ಗಬ್ಬೂರು ನಾಡಕಚೇರಿಯಲ್ಲಿ ನೆಟ್ ವರ್ಕ್ ಸಮಸ್ಯೆ

ಜಾತಿ-ಆದಾಯ ಪ್ರಮಾಣಪತ್ರ, ಇತರೆ ಕೆಲಸ ಕಾರ್ಯಗಳಿಗೆ ಗ್ರಾಮಸ್ಥರ ಅಲೆದಾಟ

Team Udayavani, May 3, 2019, 1:30 PM IST

3-May-21

ದೇವದುರ್ಗ: ಗಬ್ಬೂರು ನಾಡ ಕಚೇರಿ

ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದ ನಾಡ ಕಚೇರಿಯಲ್ಲಿ ಒಂದು ತಿಂಗಳಿನಿಂದ ನೆಟ್ವರ್ಕ್‌ ಸಮಸ್ಯೆ ಎದುರಾಗಿದ್ದು, ಜನರು ಕೆಲಸ, ಕಾರ್ಯಗಳಿಗಾಗಿ ನಿತ್ಯ ಕಚೇರಿಗೆ ಅಲೆದಾಡುವಂತಾಗಿದೆ.

ಸುತ್ತಲಿನ ಹಲವು ಗ್ರಾಮಗಳ ಗ್ರಾಮಸ್ಥರು ಸರ್ಕಾರದ ವಿವಿಧ ಸೌಲಭ್ಯ ಪಡೆಯಲು, ಅರ್ಜಿಗೆ ದಾಖಲಾತಿಗಳನ್ನು ಪಡೆಯಲು ಗಬ್ಬೂರು ನಾಡಕಚೇರಿಯನ್ನೇ ಅವಲಂಬಿಸಿದ್ದಾರೆ. ಆದರೆ ಇಲ್ಲಿ ಪದೇಪದೆ ನೆಟ್ವರ್ಕ್‌ ಸಮಸ್ಯೆ ಎದುರಾಗುತ್ತಿದೆ. ಇದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳು ಸಕಾಲದಲ್ಲಿ ಆಗುತ್ತಿಲ್ಲ. ಇಂತಹ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.

ಪಹಣಿ, ಜಾತಿ, ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ, ವಿಧವಾ ವೇತನ ಸೇರಿ ಇತರೆ ಕೆಲಸಗಳು ಬಂದಾಗಿವೆ. ಹೀಗಾಗಿ ಸುತ್ತಲಿನ ಸುಮಾರು 41 ಹಳ್ಳಿಗಳ ಜನ ದೇವದುರ್ಗಕ್ಕೆ ತೆರಳುವಂತಾಗಿದೆ. ಇಲ್ಲಿನ ಸಮಸ್ಯೆ ಕುರಿತು ತಾಲೂಕು ಆಡಳಿತ ಗಮನಕ್ಕೆ ತರಲಾಗಿದೆ. ಅಧಿಕಾರಿಗಳು ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದೇವೆ ಎಂದು ಹೇಳುತ್ತಾರೆ, ಆದರೆ ಸಮಸ್ಯೆಗೆ ಮುಕ್ತಿ ಇಲ್ಲದಾಗಿದೆ.

ಹಳೆ ಕಟ್ಟಡದಲ್ಲಿ ಕೆಲಸ: ಗಬ್ಬೂರು ನಾಡಕಚೇರಿ ಕಟ್ಟಡ ಹಳೆಯದಾಗಿದ್ದು, ಸಿಮೆಂಟ್ ಉದುರಿ ಬೀಳುತ್ತಿದೆ. ಈ ಹಿಂದೆ ಕಚೇರಿ ಸಿಬ್ಬಂದಿ ಮೇಲೆ ಛತ್ತು ಬಿದ್ದು ಗಾಯಗೊಂಡ ಘಟನೆ ನಡೆದಿವೆ. ಕಟ್ಟಡ ಎಲ್ಲೆಂದರಲ್ಲಿ ಬಿರುಕು ಬಿಟ್ಟಿದೆ. ಮಳೆಗಾಲದಲ್ಲಿ ಕಟ್ಟಡ ಸಂಪೂರ್ಣ ಸೋರುತ್ತದೆ. ಈ ವೇಳೆ ಸಿಬ್ಬಂದಿ ದಾಖಲೆಗಳನ್ನು ರಕ್ಷಿಸಿಕೊಳ್ಳಲು ಹೆಣಗಾಡಬೇಕಾದ ಪರಿಸ್ಥಿತಿ ಇದೆ. ಆದರೂ ತಾಲೂಕು ಆಡಳಿತ ಕಟ್ಟಡ ದುರಸ್ತಿಗೆ ಇಲ್ಲವೇ ಕಚೇರಿ ಸ್ಥಳಾಂತರಕ್ಕೆ ಮುಂದಾಗಿಲ್ಲ. ಸಿಬ್ಬಂದಿ ಭಯದಲ್ಲೇ ಕರ್ತವ್ಯ ನಿರ್ವಹಿಸುವಂತಾಗಿದೆ.

ಬಿಲ್ ವಿಳಂಬ: ನಾಡಕಚೇರಿ ಬಿಎಸ್ಸೆನ್ನೆಲ್ ಬಿಲ್ ಪಾವತಿಸದಿರುವುದರಿಂದ ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಿದ್ದು, ಇದರಿಂದಾಗಿ ನೆಟ್ವರ್ಕ್‌ ಸಮಸ್ಯೆ ಎದುರಾಗಿದೆ ಎನ್ನಲಾಗಿದೆ. ವಿವಿಧ ದಾಖಲಾತಿಗಳು ಪಡೆಯಲು ಅರ್ಜಿದಾರರು ನೀಡಿದ ಹಣ ಎಲ್ಲಿಗೆ ಹೋಯಿತು ಎಂಬ ಪ್ರಶ್ನೆ ಕಾಡುತ್ತಿದೆ. ಕೂಡಲೇ ತಾಲೂಕು ಆಡಳಿತ ನೆಟ್ವರ್ಕ್‌ ಸಮಸ್ಯೆ ಪರಿಹರಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕೆಂದು ದಲಿತ ಮುಖಂಡ ಶಾಂತಕುಮಾರ ಹೊನ್ನಟಗಿ ಆಗ್ರಹಿಸಿದ್ದಾರೆ.

ಗಬ್ಬೂರು ನಾಡಕಚೇರಿಯಲ್ಲಿ ನೆಟ್ವರ್ಕ ಸಮಸ್ಯೆ ಎದುರಾಗಿದ್ದು ಗಮನಕ್ಕೆ ಬಂದಿದೆ. ಮೇಲಾಧಿಕಾರಿಗಳಿಗೆ ತಿಳಿಸಿದ್ದೇನೆ ಜನಸಾಮಾನ್ಯರಿಗೆ ತೊಂದರೆ ಆಗಿದೆ. ಸರಿಪಡಿಸುವ ಕೆಲಸ ಮಾಡಲಾಗುತ್ತದೆ.
••ಮಲ್ಲಿಕಾರ್ಜನ ಅರಕೇರಿ,
ತಹಶೀಲ್ದಾರ್‌

ಟಾಪ್ ನ್ಯೂಸ್

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.