Mysore; ಲೋಕಸಭೆ ಮುಗಿದ ಕೂಡಲೇ ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ: ಸಿದ್ದರಾಮಯ್ಯ
Team Udayavani, May 24, 2024, 1:29 PM IST
ಮೈಸೂರು: ಲೋಕಸಭೆ ಚುನಾವಣೆ ಮುಗಿದ ಕೂಡಲೇ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಬಿಬಿಎಂಪಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಗೆ ಚುನಾವಣೆ ನಡೆಸಲು ನಾವು ತಯಾರಿದ್ದೇವೆ. ಲೋಕಸಭೆ ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ಚುನಾವಣೆ ಮಾಡುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಮೊದಲು ಕ್ಷೇತ್ರ ಪುನರ್ ವಿಂಗಡಣೆ ಆಗುತ್ತದೆ. ನಂತರ ಮೀಸಲಾತಿ ಪ್ರಕಟಿಸುತ್ತೇವೆ ಎಂದರು.
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ, ಎರಡು ಬಾರಿ ಪ್ರಧಾನಿಗೆ ಪತ್ರ ಬರೆದಿದ್ದೇನೆ. ಆದರೆ ಈವರೆಗೆ ಯಾವುದೇ ಉತ್ತರ ಬಂದಿಲ್ಲ. ಪ್ರಧಾನಿ ಕಚೇರಿಗೆ ಪತ್ರ ಬರೆದರೆ ಉತ್ತರ ಬಂದೇ ಬರುತ್ತದೆ ಎನ್ನುವ ಅಭಿಪ್ರಾಯ ನಿಮ್ಮ ತಪ್ಪು ತಿಳುವಳಿಕೆ. ಹಾಗಂತ ಪ್ರಧಾನಿ ಮೋದಿ ಸೆಲೆಕ್ಟಿವ್ ಆಗಿದ್ದಾರೆಂದು ನಾನು ಹೇಳಲ್ಲ. ಒಬ್ಬ ಸಿಎಂ ಪ್ರಧಾನಿಗೆ ಪತ್ರ ಬರೆದರೆ ಉತ್ತರ ಕೊಡಬೇಕಿತ್ತು. ಆದರೆ ಅವರು ಉತ್ತರ ಕೊಡುವ ಕೆಲಸ ಮಾಡಿಲ್ಲ. ಯಾಕೆ ಕೊಟ್ಟಿಲ್ಲ ಎಂಬುದನ್ನು ನೀವು ಅವರನ್ನೇ ಕೇಳಿ. ಬಿಜೆಪಿಯ ಪ್ರಹ್ಲಾದ್ ಜೋಷಿಯನ್ನು ಕೇಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕುಟುಂಬಕ್ಕೆ ಎಲ್ಲಾ ಗೊತ್ತಿದೆ: ಡಿ.ಕೆ.ಶಿವಕುಮಾರ್ ವಿಚಾರಣೆಗೆ ಒಳಪಡಿಸಿ ಎಂಬ ಮಾಜಿ ಸಿಎಂ ಎಚ್.ಡಿ.ಕೆ. ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿ ಡಿಕೆಶಿ ಪರ ಬ್ಯಾಟ್ ಬೀಸಿದ ಅವರು, ಪ್ರಜ್ವಲ್ ಮೇಲೆ ರೇಪ್, ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳಿವೆ. ಈ ವಿಚಾರವನ್ನು ದಿಕ್ಕು ತಪ್ಪಿಸಲು ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಹೆಸರು ಹೇಳುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಅಪರಾಧಿ ಅಲ್ಲ ಆರೋಪಿ ಅಂತ ಹೇಳಿದ್ದಾರೆ. ನಾನೂ ಅದನ್ನೇ ಹೇಳುತ್ತೇನೆ. ನಾನು ಆರೋಪಿ ಅಂತಲೇ ಹೇಳುತ್ತಿರುವುದು ಎಂದರು.
ದೇವೇಗೌಡರ ಕುಟುಂಬದಿಂದ ಪ್ರಜ್ವಲ್ ಹೊರಹಾಕುವ ವಿಚಾರಕ್ಕೆ ಮಾತನಾಡಿ, ದೇವೇಗೌಡರು ಹಾಗೂ ಅವರ ಮನೆಯವರಿಗೆ ಗೊತ್ತಿಲ್ಲದೇ ಮನೆಯಿಂದ ಹೋಗಿದ್ದಾನಾ? ಪ್ರಜ್ವಲ್ ಅವರ ಕುಟುಂಬದವರ ಸಂಪರ್ಕದಲ್ಲಿ ಇಲ್ಲವಾ? ಪ್ರಜ್ವಲ್ ಪರ ವಿಚಾರಕ್ಕೆ ಹೋದಾಗ ನನ್ನ ಮಗ ಎಂದಿದ್ದರು. ಆ ಹೇಳಿಕೆ ಅವರ ಸಂಪರ್ಕದಲ್ಲಿ ಇದ್ದ ಹಾಗೆ ಅಲ್ವ? ಪ್ರಜ್ವಲ್ ವಿಚಾರ ಅವರ ಕುಟುಂಬಕ್ಕೆ ಎಲ್ಲವೂ ಗೊತ್ತಿದೆ ಎಂದರು.
ಯತೀಂದ್ರಗೆ ಪರಿಷತ್ ಟಿಕೆಟ್ ವಿಚಾರಕ್ಕೆ ಮಾತನಾಡಿ, ನಾನು ವಿಧಾನಸಭೆಗೆ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೆ. ಹೈಕಮಾಂಡ್ ಕೋಲಾರ ಬೇಡ ವರುಣದಿಂದ ಸ್ಪರ್ಧೆ ಮಾಡಿ ಅಂತ ಹೇಳಿದ್ದರು, ಆಗ ಯತೀಂದ್ರ ಅಲ್ಲಿ ಶಾಸಕರಾಗಿದ್ದರು. ಸೀಟು ಬಿಟ್ಟುಕೊಡಿ ಮುಂದೆ ನಿಮ್ಮನ್ನ ಎಂಎಲ್ ಸಿ ಮಾಡುತ್ತೇವೆಂದು ಹೈಕಮಾಂಡ್ ಯತೀಂದ್ರಗೆ ಹೇಳಿದ್ದರು. ಈಗ ಅವರು ಏನು ಮಾಡುತ್ತಾರೆಂದು ಗೊತ್ತಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.