ಸಂತ್ರಸ್ತರಿಗೆ ಮತ್ತೆ ಪ್ರವಾಹ ಭೀತಿ
Team Udayavani, Sep 11, 2019, 12:13 PM IST
ನಿಡಗುಂದಿ: ಹೊಳೆಮಸೂತಿ ಗ್ರಾಮದ ಜಮೀನಿನಲ್ಲಿ ಕಂಡ ಹಾವು.
ನಿಡಗುಂದಿ: ಕಳೆದ ಆಗಸ್ಟ್ ತಿಂಗಳಲ್ಲಿ ಕೃಷ್ಣಾ ನದಿ ಪ್ರವಾಹ ಆವರಿಸಿ ಜನರ ನೆಮ್ಮದಿ ಕಿತ್ತುಕೊಂಡಿದ್ದು ಮರೆಯುವ ಮುನ್ನವೇ ಮತ್ತೆ ನದಿ ಉಕ್ಕೇರಿತ್ತಿರುವ ಪರಿಣಾಮ ಸಂತ್ರಸ್ತರು ಆತಂಕಕ್ಕೀಡಾಗಿದ್ದಾರೆ.
ಮಹಾರಾಷ್ಟ್ರದ ನದಿ ಜಲಾನಯನ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಅಬ್ಬರದಿಂದಾಗಿ ಕೊಯ್ನಾ ಸೇರಿದಂತೆ ನಾನಾ ಜಲಾಶಯ ಸೇರಿ ಕೃಷ್ಣಾ ನದಿ ಪಾತ್ರದ ಕೆಲ ಭಾಗದಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಕೃಷ್ಣಾ ನದಿಗೆ ಲಕ್ಷಾಂತರ ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಆಲಮಟ್ಟಿ ಜಲಾಶಯಕ್ಕೆ ಅಪಾರ ನೀರು ಹರಿದು ಬರುತ್ತಿದೆ. ಮುಂಜಾಗೃತಾ ಕ್ರಮವಾಗಿ ಆಲಮಟ್ಟಿ ಜಲಾಶಯದ ಒಳಹರಿವಿನ ಪ್ರಮಾಣಕ್ಕಿಂತಲೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿ ಬಿಡಲಾಗುತ್ತಿದೆ.
ಆಲಮಟ್ಟಿ ಜಲಾಶಯದ ಮುಂಭಾಗ ಹಾಗೂ ನಾರಾಯಣಪುರ ಜಲಾಶಯ ಹಿನ್ನೀರು ಪ್ರದೇಶಗಳಾದ ನಿಡಗುಂದಿ ಮತ್ತು ಮುದ್ದೇಬಿಹಾಳ ತಾಲೂಕಿನ ಅನೇಕ ಗ್ರಾಮಗಳಲ್ಲಿ ಮತ್ತೆ ಆತಂಕ ಮನೆ ಮಾಡಿದೆ.
ಕೃಷ್ಣೆ ಉಗಮ ಸ್ಥಾನ ಮಹಾರಾಷ್ಟದ ಮಹಾಬಲೇಶ್ವರ, ರತ್ನಗಿರಿ, ಕರಾಡ, ಸಾಂಗ್ಲಿ, ಸಾತಾರ ಜಿಲ್ಲೆಗಳು ಹಾಗೂ ಬೆಳಗಾವಿ ಜಿಲ್ಲೆ ಸೇರಿದಂತೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿದ ಮಳೆಯಿಂದಾಗಿ ಆಲಮಟ್ಟಿ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಗರಿಷ್ಠ 519.60 ಮೀ. ಎತ್ತರದ ಗರಿಷ್ಠ 123.081 ಟಿಎಂಸಿ ಅಡಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಮಂಗಳವಾರ 518.16 ಮೀ. ಎತ್ತರದಲ್ಲಿ 100.051 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. 1,41,000 ಕ್ಯೂಸೆಕ್ ಒಳಹರಿವಿದ್ದು ಸಂಜೆ ವೇಳೆಗೆ 45,000 ಕ್ಯೂಸೆಕ್ ಹೊರ ಹರಿವಿತ್ತು.
ಪ್ರವಾಹದ ಮುನ್ಸೂಚನೆಗಳು ಮತ್ತೆ ಮರುಕಳುಹಿಸುತ್ತಿದೆ. ಕಳೆದ ತಿಂಗಳಷ್ಟೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಬದುಕು ಕಟ್ಟಿಕೊಳ್ಳಲು ಪರದಾಡುತ್ತಿರುವ ಕೃಷ್ಣಾ ತೀರದ ಗ್ರಾಮಸ್ಥರು ಗಣೇಶೋತ್ಸವ ಮುಗಿಯುತ್ತಿದ್ದಂತೆ ಮತ್ತೆ ಪ್ರವಾಹದ ಆತಂಕ ಉಂಟಾಗಿದೆ.
ಹಾವುಗಳ ಭೀತಿ: ನದಿ ಪಾತ್ರದ ಹೊಳೆಮಸೂತಿ ಸೇರಿದಂತೆ ಕೆಲ ಗ್ರಾಮಗಳ ಜಮೀನಿನಲ್ಲಿ ನೀರು ಆವರಿಸುತ್ತಿದೆ. ನೀರಿನಲ್ಲಿ ಹಾವುಗಳು ಹರಿದು ಬರುತ್ತಿವೆ. ಇದರಿಂದ ಜಮೀನಿಗೆ ಹೋಗಲು ಭಯ ಆವರಿಸಿದೆ. ನೀರು ಇಳಿಕೆಯಾಗಿದ್ದು ಇನ್ನೂ ಕೃಷಿ ಚಟುವಟಿಕೆ ನಡೆಸಬೇಕೆಂದರೆ ಮತ್ತೆ ಪ್ರವಾಹ ಭೀತಿ ಕಾಡುತ್ತಿದೆ ಎನ್ನುತ್ತಾರೆ ಹೊಳೆಮಸೂತಿ ಗ್ರಾಮಸ್ಥರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.