ಕೃಷಿ ವಿವಿಯಲ್ಲಿ ನಾಳೆಯಿಂದ ಕೃಷಿ ಮೇಳ
ಆರು ಜನರಿಗೆ ಶೇಷ್ಠ ಕೃಷಿಕ ಪ್ರಶಸ್ತಿ ಪ್ರದಾನ ಮೂರು ದಿನ ವಿಚಾರಗೋಷ್ಠಿ, ವಸ್ತು ಪ್ರದರ್ಶನ
Team Udayavani, Dec 13, 2019, 10:56 AM IST
ರಾಯಚೂರು: ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಡಿ.14ರಿಂದ 16ರವರೆಗೆ ನೆಲ-ಜಲ ಉಳಿಸಿ ಆದಾಯ ಹೆಚ್ಚಿಸಿ ಎಂಬ ಶೀರ್ಷಿಕೆಯಡಿ ಕೃಷಿಮೇಳ-2019 ಆಯೋಜಿಸಲಾಗಿದೆ ಎಂದು ವಿವಿ ಕುಲಪತಿ ಡಾ|
ಕೆ.ಎನ್.ಕಟ್ಟಿಮನಿ ತಿಳಿಸಿದರು.
ನಗರದ ಕೃಷಿ ವಿವಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಬರದ ಹಿನ್ನೆಲೆಯಲ್ಲಿ ಮೇಳ ಕೈಬಿಡಲಾಗಿತ್ತು. ಹೊಸ ತಂತ್ರಜ್ಞಾನಗಳು, ಸಂಶೋಧನೆ, ಲಾಭದಾಯಕ ಕೃಷಿಗೆ ಸಂಬಂಧಿ ಸಿದ ವಿಚಾರಗಳನ್ನು ರೈತರೊಂದಿಗೆ ಹಂಚಿಕೊಳ್ಳಲು, ಅವರಿಗೆ ಮಾಹಿತಿ ನೀಡುವ ಉದ್ದೇಶದಿಂದ ಮೇಳ ಹಮ್ಮಿಕೊಳ್ಳಲಾಗಿದೆ. ಮೂರು ದಿನಗಳ ಕಾಲ ಕೃಷಿ ಮೇಳ ನಡೆಸಲಾಗುತ್ತಿದೆ ಎಂದು ಹೇಳಿದರು.
14ರಂದು ಬೆಳಗ್ಗೆ ಕೃಷಿ ವಿವಿ ಆವರಣದಲ್ಲಿ ನಾಲವಾರದ ಕೋರಿಸಿದ್ಧೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಡಾ| ಸಿದ್ಧತೋಟೇಂದ್ರ ಶಿವಾಚಾರ್ಯ ಸ್ವಾಮೀಜಿ ಗೋ ಪೂಜೆ ನೆರವೇರಿಸುವ ಮೂಲಕ ಕೃಷಿ ಮೇಳಕ್ಕೆ ಚಾಲನೆ ನೀಡುವರು. 15ರಂದು ಬೆಳಗ್ಗೆ 11:30ಕ್ಕೆ ಕೃಷಿಮೇಳವನ್ನು ರಾಜ್ಯದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಉದ್ಘಾಟಿಸುವರು.
ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು, ಪಶು ಸಂಗೋಪನಾ ಸಚಿವ ಪ್ರಭು ಬಿ. ಚವ್ಹಾಣ ಆಗಮಿಸುವರು. ನಗರ ಶಾಸಕ ಡಾ| ಶಿವರಾಜ ಪಾಟೀಲ ಅಧ್ಯಕ್ಷತೆ ವಹಿಸುವರು ಎಂದು ವಿವರಿಸಿದರು.
ಈ ಬಾರಿ ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳಿಂದ ಒಬ್ಬೊಬ್ಬ ರೈತರನ್ನು ಆಯ್ಕೆ ಮಾಡಿದ್ದು, ಆರು ಶ್ರೇಷ್ಠ ಕೃಷಿಕ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕೃಷಿ ಮೇಳದ ನಿಮಿತ್ತ ಕೃಷಿ ವಿಜ್ಞಾನಗಳ ವಿವಿ ಆವರಣದಲ್ಲಿ 300 ಮಳಿಗೆಗಳನ್ನು ಸ್ಥಾಪಿಸಿದ್ದು, ಅದರಲ್ಲಿ 60
ಹೈಟೆಕ್ ಮಳಿಗೆಗಳಿವೆ. ಈಗಾಗಲೇ 90 ಮಳಿಗೆ ಬುಕ್ ಆಗಿದ್ದು, ಇನ್ನೆರಡು ದಿನಗಳಲ್ಲಿ ಹೆಚ್ಚು ಬರುವ ಸಾಧ್ಯತೆ ಇದೆ ಎಂದರು.
ಮೂರು ದಿನಗಳ ಕಾಲ ನಡೆಯುವ ಕೃಷಿಮೇಳದಲ್ಲಿ ರೈತರಿಂದ ರೈತರಿಗೆ ಕಾರ್ಯಕ್ರಮದಲ್ಲಿ ಸಂವಾದ, ಕೃಷಿ ಸವಾಲುಗಳು ಕುರಿತು ವಿಚಾರ ಸಂಕಿರಣಗಳು ನಡೆಯಲಿವೆ. 30 ಜನ ವಿಜ್ಞಾನಿಗಳ ತಂಡ ರೈತರಿಗೆ ಸಮಗ್ರ ಕೃಷಿ ಪದ್ಧತಿ ಅಳವಡಿಕೆ ಕುರಿತು ಪ್ರಾತ್ಯಕ್ಷಿತೆ ಮೂಲಕ ಮಾಹಿತಿ ನೀಡಲಿದೆ ಎಂದು ತಿಳಿಸಿದರು.
ಹನಿ ನೀರಾವರಿ, ಮಣ್ಣು ಪ್ರಾತ್ಯಕ್ಷಿತೆ, ಸಮಗ್ರ ನೀರಾವರಿ, ಅರಣ್ಯ ಕೃಷಿ, ಹತ್ತಿ ಪ್ರಯೋಗ, ಡ್ರೋನ್ ತಂತ್ರಜ್ಞಾನ ಬಳಕೆ, ಫಲಪುಷ್ಪ ಪ್ರದರ್ಶನ, ಆಹಾರ ಸಂಸ್ಕರಣೆ, ಕುರಿ, ಕೋಳಿ, ಮೊಲ ಸಾಕಣೆ ಕುರಿತು ಮಾಹಿತಿ ನೀಡಲಾಗುತ್ತಿದೆ. ಮೇಳಕ್ಕೆ ಆಗಮಿಸುವ ರೈತರಿಗೆ ರಿಯಾಯಿತಿ ದರದಲ್ಲಿ ಊಟ ಹಾಗೂ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
ರೈತರ ಪರಿಸ್ಥಿತಿ ಮತ್ತು ವಾತಾವರಣ ವೈಪರೀತ್ಯಕ್ಕೆ ಅನುಗುಣವಾಗಿ ಪ್ರದೇಶ ಬೆಳಗಳ ಮೇಲೆ ಸಂಶೋಧನೆ ಕೈಗೊಳ್ಳಲಾಗುತ್ತಿದೆ. ವಿಶ್ವ ಬ್ಯಾಂಕ್ ನೆರವಿನಿಂದ ಜಲಾನಯನ ಅಭಿವೃದ್ದಿ ಇಲಾಖೆ ಸಹಯೋಗದಲ್ಲಿ ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಮಳೆಯಾಶ್ರಿತ ಆಯ್ದ ಕಿರು ಜಲಾನಯನ, ನೆರಳು ಮನೆ ಪರದೆಯಲ್ಲಿ ಕರಬೂಜ ಹಾಗೂ ಸುಗಂಧರಾಜ ಬೆಳೆ ನಿರ್ವಹಣೆ ಕುರಿತು ಸಂಶೊಧನೆ ಪ್ರಗತಿಯಲ್ಲಿದೆ. ರಾಯಚೂರು ಕೃಷಿ ವಿವಿಯಲ್ಲಿ ಬೋಧನೆ, ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರಥಮ ಆದ್ಯತೆ ನೀಡಲಾಗುತ್ತಿದೆ ಎಂದರು.
ವಿವಿಯಲ್ಲಿ ಸುಧಾರಿತ ಸಿಬ್ಬಂದಿ ತರಬೇತಿ ಕೇಂದ್ರ ಸ್ಥಾಪಿಸುವುದು. ಬಳ್ಳಾರಿ ಜಿಲ್ಲೆಯ ಹಗರಿ ಹಾಗೂ ಬೀದರ ಜಿಲ್ಲೆಯ ಔರಾದ್, ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ಕೃಷಿ ಅರಣ್ಯ ಮಹಾವಿದ್ಯಾಲಯ ಸ್ಥಾಪನೆ, ಕೃಷಿ ಪಂಡಿತರು ಮತ್ತು ಪ್ರಗತಿಪರ ರೈತರು ಒಳಗೊಂಡ ರೈತ ಪೀಠ ಸ್ಥಾಪನೆಗೆ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.
ಸಮಾರೋಪ ಸಮಾರಂಭದ ಬಳಿಕ ಸಂಜೆ ಹಾಸ್ಯ ಭಾಷಣಕಾರ ಗಂಗಾವತಿ ಬಿ. ಪ್ರಾಣೇಶ ಅವರಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕೃಷಿ ವಿವಿ ಕುಲಸಚಿವ ಡಾ| ಎಂ.ಜಿ.ಪಾಟೀಲ, ಶಿಕ್ಷಣ ನಿರ್ದೆಶಕ ಡಾ| ಎಸ್.ಕೆ.ಮೇಟಿ, ಸಂಶೋಧನಾ ನಿರ್ದೇಶಕ ಡಾ| ಬಿ.ಕೆ.ದೇಸಾಯಿ, ನಿರ್ದೇಶಕ ಡಾ| ಬಿ.ಎಂ.ಚಿತ್ತಾಪುರ ಇತರರು ಇದ್ದರು.
ಅಕ್ಕಿಯಲ್ಲಿ ವಿಷಕಾರಕ ಅಂಶ
ಈ ಭಾಗದ ಭತ್ತದ ಅಕ್ಕಿಯನ್ನು ಪರೀಕ್ಷೆಗೊಳಪಡಿಸಿದ್ದು, ಅಲ್ಪಮಟ್ಟಿನ ವಿಷಕಾರಕ ಅಂಶ ಪತ್ತೆಯಾಗಿದೆ. ಆದರೆ, ಅದರ ಪ್ರಮಾಣ ಎಷ್ಟಿದೆ ಎಂದರೆ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುವುದಿಲ್ಲ. ಇದೇ ಕಾರಣಕ್ಕೆ ವರ್ತಕರು ಕೂಡ ತಮ್ಮ ಅಕ್ಕಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮುನ್ನ ಪರೀಕ್ಷಿಸಿಕೊಳ್ಳುತ್ತಿದ್ದಾರೆ. ವಿದೇಶಗಳಿಗೆ ಕಳುಹಿಸುವ ಅಕ್ಕಿಯನ್ನು ಪರೀಕ್ಷಿಸಿಯೇ ಕಳಿಸಲಾಗುತ್ತಿದೆ ಎಂದು ಕೃಷಿ ವಿವಿ ಸಂಶೋಧನಾ ವಿಭಾಗದ ಸಿಬ್ಬಂದಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.