ವ್ಯಸನಮುಕ್ತ ಸಮಾಜಕ್ಕಾಗಿ ಸಹಕರಿಸಿ
Team Udayavani, Jun 12, 2022, 1:00 PM IST
ಕೆ.ಆರ್.ನಗರ: ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡಲು ಸರ್ಕಾರ ಹಮ್ಮಿಕೊಳ್ಳುವ ಎಲ್ಲಾ ಕಾರ್ಯಕ್ರಮ ಗಳಿಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ತಹಶೀಲ್ದಾರ್ ಎಸ್.ಸಂತೋಷ್ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಸರ್ವೇಕ್ಷಣಾ ಘಟಕ ಮತ್ತು ತಾಲೂಕು ಆರೋಗ್ಯ ಇಲಾಖೆಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಪಟ್ಟಣದ ಆಲ್ಫಾ ಪದವಿ ಪೂರ್ವ ಕಾಲೇಜಿನ ಬಳಿ ನಡೆದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹದಿಹರೆಯದ ಯುವಕರು ದುಶ್ಚಟಗಳಿಂದ ದೂರವಿದ್ದು, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವದರ ಜತೆಗೆ ಇತರ ರಿಗೂ ಈ ಬಗ್ಗೆ ಮನವರಿಕೆ ಮಾಡಿಕೊಡ ಬೇಕು ಎಂದ ತಹಸೀಲ್ದಾರರು ಆರೋಗ್ಯವಂತ ಸಮಾಜದಿಂದ ಮಾತ್ರ ಸದೃಢ ದೇಶವನ್ನು ಕಟ್ಟಲು ಸಾಧ್ಯವಾಗಲಿದೆ ಎಂದರು.
ಸಲಹೆ ಪಾಲಿಸಿ: ದುಶ್ಚಟಗಳಿಗೆ ದಾಸರಾಗಿ ಮಾರಕ ಕಾಯಿಲೆಗಳಿಗೆ ತುತ್ತಾಗಿ ಸಂಕಟ ಅನುಭವಿಸುವ ಬದಲು ಅವುಗಳಿಂದ ಕಡ್ಡಾಯವಾಗಿ ದೂರವಿದ್ದು, ಇತರರಿಗೆ ಮಾದರಿಯಾಗಬೇಕೆಂದು ಸಲಹೆ ನೀಡಿದ ಎಸ್.ಸಂತೋಷ್, ಧೂಮಪಾನ, ಮದ್ಯಪಾನಗಳಿಂದ ದೇಶದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರು ಸಾವಿಗೀಡಾಗುತ್ತಿದ್ದು, ಇದನ್ನು ತಪ್ಪಿಸಲು ಸರ್ಕಾರ ಇಂತಹ ಹಲವು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಎಲ್ಲರೂ ಮುನ್ನೆಚ್ಚರಿಕೆ ವಹಿಸಿ ಆರೋಗ್ಯವಂತರಾಗಿ ಬದುಕಬೇಕು ಎಂದು ಅವರು ಸಲಹೆ ನೀಡಿದರು.
ಆಲ್ಫಾ ಕಾಲೇಜು ಬಳಿಯಿಂದ ಹೊರಟ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಜಾಗೃತಿ ಜಾಥಾವು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ತಾಪಂ ಇಒ ಕೆ.ಸತೀಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಆರ್.ಮಹೇಂದ್ರಪ್ಪ, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಎಂ.ಎಸ್. ನಾಗೇಂದ್ರ, ಆಲ್ಫಾ ಕಾಲೇಜಿನ ಅಧ್ಯಕ್ಷ ರವಿಕುಮಾರ್, ಕಾರ್ಯ ದರ್ಶಿ ಸುಬ್ರಹ್ಮಣ್ಯ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷ ಣಾಧಿಕಾರಿ ಕೆ.ವಿ.ರಮೇಶ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ.ರೇಖಾ, ನಿರೀಕ್ಷಕರಾದ ಮಂಜುನಾಥ್, ಭರತ್ ರಾವ್, ಮಹೇಶ್, ಆರೋಗ್ಯ ಸುರಕ್ಷಾಧಿಕಾರಿಗಳಾದ ಡಿ.ಭವಾನಿ, ಲಕ್ಷ್ಮೀಬಾಯಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.