ಒಂದೇ ದಿನ 48 ಹೊಸ ಪಾಸಿಟಿವ್ ಪ್ರಕರಣ ಪತ್ತೆ
Team Udayavani, Jul 13, 2020, 2:59 PM IST
ರಾಯಚೂರು: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ನಿರೀಕ್ಷೆ ಮೀರಿ ಹೆಚ್ಚಾಗುತ್ತಿದ್ದು, ರವಿವಾರ ಒಂದೇ ದಿನ 48 ಹೊಸ ಪ್ರಕರಣ ದೃಢಪಟ್ಟಿವೆ. ಇವುಗಳಲ್ಲಿ ಸಂಪರ್ಕದಿಂದ ಹರಡಿದ್ದೇ ಹೆಚ್ಚಾಗಿದ್ದು, ಜಿಲ್ಲಾಡಳಿತಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ.
ಮುಂಬೈ ನಂಟಿನ ಬಳಿಕ ಜಿಲ್ಲೆಯಲ್ಲಿ ಕೋವಿಡ್-19 ಬಹುತೇಕ ಇಳಿಮುಖ ಕಂಡಿತ್ತು. ಒಂದರ್ಥದಲ್ಲಿ ಕೋವಿಡ್ ಮುಕ್ತ ಜಿಲ್ಲೆಯಾಗುವ ಅಂಚಿಗೆ ತಲುಪಿತ್ತು. ಆದರೆ, ಸರ್ಕಾರ ಅಂತರ ಜಿಲ್ಲೆಗಳ ಓಡಾಟಕ್ಕೆ ಅನುವು ಮಾಡಿದ ಬಳಿಕ ಕ್ರಮೇಣ ಪಾಸಿಟಿವ್ ಸಂಖ್ಯೆ ಹೆಚ್ಚುತ್ತ ಸಾಗಿದೆ. ಈಗ ದೃಢಪಟ್ಟ 48 ಪ್ರಕರಣಗಳಲ್ಲಿ 25ಕ್ಕೂ ಅಧಿಕ ಪ್ರಕರಣಗಳು ಪ್ರಾಥಮಿಕ ಸಂಪರ್ಕದಿಂದ ಬಂದಿವೆ. ಇನ್ನೂ ಹಲವು ಪ್ರಕರಣಗಳ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಅದರಲ್ಲೂ ರಾಯಚೂರು ಮತ್ತು ಸಿಂಧನೂರು ನಗರ ಪ್ರದೇಶದಲ್ಲಿಯೇ ವ್ಯಾಪಕವಾಗಿ ವೈರಸ್ ಹರಡುತ್ತಿರುವುದು ಆತಂಕ ಸೃಷ್ಟಿಸಿದೆ.
ರಾಯಚೂರಿನ 13 ಪ್ರಕರಣಗಳಲ್ಲಿ 12 ನಗರ ವಿವಿಧ ಬಡಾವಣೆಗಳಲ್ಲಿ ದೃಢಪಟ್ಟಿವೆ. ಎರಡು ಕುಡೂರು ಗ್ರಾಮ, ಒಂದು ಬೋಳಮಾನದೊಡ್ಡಿಯಲ್ಲಿ ದೃಢಪಟ್ಟಿದೆ. ಇನ್ನೂ ಸಿಂಧನೂರು ನಗರ ಸೇರಿ ದಿದ್ದಿಗಿ ಗ್ರಾಮ, ಹಂಚಿನಾಳ ಕ್ಯಾಂಪ್ ಸೇರಿ ಇತರೆಡೆ 15 ಪ್ರಕರಣ ದೃಢಪಟ್ಟಿವೆ. ಉಳಿದಂತೆ ಸಿರವಾರ, ಲಿಂಗಸುಗೂರು, ಮಾನ್ವಿ ತಾಲೂಕಿನಲ್ಲೂ ಪಾಸಿಟಿವ್ ಪತ್ತೆಯಾಗಿದೆ. ಅದರಲ್ಲಿ ಐದು ಐಎಲ್‌ಐ ಹಾಗೂ ಒಂದು ಸಾರಿ ಪ್ರಕರಣದಡಿ ಸೋಂಕಿತರನ್ನು ಐಸೋಲೇಶನ್‌ಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!
Dharmasthala: ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್ ಧನ್‌ಕರ್
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.