ಬಿತ್ತನೆ ಶೇಂಗಾ ಪಡೆಯಲು ಪರದಾಟ

ಟೋಕನ್‌ ವಿತರಿಸಿ 20ದಿನವಾದರೂ ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ವಿತರಣೆ ಮಾಡ್ತಿಲ್ಲ

Team Udayavani, Jul 13, 2019, 12:02 PM IST

13-July-16

ನಾಯಕನಹಟ್ಟಿ: ಕೃಷಿ ಇಲಾಖೆ ವಿತರಿಸುವ ಬಿತ್ತನೆ ಶೇಂಗಾ ಬೀ ಪಡೆಯಲು ಇಲ್ಲಿನ ರೈತ ಸಂಪರ್ಕ ಕೇಂದ್ರದ ಎದುರು ಜಮಾಯಿಸಿದ್ದ ರೈತರು.

ನಾಯಕನಹಟ್ಟಿ: ಶೇಂಗಾ ಬಿತ್ತನೆ ಬೀಜ ಪಡೆಯಲು ರೈತರು ರಾತ್ರಿಯಿಡೀ ನಿದ್ದೆಗೆಟ್ಟು ಸರತಿ ಸಾಲಿನಲ್ಲಿ ನಿಂತು ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಕೃಷಿ ಇಲಾಖೆ ಒಂದು ತಿಂಗಳು ವಿಳಂಬವಾಗಿ ಬಿತ್ತನೆ ಬೀಜ ಮಾರಾಟ ಆರಂಭಿಸಿರುವುದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಇಲ್ಲಿನ ಪ್ರದೇಶದಲ್ಲಿ ಒಂದು ವಾರದಿಂದ ಸಣ್ಣ ಪ್ರಮಾಣದ ಮಳೆ ಆರಂಭವಾಗಿದೆ. ಹೀಗಾಗಿ ರೈತರು ಬಿತ್ತನೆ ಬೀಜ ಪಡೆಯುವ ಧಾವಂತದಲ್ಲಿದ್ದಾರೆ. ಬಿತ್ತನೆ ಶೇಂಗಾ ಕಾಯಿ ಪಡೆದ ನಂತರ ಸಿಪ್ಪೆಯಿಂದ ಬೀಜಗಳನ್ನು ಬೇರ್ಪಡಿಸಲು ಸಾಕಷ್ಟು ಸಮಯ ಬೇಕು. ಆದರೆ ಇಲಾಖೆ ತಡವಾಗಿ ಬಿತ್ತನೆ ಬೀಜ ವಿತರಿಸುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ.

20 ದಿನಗಳ ಹಿಂದೆ ಕೃಷಿ ಇಲಾಖೆ ದಾಖಲೆ ಪರಿಶೀಲಿಸಿ ಟೋಕನ್‌ ನೀಡಿದ್ದರೂ ಇಲ್ಲಿಯವರೆಗೂ ಬಿತ್ತನೆ ಬೀಜವನ್ನು ವಿತರಿಸಿಲ್ಲ. ಕಳೆದ 15 ದಿನಗಳಿಂದ ರೈತರು ರೈತ ಸಂಪರ್ಕ ಕೇಂದ್ರಕ್ಕೆ ಅಲೆಯಬೇಕಾದ ಪರಿಸ್ಥಿತಿ ಉಂಟಾಗಿದೆ. ಕಳೆದ ವರ್ಷ ನಾಯಕನಹಟ್ಟಿ ಹೋಬಳಿಯ ಸುಮಾರು 21 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಬಿತ್ತನೆಯಾಗಿತ್ತು. ಹೀಗಾಗಿ ಸುಮಾರು 14 ಸಾವಿರ ರೈತರಿಗೆ ಶೇಂಗಾ ವಿತರಣೆಯಾಗಬೇಕಿದೆ.

ಪ್ರತಿ ನಿತ್ಯ 150 ರಿಂದ 200 ಜನರಿಗೆ ಮಾತ್ರ ಬಿತ್ತನೆ ಶೇಂಗಾ ಬೀಜ ವಿತರಣೆ ಮಾಡಲಾಗುತ್ತಿದೆ. ಇದೇ ಆಮೆ ವೇಗದಲ್ಲಿ ವಿತರಿಸಿದರೆ ಒಂಭತ್ತು ಗ್ರಾಪಂ ವ್ಯಾಪ್ತಿಯ ಎಲ್ಲ ರೈತರು ಬಿತ್ತನೆ ಬೀಜ ಪಡೆಯಲು ಕನಿಷ್ಠ ಒಂದು ತಿಂಗಳಾದರೂ ಬೇಕು. ಇದೀಗ ರೈತ ಸಂಪರ್ಕ ಕೇಂದ್ರಗಳಿರುವ ತಳಕು, ನಾಯಕನಹಟ್ಟಿ, ಚಳ್ಳಕೆರೆ, ಕಸಬಾ ಹಾಗೂ ಪರಶುರಾಂಪುರ ಹೋಬಳಿ ಕೇಂದ್ರಗಳಲ್ಲಿ ಮಾತ್ರ ಬಿತ್ತನೆ ಶೇಂಗಾ ವಿತರಣೆ ಮಾಡಲಾಗುತ್ತಿದೆ. ಬಿತ್ತನೆ ಬೀಜ ವಿತರಣೆಯನ್ನು ಆನ್‌ಲೈನ್‌ನಲ್ಲಿ ಮಾಡಲಾಗುತ್ತಿದೆ. ಅದಕ್ಕೆ ಪ್ರೂಟ್ಸ್‌ ತಂತ್ರಾಂಶದಲ್ಲಿ ರೈತರು ಹೆಸರನ್ನು ನೊಂದಾಯಿಸಿರಬೇಕು. ದಾಖಲೆಗಳನ್ನು ಪರಿಶೀಲನೆ ಮಾಡಿ ಬಿತ್ತನೆ ಬೀಜವನ್ನು ರಿಯಾಯತಿ ದರದಲ್ಲಿ ವಿತರಿಸಬೇಕು. ಒಂದೊಂದು ಗ್ರಾಪಂ ವ್ಯಾಪ್ತಿಯ ರೈತರಿಗೆ ಒಂದೊಂದು ದಿನ ವಿತರಿಸುವ ವ್ಯವಸ್ಥೆ ಮಾಡಿದರೆ ಸಮಸ್ಯೆಗೆ ಸ್ಪಲ್ಪ ಪರಿಹಾರ ದೊರೆಯಬಹುದು.

ಡೋಂಟ್ವರಿ, ಬಿತ್ತನೆ ಶೇಂಗಾ ಬೀಜದ ದಾಸ್ತಾನಿದೆ
ಇದೀಗ ಶೇಂಗಾ ಬಿತ್ತನೆ ಆರಂಭವಾಗಿದೆ. ಬಿತ್ತನೆ ಶೇಂಗಾದ ಸಾಕಷ್ಟು ದಾಸ್ತಾನು ಇದೆ. ಹೀಗಾಗಿ ರೈತರು ಆತಂಕಕ್ಕೆ ಒಳಗಾಗಬೇಕಾಗಿಲ್ಲ. ಮಾರುಕಟ್ಟೆಯಲ್ಲಿ ಬಿತ್ತನೆ ಶೇಂಗಾ ಬೆಲೆ ಹೆಚ್ಚಾಗಿರುವುದರಿಂದ ಕೃಷಿ ಇಲಾಖೆಯಿಂದ ವಿತರಿಸುವ ಬಿತ್ತನೆ ಬೀಜಕ್ಕೆ ಬೇಡಿಕೆ ಹೆಚ್ಚಾಗಿದೆ. ರೈತರ ಸಂಖ್ಯೆ ಜಾಸ್ತಿ ಇರುವುದರಿಂದ ಒತ್ತಡ ಕಡಿಮೆ ಮಾಡಲು ಕೃಷಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ರೈತರು ಆತಂಕಕ್ಕೆ ಒಳಗಾಗದೆ ತಾಳ್ಮೆಯಿಂದ ಬಿತ್ತನೆ ಬೀಜ ಖರೀದಿಸಬೇಕು. ಎಲ್ಲ ರೈತರಿಗೂ ಬಿತ್ತನೆ ಬೀಜ ವಿತರಿಸಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಎನ್‌. ಮಾರುತಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.