ಆಮೆವೇಗದಲ್ಲಿ ಸಾಗಿದೆ ಸೇತುವೆ ಕಾಮಗಾರಿ
ಹಳ್ಳ ಬಂದರೆ ವಾಹನ ಸವಾರರ ಗೋಳಾಟ
Team Udayavani, Sep 19, 2019, 3:23 PM IST
ನರೇಗಲ್ಲ: ಸಮೀಪದ ಮಾರನಬಸರಿ ಗ್ರಾಮದ ಬಳಿಯಿರುವ ಕಲ್ಲಹಳ್ಳಕ್ಕೆ ನಿರ್ಮಿಸಲಾಗುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿ ಆಮೆ ವೇಗದಲ್ಲಿ ಸಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ.
ಮಾರನಬಸರಿ, ಜಕ್ಕಲಿ, ರೋಣ, ಹಾಲಕೆರೆ, ಯಲಬುರ್ಗಾ, ಕೊಪ್ಪಳ ಸೇರಿದಂತೆ ಅನೇಕ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಿಸಬೇಕೆಂದು ಗ್ರಾಮಗಳ ಜನರ ಹಲವು ವರ್ಷಗಳ ಬೇಡಿಕೆಯಾಗಿತ್ತು. ಅದರಂತೆ ಸರ್ಕಾರ ಕರ್ನಾಟಕ ರಸ್ತೆ ಅಭಿವೃದ್ಧಿ ಕಾರ್ಪೆರೇಷನ್ (ಕೆಆರ್‌ಡಿಸಿಎಲ್) ವತಿಯಿಂದ 1.74 ಲಕ್ಷ ರೂ. ಗಳಲ್ಲಿ 2019 ಫೆಬ್ರುವರಿದಿಂದ ಸೇತುವೆ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ.
ಗುತ್ತಿಗೆ ಪಡೆದ ಆಂಧ್ರದ ಕಂಪನಿಯು ಆಮೆಗತಿಯಲ್ಲಿ ಕಾಮಗಾರಿ ನಡೆಸಿದ್ದರಿಂದ ಜನರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ. ಮಳೆಗೆ ಹಳ್ಳ ಕೊಚ್ಚಿರುವುದರಿಂದ ಬಸ್ ಹಾಗೂ ಖಾಸಗಿ ವಾಹನ, ಚಕ್ಕಡಿ, ಎತ್ತುಗಳಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಮಾರನಬಸರಿ, ಹಾಲಕೆರೆ, ಯಲಬುರ್ಗಾ, ಕೊಪ್ಪಳಕ್ಕೆ ನಿತ್ಯ ಹೊರಡುವ ಬಸ್‌ಗಳು ನರೇಗಲ್ಲ ಮಾರ್ಗವಾಗಿ ಸಂಚಾರಿಸುತ್ತವೆ. ಆದರೆ, ದಿನಂಪ್ರತಿ 4 ರಿಂದ 5 ಸಾವಿರಕ್ಕೂ ಅಧಿಕ ಜನರು ತಾಲೂಕು ಕೇಂದ್ರ ರೋಣ, ಗಜೇಂದ್ರಗಡಕ್ಕೆ ಓಡಾಡುತ್ತಾರೆ. ಸೇತುವೆ ಕಾಮಗಾರಿಯು ಕುಂಟುತ್ತಾ ಸಾಗಿರುವುದರಿಂದ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.