‘ವಿದ್ಯಾರ್ಥಿ ವೇತನ ಸ್ಥಗಿತ ಆದೇಶ ಹಿಂಪಡೆಯಿರಿ’
Team Udayavani, Nov 10, 2019, 1:34 PM IST
ರಾಯಚೂರು: ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿದ ಸರ್ಕಾರದ ಧೋರಣೆ ಖಂಡಿಸಿ ಶುಕ್ರವಾರ ಎಐಡಿಎಸ್‌ಒ ನೇತೃತ್ವದಲ್ಲಿ ವಿವಿಧ ಶಾಲೆ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಕುರಿತು ಜಿಲ್ಲಾಧಿಕಾರಿ ಮೂಲಕ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಿ, 2019-20ನೇ ಸಾಲಿನಿಂದ ಹೊಸ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನಕ್ಕೆ ಪರಿಗಣಿಸುವುದಿಲ್ಲ ಎಂಬ ಆದೇಶ ಹೊರಡಿಸಲಾಗಿದೆ. ಹಿಂದೆ 2 ರಿಂದ 10ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿತ್ತು. ಆದರೆ, ಈಗ ಹೊರಡಿಸಿರುವ ನೂತನ ಆದೇಶದಿಂದ ಅನುದಾನದ ನೆಪವೊಡ್ಡಿ ವಿದ್ಯಾರ್ಥಿ ವೇತನ ಕಡಿತಗೊಳಿಸುತ್ತಿರುವ ಕ್ರಮದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ.ಇದು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೂ ತೊಡಕಾಗಬಹುದು ಎಂದರು.
ಮುಂದಿನ ಶೈಕ್ಷಣಿಕ ಸಾಲಿನಿಂದ ಅಲೆಮಾರಿ ಅರೆ ಅಲೆಮಾರಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ 8ರಿಂದ 10ನೇ ತರಗತಿವರೆಗೆ ನವೀಕರಣಗೊಂಡ ವಿದ್ಯಾರ್ಥಿಗಳನ್ನು ಮಾತ್ರ ಪರಿಗಣಿಸಲು ತಿರ್ಮಾನಿಸಿದೆ. ಅನುದಾನದ ಕೊರತೆಯಿದ್ದರೆ ಅದನ್ನು ಹೆಚ್ಚುಗೊಳಿಸಬೇಕೆ ವಿನಃ ವೇತನ ಕಡಿತಗೊಳಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ವಿದ್ಯಾರ್ಥಿ ವೇತನ ಅವಲಂಬಿಸಿಯೇ ಅನೇಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅಂಥ ಮಕ್ಕಳು ತಮ್ಮ ವಿದ್ಯಾಭ್ಯಾಸವನ್ನೇ ಮೊಟಕುಗೊಳಿಸಬೇಕಾಗುತ್ತದೆ. ಸರ್ಕಾರದ ಈ ವಿದ್ಯಾರ್ಥಿ ವಿರೋಧಿ ಆದೇಶ ರದ್ದುಗೊಳಿಸಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಒತ್ತಾಯಿಸಿದರು. ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಮಹೇಶ ಚೀಕಲಪರ್ವಿ, ಕಾರ್ಯದರ್ಶಿ ಪೀರ್‌ಸಾಬ್ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.