ಮತ್ತೆ 25 ಹೊಸ ಪ್ರಕರಣ ಪತ್ತೆ
Team Udayavani, Jul 11, 2020, 10:06 AM IST
ರಾಯಚೂರು: ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 25 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಸೋಂಕಿತರ ಸಂಖ್ಯೆ 656ಕ್ಕೆ ಏರಿದೆ. ಚಿಕಿತ್ಸೆ ಪಡೆದು 463 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇನ್ನೂ 186 ಸಕ್ರಿಯ ಪ್ರಕರಣಗಳಿವೆ.
ಶುಕ್ರವಾರ ಕೂಡ 21 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ನಡುವೆ ಶುಕ್ರವಾರ ಲಿಂಗಸುಗೂರು ಮೂಲದ ವೃದ್ಧ ಯೊಬ್ಬ ಮೃತ ಪಟ್ಟಿದ್ದಾನೆ. ಆ ಮೂಲಕ ಜಿಲ್ಲೆಯಲ್ಲಿ ಕೋವಿಡ್ ದಿಂದ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ. ಜಿಲ್ಲೆಯ ದೇವದುರ್ಗ ತಾಲೂಕಿ ನಿಂದ 90, ಲಿಂಗಸುಗೂರು ತಾಲೂಕಿ ನಿಂದ 106, ಮಾನ್ವಿ ತಾಲೂಕಿನಿಂದ 71, ಸಿಂಧನೂರು ತಾಲೂಕಿನಿಂದ 191 ಮತ್ತು ರಾಯಚೂರು ತಾಲೂಕಿನಿಂದ 119 ಸೇರಿದಂತೆ ಒಟ್ಟು 577 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಹಿಂದೆ ಕಳುಹಿಸಲಾದ ವರದಿಗಳಲ್ಲಿ 337 ನೆಗೆಟಿವ್ ಆಗಿವೆ.
ಒಟ್ಟಾರೆ ಜಿಲ್ಲೆಯಿಂದ ಈವರೆಗೆ 27,578 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಕೊರೋನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 24,253 ವರದಿಗಳು ನೆಗೆಟಿವ್ ಆಗಿವೆ. ಉಳಿದ 2,663 ಸ್ಯಾಂಪಲ್‌ಗಳ ಫಲಿತಾಂಶ ಬರಬೇಕಿದೆ. ಫೀವರ್ ಕ್ಲಿನಿಕ್‌ಗಳಲ್ಲಿ ಶುಕ್ರವಾರ 653 ಜನರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ವಿವಿಧ ಸಾಂಸ್ಥಿಕ ಕ್ವಾರಂಟೈನ್‌ಗಳಲ್ಲಿ 135 ಜನರನ್ನು ಇರಿಸಿ ನಿಗಾವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.