ಆಸ್ಪತ್ರೆ ಅವ್ಯವಸ್ಥೆಗೆ ಜಿಪಂ ಅಧ್ಯಕ್ಷ ತರಾಟೆ


Team Udayavani, Jan 12, 2019, 6:13 AM IST

m3-aspatre.jpg

ಹುಣಸೂರು: ಪಟ್ಟಣದ ದೇವರಾಜ ಅರಸು ಸಾರ್ವಜನಿಕ ಆಸ್ಪತ್ರೆಗೆ ಜಿಪಂ ಹಂಗಾಮಿ ಅಧ್ಯಕ್ಷ ಸಾ.ರಾ.ನಂದೀಶ್‌ ದಿಢೀರ್‌ ಭೇಟಿ ನೀಡಿ, ಅಲ್ಲಿನ ಅವ್ಯವಸ್ಥೆ ಕಂಡು ವೈದ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಪರಿಶೀಲನೆ ವೇಳೆ ವಾರ್ಡ್‌ಗಳು ಗಬ್ಬು ನಾರುತ್ತಿದ್ದವು. ಮಹಿಳೆಯರ ಶೌಚಗೃಹಗಳಿಗೆ‌ ಬಾಗಿಲು ಇರಲಿಲ್ಲ. ಇಡೀ ಆಸ್ಪತ್ರೆಯ ವಾರ್ಡ್‌ಗಳ ಕಿಟಕಿಗಳಲ್ಲಿ ಹರಿದು ಚಿಂದಿಯಾದ ಸೊಳ್ಳೆ ಪರದೆಗಳು ನೇತಾಡುತ್ತಿದ್ದವು. 

ಅಧ್ಯಕ್ಷರ ಭೇಟಿಯ ಅವಧಿಯಲ್ಲಿ ರೋಗಿಗಳು ಸ್ವತ್ಛತೆಯ ಕೊರತೆಯ ಬಗ್ಗೆ ದೂರು ನೀಡಿದರು. ನಗರದ ಗೃಹಿಣಿ ರೇವತಿ ಮಾತನಾಡಿ, ವೈದ್ಯರು ಉತ್ತಮ ಸೇವೆ ನೀಡುತ್ತಿದ್ದಾರೆ. ಆದರೆ, ಇಡೀ ಆಸ್ಪತ್ರೆಯಲ್ಲಿ ಸ್ವತ್ಛತೆ ಕೊರತೆ ಕಾಡುತ್ತಿದೆ. ರಾತ್ರಿ ಸೊಳ್ಳೆಗಳ ಕಾಟದಿಂದ ರೋಗಿಗಳು ನರಳುವಂತಾಗಿದೆ. ಫ್ಯಾನ್‌ಗಳು ತಿರುಗುವುದಿಲ್ಲ ಎಂದು ದೂರಿದರೆ, ಕಾಂತರಾಜು, ಸರ್‌ ಇಲ್ಲಿನ ಕಿಟಕಿಗಳಿಗೆ ಸೊಳ್ಳೆ ಪರದೆ ಇಲ್ಲ, ಗಾಜು ಒಡೆದಿದೆ, ಶೌಚಾಲಯಕ್ಕೆ ಬಾಗಿಲ್ಲ ಎಂದು ಅವಲತ್ತುಕೊಂಡರು.

ಅಧ್ಯಕ್ಷರು, ದೂರವಾಣಿ ಮೂಲಕ ಆಡಳಿತಾಧಿಕಾರಿ ಡಾ.ಕೃಷ್ಣಹಾಂಡರನ್ನು ಸಂಪರ್ಕಿಸಿ, ಆಸ್ಪತ್ರೆಯಲ್ಲಿ ಕಿಟಕಿಗಳಿಗೆ ಸೊಳ್ಳೆ ಪರದೆ ಹಾಕಿಸುವಷ್ಟು ಕೂಡ ಶಕ್ತಿಯಿಲ್ಲವೇ? ಬೆಡ್‌ಗಳನ್ನು ಬದಲಾಯಿಸಿಲ್ಲ? ದಿನ ವಾರ್ಡ್‌ಗಳಿಗೆ ಭೇಟಿ ನೀಡುತ್ತೀರಾ? ಎಂದು ಪ್ರಶ್ನಿಸಿದಾಗ, ನೂತನವಾಗಿ ಆಸ್ಪತ್ರೆ ಕಟ್ಟಡ ಮಂಜೂರಾಗಿದ್ದು, 10 ತಿಂಗಳಲ್ಲಿ ನೂತನ ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದು ಶಾಸಕರು ತಿಳಿಸಿದ್ದಾರೆ ಎಂದರು.

ವಾರದ ಗಡುವು: ಈ ಮಾತಿಗೆ ಆಕ್ರೋಶಗೊಂಡ ಅಧ್ಯಕ್ಷರು, ಸೊಳ್ಳೆ ಪರದೆ ಹಾಕಿಸಬೇಡಿ ಎಂದು ಶಾಸಕರು ಹೇಳಿದ್ದಾರೇನ್ರೀ? ವಿನಾಕಾರಣ ಶಾಸಕರನ್ನು ಎಳೆದುತಂದು ಅವರ ಮೇಲೆ ಆರೋಪ ಹೋರಿಸುತ್ತೀರಾ? ಇನ್ನೊಂದು ವಾರದೊಳಗೆ ಎಲ್ಲಾ ಕಿಟಿಕಿಗಳಿಗೂ ಪರದೆ ಹಾಕಿಸಿ, ನಾನು ಮತ್ತೆ ಭೇಟಿ ನೀಡುತ್ತೇನೆ ಎಂದು ಎಚ್ಚರಿಸಿದರು.

ಬಳಿಕ ಮಾತನಾಡಿದ ಸಾ.ರಾ.ನಂದೀಶ್‌, ಉಪವಿಭಾಗ ಕೇಂದ್ರವಾಗಿರುವ ಈ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸ್ಟಾಫ್‌ ನರ್ಸ್‌ಗಳ ಕೊರತೆ ಇದೆ. ಅಲ್ಲದೇ ಆಡಳಿತಾಧಿಕಾರಿಯ ಬೇಜವಾಬ್ದಾರಿ ವರ್ತನೆ ಕಾಣುತ್ತಿದೆ. ವಿನಾಕಾರಣ ಶಾಸಕರನ್ನು ಎಳೆದು ತರುತ್ತಿದ್ದಾರೆ. ಹೀಗಾಗಿ ಅಧಿಕಾರಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚಿಸುತ್ತೇನೆ.

ಆರೋಗ್ಯ ರಕ್ಷಣಾ ಸಮಿತಿಯವರು ಮೂಲಸೌಕರ್ಯಗಳ ಬೇಡಿಕೆ ಕುರಿತು ಜಿಪಂಗೆ ಮನವಿ ಸಲ್ಲಿಸಿದಲ್ಲಿ ಅವಶ್ಯವಿರುವ ಸೌಲಭ್ಯ ಒದಗಿಸಲು ಸಿದ್ಧ  ಎಂದರು. ಈ ವೇಳೆ ವೈದ್ಯ ಡಾ.ಸಚ್ಚಿದಾನಂದಮೂರ್ತಿ, ಮುಖಂಡರಾದ ಶಿವಣ್ಣ, ಡಿ.ಕುಮಾರ್‌ ಇತರರಿದ್ದರು. 

ಟಾಪ್ ನ್ಯೂಸ್

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.