ಕೃಷ್ಣಾ ನದಿಗೆ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
Team Udayavani, Aug 5, 2022, 4:55 PM IST
ನಾರಾಯಣಪುರ: ಬಸವಸಾಗರಕ್ಕೆ ಒಳಹರಿವು ತಗ್ಗಿದ್ದರಿಂದ ಜಲಾಶಯದ ಎಲ್ಲ ಕ್ರಸ್ಟ್‌ಗೇಟ್ ಗಳನ್ನು ಬಂದ್ ಮಾಡಲಾಗಿದೆ. ಸದ್ಯ ಜಲಾಶಯಕ್ಕೆ ಹೊಂದಿಕೊಂಡಿರುವ ಮುರುಡೇಶ್ವರ ಜಲವಿದ್ಯುತ್ ಸ್ಥಾವರ ಮೂಲಕ 6 ಸಾವಿರ ಕ್ಯುಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.
ಗುರುವಾರ ಬೆಳಗ್ಗೆ ಆಲಮಟ್ಟಿ ಶಾಸ್ತ್ರೀ ಸಾಗರದಿಂದ ಬಸವಸಾಗರಕ್ಕೆ ಒಳಹರಿವು 35 ಸಾವಿರ ಕ್ಯೂಸೆಕ್ ನಷ್ಟಿತ್ತು. ಆಗ ಕೃಷ್ಣಾ ನದಿಗೆ 34 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಹರಿಸಲಾಗಿತ್ತು. ಸಂಜೆ ವೇಳೆಗೆ ಒಳಹರಿವು 6 ಸಾವಿರಕ್ಕೆ ಇಳಿಕೆಯಾಗಿದ್ದರಿಂದ ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಜಲಾಶಯದ ಅಧಿಕಾರಿಗಳ ಮಾಹಿತಿಯಂತೆ 492.25 ಮೀಟರ್ ಗರಿಷ್ಟ ಮಟ್ಟದಲ್ಲಿ 491.81 ಮೀಟರ್ ಇದೆ. 33.31 ಟಿಎಂಸಿ ಅಡಿ ಗರಿಷ್ಠ ಸಂಗ್ರಹ ಸಾಮರ್ಥ್ಯದಲ್ಲಿ 31.27 ಟಿಎಂಸಿ ಅಡಿ ನೀರು ಇದೆ. ಒಳಹರಿವು 6 ಸಾವಿರ ಕ್ಯೂಸೆಕ್ ಇದೆ. ಹೊರಹರಿವು 6 ಸಾವಿರ ಕ್ಯೂಸೆಕ್ ಇದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.