ಕಾರ್ಮಿಕ ಹಕ್ಕುಗಳನ್ನು ಹತ್ತಿಕ್ಕುವ ಕೆಲಸ
Team Udayavani, May 2, 2018, 3:20 PM IST
ಹುಣಸೂರು: ನಗರದಲ್ಲಿ ವಿಶ್ವ ಕಾರ್ಮಿಕ ದಿನದ ಅಂಗವಾಗಿ ಸಿಐಟಿಯು ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಮಿಕರು ಮೆರವಣಿಗೆ ನಡೆಸಿದರು. ನಗರದ ಮುನೇಶ್ವರ ಕಾವಲ್ ಮೈದಾನದಿಂದ ಹೊರಟ ಮೆರವಣಿಗೆಯಲ್ಲಿ ಕನಿಷ್ಠವೇತನ ಜಾರಿಗೊಳ್ಳಲಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ, ಎಲ್ಲ ನೌಕರರನ್ನು ಕಾಯಂಗೊಳಿಸಿ, ಕಾರ್ಮಿಕರ ಹಕ್ಕುಗಳನ್ನು ರಕ್ಷಣೆ ಮಾಡಿ ಎಂಬಿತ್ಯಾದಿ ಘೋಷಣೆ ಮೊಳಗಿಸಿದರು.
ಆನಂತರ ಬಸ್ ನಿಲ್ದಾಣದ ಮುಂಭಾಗದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಗಮನ ಸೆಳೆದರು. ನಗರಸಭೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಸಿಐಟಿಯು ತಾಲೂಕು ಅಧ್ಯಕ್ಷ ಬಸವರಾಜು ವಿ.ಕಲ್ಕುಣಿಕೆ ಮಾತನಾಡಿ, ನರೇಂದ್ರ ಮೋದಿ ಸರಕಾರ ಬಂದ ನಂತರ ಕಾರ್ಮಿಕ ಹಕ್ಕುಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ.
ಮಾಲಿಕರೊಂದಿಗೆ ಶಾಮೀಲಾಗಿ ಕಾರ್ಮಿಕರ ನ್ಯಾಯಯುತ ಹಕ್ಕುಗಳನ್ನು ಪಡೆಯದಂತೆ ಹುನ್ನಾರ ನಡೆಸುತ್ತಿದೆ. ಖಾಸಗಿ ಕಂಪನಿ ಮಾಲಿಕರಿಗೆ ಆದ್ಯತೆ ನೀಡಿ ಕಾರ್ಮಿಕರನ್ನು ಅತಂತ್ರ ಸ್ಥಿತಿಗೆ ತಳ್ಳುತ್ತಿದೆ. ಕನಿಷ್ಠ ಕಾರ್ಮಿಕ ವೇತನ ಜಾರಿಗೊಳಿಸುವಲ್ಲಿ ಹಾಗೂ ಕಾಯಂಗೊಳಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಫಲಗೊಂಡಿವೆ. ಬೃಹತ್ ಕಂಪನಿ ಮಾಲಿಕರ ಪರವಾಗಿ ಕಾನೂನು ಜಾರಿಗೆ ತಂದು ಅನ್ಯಾಯ ಮಾಡುತ್ತಿವೆ ಎಂದು ಆರೋಪಿಸಿದರು.
ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ವಕೀಲ ಜಗದೀಶ್ ಸೂರ್ಯ ಮಾತನಾಡಿ, ಕಳೆದ 40 ವರ್ಷಗಳಿಂದ ಕೆಲಸ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತರನ್ನು ಹಾಗೂ 10 ವರ್ಷಗಳಿಂದ ಬಿಸಿಯೂಟ ಕೆಲಸ ಮಾಡುತ್ತಿರುವ ನೌಕರರಿಗೆ ಕನಿಷ್ಠ ವೇತನವನ್ನೂ ನೀಡದೆ ಸರಕಾರಗಳು ಅನ್ಯಾಯವೆಸಗುತ್ತಿವೆ. ಈಗಲಾದರೂ ಎಚ್ಚೆತ್ತುಕೊಂಡು ಅವರನ್ನು ಕಾಯಂ ಮಾಡಬೇಕೆಂದು ಒತ್ತಾಯಿಸಿದರು.
ಕಾರ್ಮಿಕ ದಿನಾಚರಣೆಯಲ್ಲಿ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಮಂಗಳಗೌರಿ, ಕಾರ್ಯದರ್ಶಿ ಪುಷ್ಪ, ಪಂಚಾಯ್ತಿ ನೌಕರರ ಸಂಘದ ಅಧ್ಯಕ್ಷ ದಿನೇಶ್, ಮುನಿಸ್ವಾಮಿ, ಆರುಗಂ, ಬಿಸಿಯೂಟ ನೌಕರರ ಸಂಘದ ಮೀನಾ, ಮಂಜುಳ, ಮಾರಿಸ್ಪಿನ್ನರ್ ಕಾರ್ಖಾನೆ ನೌಕರರ ಸಂಘದ ಹಂಸ, ಮಲ್ಲಿಕಾರ್ಜುನ್, ಸುರೇಶ್, ಪ್ರಾಂತ ರೈತ ಸಂಘದ ಸಿದ್ದೇಗೌಡ, ಚಿಕ್ಕಣ್ಣೇಗೌಡ, ಡಿವೈಎಫ್ಐ ಮಹೇಶಕುಮಾರ್, ಎಸ್‌ಎಫ್ಐ ಕುಮಾರಸ್ವಾಮಿ ಮತ್ತಿರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಮಗಳ-ಅಳಿಯಗೆ ಮುಡಾ ಸೈಟ್: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು
Actor Darshan: ಇಂದು ನಟ ದರ್ಶನ್ ಮೈಸೂರಿಗೆ ಆಗಮನ
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
MUST WATCH
ಹೊಸ ಸೇರ್ಪಡೆ
Shivamogga: ಖ್ಯಾತ ಫೋಟೋ ಜರ್ನಲಿಸ್ಟ್ ಗೆ ಹೃದಯಾಘಾತ, ನಿಧನ
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
MUDA: ಮಗಳ-ಅಳಿಯಗೆ ಮುಡಾ ಸೈಟ್: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು
CLP Meeting: ನಾಳೆ ಶಾಸಕಾಂಗ ಪಕ್ಷದ ಸಭೆ: ಗರಿಗೆದರಿದ ಕುತೂಹಲ
BBK11: ಮಾತನ್ನೇ ಬಂಡವಾಳ ಆಗಿಸಿಕೊಂಡಿದ್ದ ಪ್ರಬಲ ಸ್ಪರ್ಧಿ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.