ಬಸವಸಾಗರ ಜಲಾಶಯದಿಂದ 1.85 ಲಕ್ಷ ಕ್ಯೂಸೆಕ್ ನೀರು ನದಿಗೆ
Team Udayavani, Sep 6, 2019, 5:13 PM IST
ನಾರಾಯಣಪುರ: ಬಸವಸಾಗರ ಜಲಾಶಯದ ಕ್ರಸ್ಟ್‌ಗೇಟ್ ತೆರದು ಕೃಷ್ಣಾ ನದಿಗೆ ನೀರು ಹರಿಬಿಡಲಾಯಿತು.
ನಾರಾಯಣಪುರ: ಬಸವಸಾಗರ ಜಲಾಶಯದ 18 ಕ್ರಸ್ಟ್‌ಗೇಟ್ ತೆರೆದು ಗುರುವಾರ ಸಂಜೆ 1.85 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ. ಗುರುವಾರ ಸಂಜೆ 7:00ಕ್ಕೆ ಒಳಹರಿವು 1.80 ಲಕ್ಷ ಕ್ಯೂಸೆಕ್ ಏರಿಕೆಯಾದ ಹಿನ್ನೆಲೆಯಲ್ಲಿ ಜಲಾಶಯ ಗರಿಷ್ಠ ಮಟ್ಟಕ್ಕೂ ಮೀರಿ ಬರುತ್ತಿರುವ ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ ಎಂದು ಅಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಶಂಕರ ನಾಯ್ಕೋಡಿ ತಿಳಿಸಿದ್ದಾರೆ.
ಮಹಾರಾಷ್ಟದ ಕೋಯ್ನಾ, ಕೃಷ್ಣಾ ಹಾಗೂ ಅದರ ಉಪನದಿಗಳಾದ ವೇದಗಂಗಾ, ದೂದಗಂಗಾ ಸೇರಿದಂತೆ ರಾಜ್ಯದ ಘಟಪ್ರಭಾ, ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ಹೀಗಾಗಿ ಕೃಷ್ಣಾ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಆಲಮಟ್ಟಿ, ನಾರಾಯಣಪುರ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಈಗಾಗಲೇ ಎರಡು ಜಲಾಶಯಗಳು ಸಂಪೂರ್ಣ ಭರ್ತಿಯಾಗಿವೆ. ಅಣೆಕಟ್ಟುಗಳ ಗರಿಷ್ಠ ಮಟ್ಟಕ್ಕಿಂತಲೂ ಹೆಚ್ಚಾಗಿ ಬರುತ್ತಿರುವ ಹಿನ್ನೀರನ್ನು ಕೃಷ್ಣಾ ನದಿ ಪಾತ್ರಕ್ಕೆ ಹರಿಬಿಡಲಾಗುತ್ತಿದೆ. ನಾಳೆವರೆಗೆ ಜಲಾಶಯಕ್ಕೆ ಒಳಹರಿವು ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ಪ್ರವಾಹ ಮುನ್ಸೂಚನೆ: ಬಸವಸಾಗರಕ್ಕೆ ಒಳಹರಿವು ಏರಿಕೆಯಾಗಿದ್ದರಿಂದ ಜಲಾಶಯಕ್ಕೆ ಹೆಚ್ಚುವರಿಯಾಗಿ ಬರುವ ಅಷ್ಟು ನೀರನ್ನು ನದಿ ಪಾತ್ರಕ್ಕೆ ಹರಿಸಲಾಗುತ್ತಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ನದಿಗೆ ನೀರು ಬಿಡುವ ಬಗ್ಗೆ ನಿರಂತರವಾಗಿ ಮಾಹಿತಿ ರವಾನಿಸುತ್ತಿದ್ದೇವೆ. ನದಿ ತೀರದ ಗ್ರಾಮಗಳ ಜನ, ಜಾನುವಾರುಗಳು ನೀರಿಗೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಲ್ಲದೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಕಾರ್ಯನಿರ್ವಾಹಕ ಇಂಜಿನಿಯರ್ ಶಂಕರ ನಾಯ್ಕೋಡಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.