371 (ಜೆ) ಸಮರ್ಪಕ ‌ಅನುಷ್ಠಾನವಾಗಲಿ


Team Udayavani, Dec 12, 2017, 11:22 AM IST

ray-2.jpg

ರಾಯಚೂರು: ಸತತ ಹೋರಾಟ, ಅನೇಕ ಮುಖಂಡರ ಅವಿರತ ಶ್ರಮದಿಂದ ಹೈದರಾಬಾದ್‌ ಕರ್ನಾಟಕ ಭಾಗಕ್ಕೆ 371 (ಜೆ) ಕಲಂ ಜಾರಿಯಾಗಿದೆ. ಆದರೆ, ಆಳುವ ಸರ್ಕಾರಗಳು ಸಮರ್ಪಕ ಅನುಷ್ಠಾನಕ್ಕೆ ಮೀನ-ಮೇಷ ಎಣಿಸುತ್ತಿರುವುದು ಖಂಡನೀಯ ಎಂದು ಮಾಜಿ ಸಚಿವ ವೈಜನಾಥ ಪಾಟೀಲ್‌ ಬೇಸರ ವ್ಯಕ್ತಪಡಿಸಿದರು.

ಹೈದರಾಬಾದ್‌ ಕರ್ನಾಟಕ ಜನಾಂದೋಲನಾ ಕೇಂದ್ರ ದಿಂದ ನಗರದ ಪಂ. ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರವಿವಾರ ಸಂಜೆ ನಡೆದ ಸಮಾರಂಭದಲ್ಲಿ ಸ್ವಾಮಿ ರಾಮಾನಂದ ತೀರ್ಥ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. ಮೀಸಲಾತಿ ಬಗ್ಗೆ ಆಕ್ಷೇಪ ಹೆಚ್ಚುತ್ತಿದ್ದು, ಅಂಥ ವಿಚಾರಗಳಿಗೆ ಕಡಿವಾಣ ಬೀಳಬೇಕು. ಈಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಹೋಗಬೇಕಿದೆ ಎಂದರು.

ಹಿರಿಯ ಸಾಹಿತಿ ಪ್ರೊ| ವಸಂತ ಕುಷ್ಟಗಿ ಮಾತನಾಡಿ, ದೇಶದಲ್ಲಿ ಏಕತೆಗಾಗಿ ಹೋರಾಡಿದ ಕೀರ್ತಿ ಸ್ವಾಮಿ ರಾಮಾನಂದ ತೀರ್ಥರಿಗೆ ಸಲ್ಲುತ್ತದೆ. ಸೇವೆಯಲ್ಲಿ ಅವರು ಮಹಾತ್ಮಗಾಂಧಿ ಇದ್ದಂತೆ. ಅಂಥವರ ಸ್ಮರಣೆ ಮಾಡುವುದು ಎಲ್ಲರ ಕರ್ತವ್ಯ. ಅವರ ಹೆಸರಿನ ಪ್ರಶಸ್ತಿಗೆ ಆತ್ಮವಿಶ್ವಾಸದ ಪ್ರತೀಕವಾದ ವೈಜನಾಥ ಪಾಟೀಲರು ಸೂಕ್ತ ಎಂದರು.

ಹೈ-ಕ ಹೋರಾಟ ಸಮಿತಿ ಉಪಾಧ್ಯಕ್ಷ ಡಾ| ರಜಾಕ ಉಸ್ತಾದ್‌ ವಿಶೇಷ ಉಪನ್ಯಾಸ ನೀಡಿ, ವಿಶೇಷ ಸ್ಥಾನಮಾನದಿಂದ ಈ ಭಾಗದ ಅನೇಕ ವಿದ್ಯಾರ್ಥಿಗಳಿಗೆ ಹಾಗೂ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ. ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ಹರಿದುಬರುತ್ತಿದೆ. ಇದಕ್ಕೆ ವೈಜನಾಥ ಪಾಟೀಲ್‌ ಅವರೇ ಕಾರಣ ಎಂದು ಬಣ್ಣಿಸಿದರು. ಹಿರಿಯ ಪತ್ರಕರ್ತ ಎಂ.ಕೆ. ಭಾಸ್ಕರರಾವ್‌ ಮಾತನಾಡಿ, ಸ್ವಾಮಿ ರಾಮಾನಂದ ತೀರ್ಥರ ಅಧ್ಯಯನ ಕೇಂದ್ರ ಸ್ಥಾಪನೆಗೆ ಈ ಭಾಗದ ಎಲ್ಲ ಜನಪ್ರತಿನಿಧಿಗಳು ಶ್ರಮಿಸಬೇಕು ಎಂದರು.

ಸಾಮಾಜಿಕ ಪರಿವರ್ತನಾ ಆಂದೋಲನ ಮುಖಂಡರಾದ ಎಸ್‌.ಆರ್‌ ಹಿರೇಮಠ, ಹಿರಿಯ ಪತ್ರಕರ್ತ ಶ್ರೀನಿವಾಸ ಶಿರನೂಕರ್‌, ಜನಾಂದೋಲನ ಕೇಂದ್ರದ ಅಧ್ಯಕ್ಷ ಕೆ.ರಾಮಕೃಷ್ಣ ಮಾತನಾಡಿದರು. ನಗರ ಶಾಸಕ ಡಾ| ಶಿವರಾಜ ಪಾಟೀಲ್‌, ಜನಾಂದೋಲನ ಕೇಂದ್ರದ ಮುಖಂಡ ರಾಘವೇಂದ್ರ ಕುಷ್ಟಗಿ, ಡಾ| ವಿ.ಎ.ಮಾಲಿಪಾಟೀಲ್‌, ನಗರಸಭೆ ಅಧ್ಯಕ್ಷ ಜಯಣ್ಣ, ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್‌, ಡಾ| ಆನಂದ ತೀರ್ಥ ಸೇರಿ ಇತರರಿದ್ದರು.

ಹೈಕ ಭಾಗಕ್ಕೆ ವಿಶೇಷ ಸ್ಥಾನಮಾನ ಸಿಕ್ಕಿರುವುದು ಒಂದೆರಡು ವರ್ಷದ ಕತೆಯಲ್ಲ. ಇದರ ಹಿಂದೆ ಸಾಕಷ್ಟು ಜನರ ಶ್ರಮ ಅಡಗಿದೆ. ಆದರೆ, ಸರ್ಕಾರಗಳು ಇಲ್ಲಸಲ್ಲದ ನೆಪ ಹೇಳಿ ಈ ಭಾಗಕ್ಕೆ ಸೌಲಭ್ಯ ದಕ್ಕದಂತೆ ಮಾಡುತ್ತಿವೆ. ಇದು ತೆಲಂಗಾಣ, ಆಂಧ್ರ ಮಾದರಿ ವೈಮನಸ್ಸಿಗೆ ಎಡೆ ಮಾಡುತ್ತಿದೆ. ಈ ಬಗ್ಗೆ ಸಮಾನ ಮನಸ್ಕರು ಮತ್ತೂಮ್ಮೆ ಚಿಂತನೆ ನಡೆಸಿ ಸೂಕ್ತ ನಿರ್ಧಾರಕ್ಕೆ ಬರಬೇಕಿದೆ.
 ವೈಜನಾಥ ಪಾಟೀಲ್‌ ಮಾಜಿ ಸಚಿವರು

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.