ಪಿಜಿ ಸಿಇಟಿ-ಡಿಸಿಇಟಿ ಪರೀಕ್ಷೆ: ತೀವ್ರ ಕಟ್ಟೆಚ್ಚರಕ್ಕೆ ಸೂಚನೆ
ಪ್ರತಿಯೊಂದು ಕೇಂದ್ರಕ್ಕೂ ವೀಕ್ಷಕರ ನೇಮಕ
Team Udayavani, Jul 19, 2019, 3:59 PM IST
ಕಲಬುರಗಿ: ನಗರದಲ್ಲಿ ಪಿ.ಜಿ. ಸಿಇಟಿ ಹಾಗೂ ಡಿಸಿಇಟಿ ಪರೀಕ್ಷೆಗಳು ಜು. 20 ಹಾಗೂ 21ರಂದು ನಗರದ ಐದು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಯಾವುದೇ ತೊಂದರೆಯಿಲ್ಲದೇ ಸುಸೂತ್ರವಾಗಿ ನಡೆಸಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ. ಶರಣಪ್ಪ ಸತ್ಯಂಪೇಟ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಿಜಿ ಸಿಇಟಿ ಮತ್ತು ಡಿಸಿಇಟಿ ಪರೀಕ್ಷೆಗಳ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಂ.ಟೆಕ್ ಟೈಪ್-ಎ ಪರೀಕ್ಷೆಗೆ 1140, ಎಂಸಿಎ ಪರೀಕ್ಷೆಗೆ 440, ಎಂಬಿಎ ಪರೀಕ್ಷೆಗೆ 1421 ಹಾಗೂ ಡಿಸಿಇಟಿ ಪರೀಕ್ಷೆಗೆ 1440 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದರು.
ಪರೀಕ್ಷಾ ಪ್ರಾಧಿಕಾರದಿಂದ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ಕಳುಹಿಸಲಾಗಿದೆ. ಈ ಐದು ಪರೀಕ್ಷಾ ಕೇಂದ್ರಗಳಿಗೆ ಉಪಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕಾ ಪಾಲಕರು ಹಾಗೂ ವಿಶೇಷ ಜಾಘೃತದಳದ ಸದಸ್ಯರನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರದ ಉಪ ಮುಖ್ಯ ಅಧಿಧೀಕ್ಷಕರು ಕೇಂದ್ರದಲ್ಲಿ ಪೂರ್ವ ಸಿದ್ಧತೆ ಕೈಗೊಳ್ಳಬೇಕಲ್ಲದೇ ಪರೀಕ್ಷಾ ಕೇಂದ್ರದಲ್ಲಿನ ಆಸನ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮತ್ತಿತರ ವ್ಯವಸ್ಥೆ ಖಾತ್ರಿಪಡಿಸಿಕೊಳ್ಳಬೇಕೆಂದರು.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರವೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಜಿರಾಕ್ಸ್ ಮಶೀನ್ ಅಥವಾ ಫ್ಯಾಕ್ಸ್ ಮಶೀನ್ ಇದ್ದಲ್ಲಿ ಅದನ್ನು ಕಡ್ಡಾಯವಾಗಿ ಬಂದ ಮಾಡಿ ಸೀಲ್ ಮಾಡಿ ಇಡಬೇಕು. ಪ್ರತಿಯೊಂದು ಪರೀಕ್ಷಾ ಕೇಂದ್ರಗಳ ಮೇಲುಸ್ತುವಾರಿ ನೋಡಿಕೊಳ್ಳಲು ವೀಕ್ಷಕರನ್ನು ನೇಮಿಸಲಾಗಿದೆ.
ಪರೀಕ್ಷೆ ಸಂದರ್ಭದಲ್ಲಿ ಏನಾದರೂ ಲೋಪದೋಷಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದರು.
ಪರೀಕ್ಷಾ ಕೇಂದ್ರದಲ್ಲಿ ಕೊಠಡಿ ಮೇಲ್ವಿಚಾರಕರು ಸೇರಿದಂತೆ ಅಭ್ಯರ್ಥಿಗಳು ಮೊಬೈಲ್, ಪೇಜರ್, ಬ್ತ್ರ್ಯೂಟೂತ್, ವೈರಲೆಸ್ ಸೆಟ್, ಸ್ಲೈಡ್‌ರೂಲ್ ಕ್ಯಾಲ್ಕುಲೇಟರ್, ವಾಚ್ ಕ್ಯಾಲ್ಕುಲೇಟರ್, ಲಾಗ್ ಪುಸ್ತಕ, ಮಾರ್ಕರ್, ಪಠ್ಯ ಪುಸ್ತಕ, ನಕಲು ಚೀಟಿಗಳು ಸೇರಿದಂತೆ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದರು.
ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ ಹಾಗೂ ಮಾರ್ಗಾಧಿಕಾರಿಗಳು, ಮುಖ್ಯ ಮೇಲ್ವಿಚಾರಕರು ಹಾಗೂ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.