ಜಾಕೀರ್ ಮನೆಯಲ್ಲಿ ವರಮಹಾಲಕ್ಷ್ಮೀ ವ್ರತ!
Team Udayavani, Aug 5, 2017, 12:33 PM IST
ಮೈಸೂರು: ಧರ್ಮಗಳ ಮೇಲಾಟದಿಂದ ಸಮಾಜದಲ್ಲಿ ಸಾಮರಸ್ಯ ಕದಡುತ್ತಿರುವ ಈ ದಿನಗಳಲ್ಲಿ ಅಂತರ ಧರ್ಮೀಯ ವಿವಾಹವಾಗಿರುವ ದಂಪತಿಯೊಬ್ಬರು ತಮ್ಮ ಮನೆಯಲ್ಲಿ ವರಮಹಾಲಕ್ಷ್ಮೀ ವ್ರತ ಆಚರಣೆ ಮಾಡುವ ಮೂಲಕ ಸಮಾಜಕ್ಕೆ ಸಾಮರಸ್ಯದ ಸಂದೇಶ ಸಾರಿದ್ದಾರೆ. ಮೈಸೂರಿನ ಗೋಪಾಲಸ್ವಾಮಿ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಮಮತ ಹಾಗೂ ಕಸಾಪ ನಗರ ಪ್ರಧಾನ ಕಾರ್ಯದರ್ಶಿಯಾಗಿರುವ ಜಾಕೀರ್ ಹುಸೇನ್ ಅವರ ಮನೆಯಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ವ್ರತ ಆಚರಣೆ ನಡೆದಿದೆ.
ಪರಸ್ಪರ ಪ್ರೀತಿಸಿ 16 ವರ್ಷಗಳ ಹಿಂದೆ ಅಂತರ ಧರ್ಮೀಯ ವಿವಾಹವಾಗಿರುವ ಶ್ರೀರಾಂಪುರದ ಶಿವಪುರದವರಾದ ಮಮತ-ಮೈಸೂರು ತಾಲೂಕು ಕೋಟೆಹುಂಡಿಯ ಜಾಕೀರ್ ಹುಸೇನ್ ಅವರ ಮನೆಯಲ್ಲಿ ಕಳೆದ 13 ವರ್ಷಗಳಿಂದಲೂ ವರಮಹಾಲಕ್ಷ್ಮೀ ವ್ರತ ಆಚರಿಸಿಕೊಂಡು ಬರಲಾಗುತ್ತಿದೆ. ಇಷ್ಟು ಮಾತ್ರವಲ್ಲ, ಇವರ ಮನೆಯಲ್ಲಿ ಹಿಂದೂ ಹಬ್ಬಗಳು, ಮುಸ್ಲಿಂ ಹಬ್ಬಗಳೆರಡನ್ನೂ ಆಚರಿಸಿಕೊಂಡು ಬರಲಾಗುತ್ತಿದೆ. ಈ ದಂಪತಿಗೆ 8ನೇ ತರಗತಿ ಓದುತ್ತಿರುವ ಮಗಳು ಸಾನು, 3ನೇ ತರಗತಿ ಓದುತ್ತಿರುವ ಮಗ ಅರ್ಷದ್ ಬೇಗ್ ಇದ್ದು, ನಗರದ ಎಲೆತೋಟದ ಬಳಿಯಿರುವ ಸೇಂಟ್ ಮೇರಿಸ್ ಶಾಲೆಯಲ್ಲಿ ಓದಿಸುತ್ತಿದ್ದಾರೆ.
ಯುಗಾದಿ, ಗೌರಿ-ಗಣೇಶ ಹಬ್ಬ, ಆಯುಧಪೂಜೆ, ದೀಪಾವಳಿ ಆಚರಣೆಯ ಜತೆಗೆ ಬಕ್ರೀದ್, ರಂಜಾನ್ ಹಬ್ಬಗಳನ್ನೂ ಆಚರಣೆ ಮಾಡುತ್ತಾ ಹಬ್ಬಗಳ ಸಂದರ್ಭದಲ್ಲಿ ಸ್ನೇಹಿತರನ್ನು ಮನೆಗೆ ಕರೆದು ಔತಣ ನೀಡುತ್ತಾ ಅನ್ಯೋನ್ಯವಾಗಿದ್ದಾರೆ ಈ ದಂಪತಿ. ಈ ಹಿಂದೆ ಇನ್ಸುರೆನ್ ಮಾರ್ಕೆಟಿಂಗ್ ಕೆಲಸ ಮಾಡುತ್ತಿದ್ದ ಜಾಕೀರ್ ಹುಸೇನ್, ಇದೀಗ ಆ ಕೆಲಸವನ್ನು ಬಿಟ್ಟು ನಗರ ಕಸಾಪ ಅಧ್ಯಕ್ಷ ಕೆ.ಎಸ್.ಶಿವರಾಮ್ ಜತೆ ಸೇರಿ ಸಂಪೂರ್ಣವಾಗಿ ಕನ್ನಡ ಚಳವಳಿ ಸೇರಿದಂತೆ ಸಾಮಾಜಿಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಶುಕ್ರವಾರ ಬೆಳಗ್ಗೆ 4 ಗಂಟೆಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, ಸ್ನಾನ ಮಾಡಿದ ನಂತರ ಮನೆಯಲ್ಲಿ ಲಕ್ಷ್ಮೀ ವಿಗ್ರಹವನ್ನು ಪ್ರತಿಷ್ಠಾಪಿಸಿ, ಎಂಟುಬಗೆಯ ಹೂವು, ಎಂಟು ಬಗೆಯ ಹಣ್ಣುಗಳನ್ನು ದೇವಿಗೆ ಅರ್ಪಿಸಿದ್ದಾರೆ. ಒಬ್ಬಟ್ಟು ಸೇರಿದಂತೆ ಹಬ್ಬದ ಅಡುಗೆ ಮಾಡಿ 30 ರಿಂದ 40 ಮಂದಿ ಸ್ನೇಹಿತರಿಗೆ ಹಬ್ಬದ ಊಟ ಬಡಿಸಿ ಧನ್ಯತೆ ಮೆರೆದಿದ್ದಾರೆ. ಧರ್ಮ-ಧರ್ಮಗಳ ನಡುವೆ ನಾವೇ ಮೇಲು ಎಂಬ ಕಿತ್ತಾಟ ನಡೆಯುತ್ತಿರುವ ಈ ದಿನಗಳಲ್ಲಿ ಅಂತರ ಧರ್ಮೀಯ ವಿವಾಹವಾಗಿರುವ ಈ ದಂಪತಿ, ಒಂದು ಧರ್ಮಕ್ಕೆ ಮತಾಂತರ ಆಗದೆ ಇಬ್ಬರ ಧಾರ್ಮಿಕ ಆಚರಣೆಗಳನ್ನೂ ಮಾಡುತ್ತಾ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಈ ಬಗ್ಗೆ ಉದಯವಾಣಿಯೊಂದಿಗೆ ಮಾತನಾಡಿದ ಜಾಕೀರ್ ಹುಸೇನ್, ಹಿಂದೂ ಹುಡುಗಿಯನ್ನು ಪ್ರೇಮಿಸಿ ಮದುವೆಯಾಗಿ ನನ್ನ ಧರ್ಮಕ್ಕೆ ಮತಾಂತರ ಮಾಡಿಕೊಳ್ಳುವುದು ದೊಡ್ಡದಲ್ಲ, ಆಕೆಯ ನಿಲುವಿಗೂ ಬೆಲೆ ಕೊಡಬೇಕು. ಸಮಾಜವನ್ನು ಬೆಸೆಯುವ ಕೆಲಸ ಆಗಬೇಕಿದೆ. ಎಲ್ಲರೂ ಕೂಡಿ ಸಹಬಾಳ್ವೆ ಮಾಡಿದರೆ ಭಾರತೀಯ ಸಂಸ್ಕೃತಿಯನ್ನು ಎತ್ತಿಹಿಡಿಯಬಹುದು. ಸಾಮರಸ್ಯದಿಂದ ಜೀವನ ಸಾಗಿಸಿದರೆ ಭಾರತೀಯರಾಗಿದ್ದಕ್ಕೂ ಸಾರ್ಥಕ ಎನ್ನುತ್ತಾರೆ ಜಾಕೀರ್‌ಹುಸೇನ್.
* ಗಿರೀಶ್ ಹುಣಸೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.