ಗ್ರಾಹಕರ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಬಿ.ನಾರಾಯಣಪ್ಪ
Team Udayavani, Mar 15, 2022, 7:01 PM IST
ಪಿರಿಯಾಪಟ್ಟಣ: ಗ್ರಾಹಕರ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದ್ದು ಅವುಗಳನ್ನು ಮೊಟಕುಗೊಳಿಸದಂತೆ ಸಂರಕ್ಷಿಸಲು ಗ್ರಾಹಕರ ವೇದಿಕೆ ಸಹಕರಿಸಲಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಬಿ.ನಾರಾಯಣಪ್ಪ ತಿಳಿಸಿದರು.
ತಾಲ್ಲೂಕಿನ ಮುತ್ತೂರು ಗ್ರಾಮದ ಗಿರಿಜನ ಆಶ್ರಮ ಶಾಲೆಯಲ್ಲಿ ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಗ್ರಾಮ ಪಂಚಾಯತ್ ಮುತ್ತೂರು ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಹಕರ ಹಕ್ಕುಗಳನ್ನು ಮೊಟಕುಗೊಳಿಸದಂತೆ ಸಂರಕ್ಷಿಸಲು ಗ್ರಾಹಕರ ಚಳುವಳಿ ಹುಟ್ಟಿ ಪ್ರತಿವರ್ಷ ಮಾ.15 ರಂದು ವಿಶ್ವ ಗ್ರಾಹಕರ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ, ಯಾವುದೇ ವಸ್ತುಗಳ ಮಾರಾಟ ಸಂದರ್ಭ ಸೇವಾ ನ್ಯೂನತೆ ಕೊರತೆ ಇದ್ದರೆ ಗ್ರಾಹಕರ ವೇದಿಕೆಗೆ ದೂರು ನೀಡಿ ಪರಿಹಾರ ಕಂಡುಕೊಳ್ಳಬಹುದು ಎಂದರು.
ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕಿ ಕುಮುದ ಶರತ್ ಮಾತನಾಡಿ ಶಾಲಾ ಮಕ್ಕಳಿಗೆ ಅರಿವು ಮೂಡಿಸಿದರೆ ಪೋಷಕರು ಹಾಗೂ ಸಾರ್ವಜನಿಕ ವಲಯದಲ್ಲಿ ಜಾಗೃತಿ ಮೂಡುತ್ತದೆ ಎಂಬ ಉದ್ದೇಶದಿಂದ ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ ಸೇವಾ ನ್ಯೂನತೆ ಕಾಯ್ದೆಯಡಿ ವ್ಯಾಪಾರ ಸಂದರ್ಭ ದೋಷಗಳು ಕಂಡು ಬಂದಾಗ ಪ್ರತಿಯೊಬ್ಬ ಗ್ರಾಹಕರಿಗೂ ಪ್ರಶ್ನಿಸುವ ಹಕ್ಕಿದ್ದು ಗ್ರಾಹಕರ ವೇದಿಕೆಗೆ ದೂರು ದಾಖಲಿಸಬಹುದು, ಯಾವುದೇ ವಸ್ತುಗಳ ತಯಾರಿಕೆ ವಿತರಣೆ ಹಾಗೂ ಮಾರುಕಟ್ಟೆ ಸಂದರ್ಭ ನ್ಯೂನತೆಗಳು ಕಂಡುಬಂದರೆ ಹಿಂಜರಿಯದೆ ಗ್ರಾಹಕರ ಹಕ್ಕುಗಳ ವೇದಿಕೆ ಮುಖಾಂತರ ಪರಿಹಾರ ಕಂಡುಕೊಳ್ಳಬೇಕು ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಜಾಗೃತರಾದರೆ ಮಾರಾಟ ವ್ಯವಸ್ಥೆಯಲ್ಲಿನ ನ್ಯೂನ್ಯತೆಗಳನ್ನು ತಪ್ಪಿಸಬಹುದು ಎಂದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕೆ.ಚಂದ್ರಮೌಳಿ, ತಾ.ಪಂ ಇಒ ಸಿ.ಆರ್.ಕೃಷ್ಣಕುಮಾರ್, ಆಹಾರ ಇಲಾಖೆ ಶಿರಸ್ತೇದಾರ್ ಸಣ್ಣಸ್ವಾಮಿ ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಉಪಾಧ್ಯಕ್ಷ ಕಾಂತರಾಜು ಮಾತನಾಡಿದರು.
ಈ ಸಂದರ್ಭ ಕಾನೂನು ಮಾಪನಶಾಸ್ತ್ರ ಇಲಾಖೆ ಹುಣಸೂರು ವಿಭಾಗದ ನಿರೀಕ್ಷಕ ಕೆ.ನಂಜುಂಡಯ್ಯ, ಬಿಇಒ ವೈ.ಕೆ ತಿಮ್ಮೆಗೌಡ, ಸಿಡಿಪಿಒ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ಮುತ್ತೂರು ಗ್ರಾ.ಪಂ ಅಧ್ಯಕ್ಷೆ ಎಂ.ವಿ ಜ್ಯೋತಿ, ಉಪಾಧ್ಯಕ್ಷ ಅಭಿಲಾಷ್, ಆಹಾರ ಇಲಾಖೆ ನಿರೀಕ್ಷಕ ಮಂಜುನಾಥ್, ಗಿರಿಜನ ಆಶ್ರಮ ಶಾಲೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮತ್ತು ತಾಲ್ಲೂಕಿನ ವಿವಿಧೆಡೆಯ ಪಿಎಸಿಸಿಎಸ್ ಗಳ ಸಿಇಒ ಸೆರಿದಂತೆ ಮತ್ತಿತರರು ಹಾಜರಿದದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.