ಒಂದೇ ದಿನ ಶತಕ ಬಾರಿಸಿದ ಕೋವಿಡ್
Team Udayavani, Jul 17, 2020, 1:08 PM IST
ರಾಯಚೂರು: ಇಷ್ಟು ದಿನ ಎರಡಂಕಿಯಲ್ಲೇ ಇದ್ದ ಕೋವಿಡ್ ಸೋಂಕಿತರ ಸಂಖ್ಯೆ ಗುರುವಾರ ಒಂದೇ ದಿನ 117 ತಲುಪುವ ಮೂಲಕ ಜಿಲ್ಲೆಯ ಜನರನ್ನು ದಿಗ್ಮೂಢರನ್ನಾಗಿಸಿದೆ. ಮೊದಲ ಬಾರಿಗೆ ನೂರರ ಗಡಿ ದಾಟಿದ್ದು, ಆ ಮೂಲಕ ಜಿಲ್ಲೆಯಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 931ಕ್ಕೆ ತಲುಪಿದೆ.
ಮುಂಬಯಿ ವಲಸಿಗರಿಂದ ಜಿಲ್ಲೆಗೆ ಕಾಲಿಟ್ಟ ಕೋವಿಡ್ ವೈರಸ್ ಕ್ರಮೇಣ ಸಮುದಾಯತ್ತ ವಾಲಿದೆ. ಈಗ ಬಹುತೇಕ ಪ್ರಾಥಮಿಕ, ದ್ವಿತೀಯ ಸಂಪರ್ಕಗಳಿಂದಲೇ ಸೋಂಕು ಹರಡುತ್ತಿದೆ. ಸೋಂಕಿತರನ್ನು ಪತ್ತೆ ಹಚ್ಚುವ ಕೆಲಸ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಲಾಕ್‌ಡೌನ್ ಜಾರಿಗೊಳಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಗುರುವಾರ 52 ಜನ ಸೇರಿದಂತೆ ಈವರೆಗೆ 536 ಜನ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನಿಂದ 98, ಲಿಂಗಸುಗೂರು 69, ಮಾನ್ವಿ 78, ಸಿಂಧನೂರು 89 ಮತ್ತು ರಾಯಚೂರು ತಾಲೂಕಿನಿಂದ 113 ಸೇರಿದಂತೆ ಒಟ್ಟು 447 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್-19 ಶಂಕೆ ಹಿನ್ನೆಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೋವಿಡ್-19 ಪರೀಕ್ಷೆಗಾಗಿ ಕಳುಹಿಸಿದ್ದ ಫಲಿತಾಂಶಗಳಲ್ಲಿ ಇಂದು ಬಂದ ವರದಿಗಳಲ್ಲಿ 414 ನೆಗೆಟಿವ್ ಆಗಿವೆ. ಒಟ್ಟಾರೆ ಜಿಲ್ಲೆಯಿಂದ ಈವರೆಗೆ 30,268 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಕಳುಹಿಸಿದ್ದು, ಅವುಗಳಲ್ಲಿ 26,099 ವರದಿಗಳು ನೆಗೆಟಿವ್ ಆಗಿವೆ. ಉಳಿದ3,232 ಸ್ಯಾಂಪಲ್‌ಗಳ ಫಲಿತಾಂಶ ಬರಬೇಕಿದೆ. ಫೀವರ್ ಕ್ಲಿನಿಕ್‌ಗಳಲ್ಲಿ ಗುರುವಾರ 609 ಜನರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಒಟ್ಟು 135 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿ ಇರಿಸಿ ನಿಗಾವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.