ಆದರ್ಶ ಗ್ರಾಮ ಯೋಜನೆಗೆ 7 ಗ್ರಾಮ ಆಯ್ಕೆ: ಪಾಟೀಲ್
Team Udayavani, Mar 4, 2018, 3:45 PM IST
ಮಸ್ಕಿ: ಪಟ್ಟಣದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ 30 ಹಾಸಿಗೆಯ ತಾಲೂಕು ಸರ್ಕಾರಿ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಾಸಕ ಪ್ರತಾಪಗೌಡ ಪಾಟೀಲ್ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನೂತನ ತಾಲೂಕು ಕೇಂದ್ರಗಳಿಗೆ 30 ಹಾಸಿಗೆಯ ಸರ್ಕಾರಿ ಆಸ್ಪತ್ರೆ ಕಟ್ಟಡ ಮಂಜೂರು ಮಾಡಿದೆ. ರಾಯಚೂರು ಜಿಲ್ಲೆಯ ಮೂರು ಕೇಂದ್ರಗಳಲ್ಲಿ 30 ಹಾಸಿಗೆಯ ಆಸ್ಪತ್ರೆ ಕಟ್ಟಡ ಮಂಜೂರು ಆಗಿವೆ. ಮಸ್ಕಿ ನೂತನ ತಾಲೂಕಾಗಿ ಅಸ್ತಿತ್ವಕ್ಕೆ ಬಂದಿದ್ದು, ಪಟ್ಟಣದಲ್ಲಿ 30 ಹಾಸಿಗೆ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲಾಗುತ್ತದೆ. ಕಟ್ಟಡದಲ್ಲಿ ಶಸ್ತ್ರ ಚಿಕಿತ್ಸಾ ಕೊಠಡಿ ಸಹ ಒಳಗೊಂಡಿದೆ. ಕಟ್ಟಡ ನಿರ್ಮಾಣಕ್ಕೆ ಒಂದು ವರ್ಷದ ಕಾಲಾವಧಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಮಸ್ಕಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏಳು ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಎಸ್‌ಸಿ, ಎಸ್‌ಟಿ ಸಮುದಾಯ ಹೆಚ್ಚಾಗಿ ವಾಸಿಸುವ ಪ್ರದೇಶಗಳನ್ನು ಈ ಯೋಜನೆಗೆ ಆಯ್ಕೆ ಮಾಡಲಾಗುತ್ತದೆ. ಅದರಂತೆ
ಸಿಂಧನೂರು ತಾಲೂಕಿನ ವೀರಾಪುರು ಹಾಗೂ ಗುಡಲದಿನ್ನಿ, ಲಿಂಗಸುಗೂರು ತಾಲೂಕಿನ ಅಡವಿಬಾವಿ ತಾಂಡಾ, ಸೋಮಾಪುರ ಮತ್ತು ಮಾನ್ವಿ ತಾಲೂಕಿನ ಕೊಟೆಕಲ್, ಹಂಚಿನಾಳ ಗ್ರಾಮಗಳು ಮುಖ್ಯಮಂತ್ರಿ ಆದರ್ಶ ಗ್ರಾಮ ಯೋಜನೆಯಲ್ಲಿ ಆಯ್ಕೆಯಾಗಿವೆ.
ಪ್ರತಿ ಗ್ರಾಮಕ್ಕೂ 75 ಲಕ್ಷ ರೂ. ಮಂಜೂರು ಮಾಡಲಾಗುವುದು. ಶೇ.50ರಷ್ಟು ಅನುದಾನವನ್ನು ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ಬಳಸಲಾಗುವುದು. ಉಳಿದ ಅನುದಾನವನ್ನು ಮೂಲ ಸೌಕರ್ಯ ಕಲ್ಪಿಸಲು ಬಳಸಲಾಗುತ್ತದೆ ಎಂದು ವಿವರಿಸಿದರು.
ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ನಾಗರಾಜ ಚೌಶೆಟ್ಟಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.