ತುರ್ತು ಸೇವೆಗೆ 112ಕ್ಕೆ ಕರೆ ಮಾಡಿ

ಎಮೆರ್ಜೆನ್ಸಿ ರೆಸ್ಪಾನ್ಸ್‌ ಸಪೋರ್ಟ್‌ ಸಿಸ್ಟಮ್‌ ಸೇವೆಗೆ ಎಸ್‌ಪಿ ಡಾ| ವೇದಮೂರ್ತಿ ಚಾಲನೆ

Team Udayavani, Nov 21, 2019, 2:35 PM IST

21-November-32

ರಾಯಚೂರು: ಯಾವುದೇ ಆಪತ್ತು ಎದುರಾದಾಗ ತಕ್ಷಣಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಜಿಪಿಎಸ್‌ ಆಧಾರಿತ ಎಮೆರ್ಜೆನ್ಸಿ ರೆಸ್ಪಾನ್ಸ್‌ ಸಪೋರ್ಟ್‌ ಸಿಸ್ಟಮ್‌ ಸೇವೆಗೆ ನಗರದ ಪೊಲೀಸ್‌ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಿ.ಬಿ.ವೇದಮೂರ್ತಿ ಬುಧವಾರ ಚಾಲನೆ ನೀಡಿದರು.

ರಾಜ್ಯ ಸರ್ಕಾರದಿಂದ ಈಚೆಗೆ ಈ ಸೌಲಭ್ಯಕ್ಕೆ ಚಾಲನೆ ಸಿಕ್ಕಿದ್ದು, ಜಿಲ್ಲೆಯಲ್ಲೂ ಜಿಪಿಎಸ್‌ ಅಳವಡಿಸಿದ ನಾಲ್ಕು ವಾಹನಗಳನ್ನು ಲೋಕಾರ್ಪಣೆ ಮಾಡಲಾಯಿತು. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಪಿ ಡಾ| ಸಿ.ಬಿ. ವೇದಮೂರ್ತಿ, ಸಾರ್ವಜನಿಕರಿಗೆ ಎದುರಾಗುವ ಯಾವುದೇ ಆಪತ್ತುಗಳಿಗೆ ತುರ್ತು ಸೇವೆ ಒದಗಿಸುವ ಉದ್ದೇಶದಿಂದ ಸರ್ಕಾರ ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡ ತುರ್ತು ಸ್ಪಂದನಾ ವಾಹನಗಳನ್ನು ಸೇವೆಗೆ ಬಿಡುಗಡೆ ಮಾಡಿದೆ. ಈ ಮುಂಚೆ 100 ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸುತ್ತಿದ್ದಂತೆ, ಈಗ 112 ಸಂಖ್ಯೆಗೆ ಕರೆ ಮಾಡಿ ಸಮಸ್ಯೆ ತಿಳಿಸಿದರೆ, ತ್ವರಿತ ಸೇವೆ ನೀಡಲು ನೆರವಾಗಲಿದೆ ಎಂದು ತಿಳಿಸಿದರು.

ಇಆರ್‌ಎಸ್‌ಎಸ್‌ ಯೋಜನೆಯಡಿ ಜಿಲ್ಲೆಗೆ ನಾಲ್ಕು ವಾಹನ ನೀಡಿದ್ದು, ರಾಯಚೂರಿಗೆ 2, ಸಿಂಧನೂರು ಮತ್ತು ಲಿಂಗಸುಗೂರು ಠಾಣೆಗೆ ತಲಾ ಒಂದು ವಾಹನ ನೀಡಲಾಗಿದೆ. ಈಗಾಗಲೇ ತುರ್ತು ಸೇವೆ ಒದಗಿಸಲು 100, 101, 102, ಮತ್ತು 108 ಸಹಾಯವಾಣಿ ಸಂಖ್ಯೆಗಳಿವೆ. ಈ ಎಲ್ಲ ತುರ್ತು ಸೇವೆ ಪಡೆಯಲು 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು. ಕರೆ ನೇರವಾಗಿ ಬೆಂಗಳೂರಿನಲ್ಲಿರುವ ಕಂಟ್ರೋಲ್‌ ರೂಮ್‌ಗೆ ತೆರಳಲಿದ್ದು, ಅಲ್ಲಿಂದ ಸಂಬಂಧಿ ಸಿದ ವಾಹನಗಳಿಗೆ ಸಂದೇಶ ರವಾನೆಯಾಗುತ್ತದೆ. ಮೊಬೈಲ್‌ ಸಂಖ್ಯೆ ಮೂಲಕ ಘಟನೆ ನಡೆದ ಸ್ಥಳಕ್ಕೆ ತ್ವರಿತಗತಿಯಲ್ಲಿ ತೆರಳಲು ಅನುಕೂಲವಾಗಲಿದೆ ಎಂದರು.

ಸಿಂಧನೂರು, ಲಿಂಗಸೂಗುರು ಉಪ ವಿಭಾಗದ ಡಿವೈಎಸ್‌ಪಿ ಉಸ್ತುವಾರಿಯಲ್ಲಿ ಒಂದೊಂದು ವಾಹನಗಳು ಕಾರ್ಯ ನಿರ್ವವಹಿಸಲಿವೆ. ನಾಲ್ಕು ವಾಹನಗಳಿಗೂ ಎಎಸ್‌ಐ ದರ್ಜೆಯ ಅಧಿ ಕಾರಿ ಮತ್ತು ಒಬ್ಬ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಚಾಲಕರನ್ನು ನೀಡಲಾಗಿದೆ. ಇದು ನಿರಂತರ ಸೇವೆಯಯಾಗಿರಲಿದ್ದು, ಯಾವ ಹೊತ್ತಿನಲ್ಲಿ ದೂರು ಬಂದರೂ ಸ್ಪಂದಿಸಲಿದೆ ಎಂದು ತಿಳಿಸಿದರು.

ಇದಕ್ಕಾಗಿ ಅಪ್ಲಿಕೇಶನ್‌ ಕೂಡ ಸಿದ್ಧಪಡಿಸಿದ್ದು, ಅದರಲ್ಲಿ ವಿಳಾಸ ಮಾಹಿತಿ ನೀಡಬಹುದು. ವಾಹನದಲ್ಲಿ ಎಂ.ಡಿ.ಟಿ. ಡಾಟಾ ಟರ್ಮಿನಲ್‌ ತಂತ್ರಾಂಶ ಅಳವಡಿಸಲಾಗಿದೆ. ಇದರ ಸಹಾಯದಿಂದ ಅವಘಡ ಸ್ಥಳಕ್ಕೆ ಆಗಮಿಸಲಿದೆ ಎಂದರು.

ಸಾರ್ವಜನಿಕರು ಯಾವುದೇ ಮಾಹಿತಿ ನೀಡಬಹುದು. ಇನ್ನು ದೇವದುರ್ಗಕ್ಕೆ ಶೀಘ್ರದಲ್ಲೇ ವಾಹನ ಜಾರಿಗೊಳಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.