ಸರಕು ವಾಹನಗಳಲ್ಲಿ ಪ್ರಯಾಣಿಕರ ನಿಷೇಧ
Team Udayavani, May 17, 2019, 4:56 PM IST
ವಿಜಯಪುರ: ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನಗಳಲ್ಲಿ ನಿಯಮ ಬಾಹಿರವಾಗಿ ಪ್ರಯಾಣಿಕರನ್ನು ಸಾಗಿಸುತ್ತಿರುವುದು ಕಂಡು ಬಂದಿದೆ. ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸುವ ವಾಹನ ಜಪ್ತಿ ಮಾಡಿ ಚಾಲಕರ ಮೇಲೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಸೂಚಿಸಿದ್ದಾರೆ.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿಗದಿತ ಆಸನಗಳಿಗಿಂತ ಹೆಚ್ಚಿನ ಪ್ರಮಾಣದ ಪ್ರಯಾಣಿಕರನ್ನು ತುಂಬುವುದು, ಆಟೋ, ಟಂಟಂನಂತಹ ವಾಹನಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಿಲ್ಲಲೂ ಅವಕಾಶವಿಲ್ಲದೆ ಜೋತು ಬಿದ್ದು ಪ್ರಯಾಣಿಸುವುದು, ಅಪಘಾತಕ್ಕೆ ಕಾರಣವಾಗುತ್ತದೆ. ಆದ್ದರಿಂದ ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಸೂಚಿಸಿದರು.
ಗ್ರಾಮಗಳಿಂದ ಶಾಲಾ-ಕಾಲೇಜಿಗೆ ತೆರಳುವ ಮಕ್ಕಳು ಸರ್ಕಾರಿ ಬಸ್ಸುಗಳಿಗಿಂತ ಖಾಸಗಿ ಆಟೋ, ಟೆಂಪೋಗಳನ್ನು ಹೆಚ್ಚು ಬಳಸುತ್ತಾರೆ. ಆದ್ದರಿಂದ ಶಾಲಾ ಮುಖ್ಯೋಪಾಧ್ಯಾಯರು, ಎಸ್‌ಡಿಎಂಸಿ ಸಮಿತಿ ಪ್ರಮುಖರು ಆಟೋ, ಟೆಂಪೋ ಮಾಲೀಕರಿಗೆ ಶಾಲಾ ಮಕ್ಕಳನ್ನು ತಮ್ಮ ವಾಹನಗಳಲ್ಲಿ ಕರೆದೊಯ್ಯದಂತೆ ಸೂಚನೆ ನೀಡಬೇಕು. ಗ್ರಾಪಂ ಮಟ್ಟದಲ್ಲಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಕೆಲ ರಸ್ತೆಗಳಲ್ಲಿ ಅವೈಜ್ಞಾನಿಕ ವೇಗ ನಿಯಂತ್ರಕ ನಿರ್ಮಿಸಿದ್ದು ಅತಿಯಾದ ಎತ್ತರದ ವೇಗ ನಿಯಂತ್ರಕಗಳಿಂದಲೂ ಅಪಘಾತಗಳು ಸಂಭವಿಸಬಹುದು. ಆದ್ದರಿಂದ ಸಂಬಂಧಿಸಿದವರಿಗೆ ಸೂಚನೆ ನೀಡಿ, ವೈಜ್ಞಾನಿಕ ರೀತಿಯಲ್ಲಿ ಹಂಪ್ ಅಳವಡಿಸಲು ಕ್ರಮ ಕೈಗೊಳ್ಳಿ. ತಿರುವು ರಸ್ತೆಗಳಲ್ಲಿ, ಶಾಲಾ ಮಕ್ಕಳು ಹೆಚ್ಚಾಗಿ ಓಡಾಡುವ ಸ್ಥಳಗಳಲ್ಲಿ ರಸ್ತೆ ಪಕ್ಕದಲ್ಲಿ ಸೂಚನೆ ನೀಡುವ ರಸ್ತೆ ಸೂಚಕ ಅಳವಡಿಸಿ ಗ್ರಾಮೀಣ ಭಾಗದಲ್ಲಿ ಬಸ್ ನಿಲುಗಡೆಗೆ ಅವಕಾಶವಿರುವ ಸ್ಥಳಗಳಲ್ಲಿ ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಸ್ಥಳೀಯ ಶಾಸಕರ ನಿಯಿಂದ ಹಣ ಬಳಸಿಕೊಂಡು ಬಸ್ ನಿಲ್ದಾಣ ನಿರ್ಮಿಸಿ, ಶಾಲಾ ಮಕ್ಕಳಿಗೆ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಿ ಎಂದು ಹೇಳಿದರು.
ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಡಿ.ಆರ್. ಮಂಜುನಾಥ, ಡಿಡಿಪಿಐ ಸಿ.ಪ್ರಸನ್ನಕುಮಾರ, ಡಿಡಿ ಪಿಯು ಶಂಕರ ಅಮಾತೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.