ಸಾರ್ವಜನಿಕ ಆಸ್ಪತ್ರೆಯ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹ
Team Udayavani, Mar 24, 2019, 1:32 PM IST
ಶಿಡ್ಲಘಟ್ಟ: ನಗರದ ಸಾರ್ವಜನಿಕ ಆಸ್ಪತ್ರೆಯ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆಯ(ದಿ.ಪುಟ್ಟಣ್ಣಯ್ಯ ಬಣ) ಪದಾಧಿಕಾರಿಗಳು ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.
ತಾಲೂಕು ಕೇಂದ್ರವಾದ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಸಹಸ್ರಾರು ಮಂದಿ ಚಿಕಿತ್ಸೆಗೆಂದು ಚಿಕಿತ್ಸೆಗೆಂದು ಬರುತ್ತಾರೆ. ಆದರೆ ಆಸ್ಪತ್ರೆಯಲ್ಲಿ ಸಮರ್ಪಕವಾಗಿ ಚಿಕಿತ್ಸೆ ಲಭಿಸುತ್ತಿಲ್ಲವೆಂಬ ದೂರು ಕೇಳಿ ಬರುತ್ತಿದೆ. ಹೆರಿಗೆ ಮತ್ತು ಸ್ಕ್ಯಾನಿಂಗ್ ಮಾಡಲು ಲಂಚ ಪಡೆಯುವ ಸಂಸ್ಕೃತಿ ಬೆಳೆದಿದ್ದು, ಇದಕ್ಕೆ ಕಡಿವಾಣ ಹಾಕಿ ಬಡವರಿಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗುವ ರೋಗಿಗಳಿಗೆ ಕುಡಿಯುವುದಕ್ಕೆ ನೀರಿಲ್ಲ, ಡಯಾಲಿಸಿಸ್ ಮಾಡಿಕೊಳ್ಳುವ ರೋಗಿಗಳು ಕೆಲವೊಮ್ಮೆ ನೀರಿಲ್ಲದೆ ವಾಪಸ್ಸು ಹೋಗಿರುವ ಪ್ರಕರಣಗಳು ಸಹ ಜೊತೆಗೆ ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡಲು ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಪ್ರಾಮಾಣಿಕ ಪ್ರಯತ್ನ: ರೈತ ಸಂಘದ ಪದಾಧಿಕಾರಿಗಳು ನೀಡಿದ ಮನವಿ ಸ್ವೀಕರಿಸಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ಮೂರ್ತಿ, ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ರೀತಿಯ ಸಭೆಗಳನ್ನು ನಡೆಸಲು ಸಾಧ್ಯವಿಲ್ಲ.
ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆಡಳಿತ ವೈದ್ಯಾಧಿಕಾರಿ ಡಾ.ವಾಣಿ ಅವರೊಂದಿಗೆ ಸಮಾಲೋಚನೆ ನಡೆಸಿ ನೀತಿಸಂಹಿತೆ ಮುಗಿದ ಬಳಿಕ ಆರೋಗ್ಯ ರಕ್ಷಾ ಸಮಿತಿ ಸಭೆ ಆಯೋಜಿಸಿ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಸಹಕಾರ ಮುಖ್ಯ: ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಪಾರ್ಕಿಂಗ್ ಅವ್ಯವಸ್ಥೆ ಸುಧಾರಿಸಲು ಗಮನ ಹರಿಸಲಾಗುವುದು ಎಂದ ಆರೋಗ್ಯಾಧಿಕಾರಿಗಳು, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ. ಇಲಾಖೆಯನ್ನು ಜನಸ್ನೇಹಿ ಮಾಡುವುದೇ ತಮ್ಮ ಮುಖ್ಯ ಉದ್ದೇಶವಾಗಿದ್ದು, ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ಹೇಳಿದರು.
ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟಸ್ವಾಮಿ, ತಾಲೂಕು ಅಧ್ಯಕ್ಷ ರವಿಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.