ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಸಜೆ: ಸಂತ್ರಸ್ತ ಬಾಲಕಿಗೆ 9 ಲಕ್ಷ ರೂ. ಪರಿಹಾರ
Team Udayavani, Jun 14, 2024, 7:57 PM IST
ರಾಯಚೂರು: ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2021ರ ಜನವರಿಯಲ್ಲಿ ನಡೆದಿದ್ದ ಅಪ್ರಾಪ್ತ ವಯಸ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥನಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಲಿಂಗಸೂಗೂರಿನ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೊ ನ್ಯಾಯಾಲಯವು ಶುಕ್ರವಾರ ಆದೇಶ ನೀಡಿದೆ.
ಲಿಂಗಸೂಗೂರು ತಾಲೂಕಿನ ನೀರಲಕೇರಿ ಗ್ರಾಮದ ಹುಲ್ಲಪ್ಪ(25) ಶಿಕ್ಷೆಗೆ ಗುರಿಯಾದವನು. ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕ ಮಹಾಂತೇಶ ಸಜ್ಜನ್ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ನ್ಯಾಯಾಲಯವು ಒಟ್ಟು 20 ಸಾಕ್ಷಿಗಳ ಪೈಕಿ 17 ಸಾಕ್ಷಿದಾರರ ವಿಚಾರಣೆ ನಡೆಸಿದ್ದು, ಸಾಕ್ಷಿ ಪುರಾವೆಗಳನ್ನು ಪರೀಶಿಲಿಸಿದ್ದ ವಿಶೇಷ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಆರೋಪ ಸಾಬೀತಾದ ಹಿನ್ನೆಯೆಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ ಒಂಬತ್ತು ಲಕ್ಷ ರೂ. ಪರಿಹಾರ ನೀಡಬೇಕೆಂದು ಮಾನ್ಯ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ.ಮಂಜುನಾಥ ವಾದ ಮಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.