದೇನೆ ಎಂದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ರೈತರ ಪರವಾದ ಯೋಜನೆಗಳನ್ನು ಜಾರಿ ಮಾಡಬೇಕು. ಉದ್ಯಮಿಗಳ ಮೇಲೆ ಈ ಬಾರಿ ಹೆಚ್ಚಿನ ತೆರಿಗೆವಿಧಿಸಬೇಕು. ಇದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಮಸೀದಿಯಲ್ಲಿ ಚುನಾವಣೆ ನಡೆಸಬೇಡಿ: ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ನಗರದ ಮುಸ್ಲಿಂ ಸಮುದಾಯದ ಮುಖಂಡರು ಮಸೀದಿಗಳಲ್ಲಿ ಚುನಾವಣೆ ನಡೆಸದಂತೆ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ. ಒಂದು ವೇಳೆ ಮಸೀದಿ ಗಳಲ್ಲಿ ಚುನಾವಣೆ ನಡೆದರೆ ಧಾರ್ಮಿಕ ಪುಣ್ಯ ಕ್ಷೇತ್ರಗಳಲ್ಲಿ ತಮ್ಮ ಅಸ್ತಿತ್ವ ಕಳೆದು ಕೊಂಡು ರಾಜಕೀಯ ಮನೋಭಾವ ಉಂಟಾಗುತ್ತದೆ. ಮಸೀದಿಗಳಲ್ಲಿ ಚುನಾವಣೆ ನಡೆಸುವ ಹುನ್ನಾರದ ಹಿಂದೆ ಸಚಿವ ತನ್ವೀರ್‌ ಸೇs… ಕೈವಾಡವಿದೆ. ಹಾಗಾಗಿ ತಾವು ಅವರ ಮನವೊಲಿಸಬೇಕು ಎಂದು ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು.

ಹಿಂದೆ ಸಚಿವರಾಗಿ, ಉಪ ಮುಖ್ಯ ಮಂತ್ರಿಯಾಗಿದ್ದಾಗ ಹಿಂದುಳಿದವರು, ದಲಿತರ ಬಗ್ಗೆ ಕಾಳಜಿ ತೋರದ ಈಶ್ವರಪ್ಪ ಅವರಿಗೆ ಅಧಿಕಾರವಿಲ್ಲದಾಗ ಹಿಂದುಳಿದವರು, ದಲಿತರ ಬಗ್ಗೆ ಕಾಳಜಿ ಉಕ್ಕಿ ಹರಿಯುತ್ತಿದೆ. ನಾನು ಅಹಿಂದ ವರ್ಗಗಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದರೆ, ಈಶ್ವರಪ್ಪ ಅಲ್ಪ ಸಂಖ್ಯಾತರನ್ನು ಬಿಟ್ಟು ಬರೀ ಹಿಂದ ಹಿಡಿದುಕೊಂಡು ಹೊರಟಿದ್ದಾರೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.