ಕೃಷ್ಣಾ ಅಚ್ಚು ಕಟ್ಟು ಭಾಗದ ಕಾಲುವೆಗಳಿಗೆ ನೀರು
ಫಲಾನುಭವಿ ಜಿಲ್ಲೆಗಳ 5.5 ಲಕ್ಷ ಹೆಕ್ಟೇರ್ ಜಮೀನುಗಳಿಗೆ ಚಾಲು ಬಂದ್ ಪದ್ಧತಿಯಲ್ಲಿ ಪೂರೈಕೆ
Team Udayavani, Dec 2, 2019, 12:44 PM IST
ಬಸವರಾಜ ಎಂ. ಶಾರದಳ್ಳಿ
ನಾರಾಯಣಪುರ: ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯ ಎರಡನೇ ಅವಧಿ ಹಿಂಗಾರು ಹಂಗಾಮಿನ ಬೆಳೆಗಳಿಗೆ ಕಾಲುವೆ ಜಾಲಗಳ ಮೂಲಕ ಡಿ. 1ರಿಂದ ನೀರು ಹರಿಸಲು ಆರಂಭಿಸಲಾಗಿದೆ. ರಾಜ್ಯದ ಬೃಹತ್ ನೀರಾವರಿ ಯೋಜನೆಗಳಲ್ಲಿ ಇದು ಕೂಡ ಒಂದಾಗಿದ್ದು, ನೀರಾವರಿ ಯೋಜನೆ ಫಲಾನುಭವಿ ಜಿಲ್ಲೆಗಳ 5.5 ಲಕ್ಷ ಹೆಕ್ಟೇರ್ ಜಮೀನು ನೀರಾವರಿಗೆ ಒಳಪಡುತ್ತದೆ. ಈ ನೀರಾವರಿ ಯೋಜನೆಗಾಗಿ ಬಸವಸಾಗರ ಜಲಾಶಯದ ಎಡದಂಡೆ, ಬಲದಂಡೆ ಮುಖ್ಯ ಕಾಲುವೆಗಳು ಸೇರಿದಂತೆ ರಾಂಪುರ ಏತ ನೀರಾವರಿ ಕಾಲುವೆ ಜಾಲಗಳ ಮೂಲಕ ಕೃಷ್ಣಾ ಅಚ್ಚುಕಟ್ಟು ಭಾಗದ ಜಮೀನುಗಳಿಗೆ ನೀರು ಹರಿಸಲಾಗುತ್ತಿದೆ.
2019-20ನೇ ಸಾಲಿನ ಎರಡನೇ ಹಂಗಾಮಿಗೆ ನೀರು ಒದಗಿಸುವ ಉದ್ದೇಶದಿಂದ ನ.17ರಂದು ಆಲಮಟ್ಟಿ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ನಡೆದ ಸಲಹಾ ಸಮಿತಿ ಸಭೆ ನಿರ್ಣಯದಂತೆ ಹಾಗೂ ಉಭಯ (ನಾರಾಯಣಪುರ, ಆಲಮಟ್ಟಿ) ಜಲಾಶಯಗಳಲ್ಲಿ ನೀರಿನ ಲಭ್ಯತೆ ಆಧಾರದ ಮೇಲೆ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ನಾರಾಯಣಪುರ ಎಡದಂಡೆ ಹಾಗೂ ಬಲದಂಡೆ ಸೇರಿದಂತೆ ರಾಂಪುರ ಏತ ನೀರಾವರಿ ಕಾಲುವೆ ಜಾಲಗಳಿಗೆ ಚಾಲು ಬಂದ (ವಾರಾಬಂದಿ) ಪದ್ಧತಿ ನೀರು ಹರಿಸಲು ನಿರ್ಣಯ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಕಾಲುವೆಗಳ ಮೂಲಕ 14 ದಿನ ನೀರು ಹರಿಸುವುದು ನಂತರದ 8 ದಿನ ನಿಲ್ಲಿಸುವ ಪದ್ಧತಿ ಜಾರಿಗೊಳಿಸಲಾಗಿದೆ. ಮಾ. 20ರ ವರೆಗೆ ನೀರು ಹರಿಸಲಾಗುತ್ತದೆ. ಹೀಗಾಗಿ ಒಟ್ಟು ನೀರು ಬಿಡುವ ದಿನಗಳನ್ನು ಗಣನೆಗೆ ತೆಗೆದುಕೊಂಡರೆ 70 ದಿನ ಕಾಲುವೆಗಳಲ್ಲಿ ನೀರು ಹರಿಸಿದರೆ 40 ದಿನ ನೀರು ನಿಲ್ಲಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.