ಬಡ್ತಿಗೆ ಸಹಾಯಕ ಕೃಷಿ ಅಧಿಕಾರಿಗಳ ಆಗ್ರಹ
ಅನಗತ್ಯ ಕಾರ್ಯಗಳಿಗೆ ಬಳಸಿಕೊಳ್ಳದೆ ಇಲಾಖೆ ಹೊಣೆ ನೀಡಿ
Team Udayavani, Oct 5, 2019, 12:01 PM IST
ರಾಯಚೂರು: ನನೆಗುದ್ದಿಗೆ ಬಿದ್ದ ವೃಂದ ಹಾಗೂ ನೇಮಕಾತಿ ರಚಿಸಿ ಸಹಾಯಕ ಕೃಷಿ ಅಧಿಕಾರಿ ಹುದ್ದೆಯಿಂದ ಕೃಷಿ ಅಧಿಕಾರಿ ಹುದ್ದೆಗೆ ಬಡ್ತಿ ನೀಡುವಂತೆ ಆಗ್ರಹಿಸಿ ಸಹಾಯಕ ಕೃಷಿ ಅಧಿಕಾರಿಗಳ ಸಂಘದ ಸದಸ್ಯರು ಧರಣಿ ನಡೆಸಿದರು.
ಕೃಷಿ ಇಲಾಖೆ ಆವರಣದಲ್ಲಿ ಧರಣಿ ನಡೆಸಿ ಬಳಿಕ ಇಲಾಖೆ ಜಂಟಿ ನಿರ್ದೇಶಕರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಗ್ರಾಮ ಮಟ್ಟದ ಮೂಲ ಕಾರ್ಯಕರ್ತರಿಲ್ಲದಿದ್ದರೂ ಸಹಾಯಕ ಕೃಷಿ ಅಧಿಕಾರಿಗಳು ಅನೇಕ ಯೋಜನೆ ಅನುಷ್ಠಾನಗೊಳಿಸಿದ್ದಾರೆ. ಮಾತೃ ಇಲಾಖೆ ಜವಾಬ್ದಾರಿ ಜತೆಗೆ ಬೇರೆ ಬೇರೆ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ನಿಭಾಯಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತಿದ್ದು, ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ ಎಂದರು.
ಹಿಂದಿನ ಮೈತ್ರಿ ಸರ್ಕಾರ 2-3 ತಿಂಗಳಲ್ಲಿ ಮುಂಬಡ್ತಿ ನೀಡುವ ಭರವಸೆ ನೀಡಿತ್ತು. ಆದರೆ, ಜಾರಿಯಾಗಲೇ ಇಲ್ಲ. ಸಾಕಷ್ಟು ಬಾರಿ ಇಲಾಖೆ ಹಾಗೂ ಸರ್ಕಾರಕ್ಕೆ ದೂರಿದರೂ ಕ್ರಮ ಕೈಗೊಂಡಿಲ್ಲ. ಇದರಿಂದ ಒಂದೇ ಹುದ್ದೆಯಲ್ಲಿ 30ರಿಂದ 35 ವರ್ಷಗಳ ಕಾಲ ಕೆಲಸ ಮಾಡುವ ಸ್ಥಿತಿ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕೂಡಲೇ ಬಡ್ತಿ ನೀಡಬೇಕು. ಅನಗತ್ಯ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳದೆ ಇಲಾಖೆ ಹೊಣೆಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
ಸಂಘದ ಅಧ್ಯಕ್ಷ ನಾಗರೆಡ್ಡಿ ಹಂಚಿನಾಳ, ಗೌರವಾಧ್ಯಕ್ಷ ಮಲ್ಲಣ್ಣ, ಪ್ರಧಾನ ಕಾರ್ಯದರ್ಶಿ ಅಮರಪ್ಪ, ಜಂಟಿ ಕಾರ್ಯದರ್ಶಿ ವೆಂಕಣ್ಣ ಯಾದವ, ಸದಸ್ಯರಾದ ಶೌಕತ್ ಅಲಿ, ಸದಸ್ಯರಾದ ವೆಂಕಟೇಶ, ಬಸವರಾಜ, ಶಿವಶರಣ, ನೇಹ ಕುಲಕರ್ಣಿ, ಶೋಭಾ, ನರಸಮ್ಮ, ಜ್ಯೋತಿ, ಮಾಲತಿ, ಅಶ್ವಿನಿ, ಜಯಶ್ರೀ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
Bengaluru Crime: ಕತ್ತು ಬಿಗಿದು ಇಬ್ಬರು ಮಕ್ಕಳನ್ನು ಕೊಂದ ಅಮ್ಮ!
MUST WATCH
ಹೊಸ ಸೇರ್ಪಡೆ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.