ಸೌಲಭ್ಯಗಳಿಲ್ಲದ ಪ್ರವಾಸಿ ತಾಣ; ಪ್ರಚಾರಕ್ಕೆ ಕಾಂಚಾಣ


Team Udayavani, Jun 18, 2022, 3:16 PM IST

16tourism

ರಾಯಚೂರು: ಹೊಟ್ಟೆಗೆ ಹಿಟ್ಟಿಲ್ಲವೆಂದರೂ ಜುಟ್ಟಿಗೆ ಮಲ್ಲಿಗೆ ಕೇಡು ಎಂಬ ಗಾದೆ ಮಾತಿನಂತಾಗಿದೆ ಪ್ರವಾಸೋದ್ಯಮ ಇಲಾಖೆ ಪರಿಸ್ಥಿತಿ. ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳು ನಿರ್ವಹಣೆ ಇಲ್ಲದೇ ಹಾಳು ಬಿದ್ದಿದ್ದರೂ ಜನರಿಗೆ ಮಾಹಿತಿ ನೀಡಲು ಮಾತ್ರ ಲಕ್ಷಗಟ್ಟಲೇ ಖರ್ಚು ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿರುವ ಕೆಲವೊಂದು ಪ್ರವಾಸಿ ತಾಣಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ನಗರದಲ್ಲಿ ಎರಡು ಡಿಜಿಟಲ್‌ ವಾಲ್‌ಗ‌ಳನ್ನು ಅಳವಡಿಸಲಾಗಿದೆ. ನಗರದ ತಹಶೀಲ್ದಾರ್‌ ಕಚೇರಿ ಬಳಿ ಹಾಗೂ ರೈಲ್ವೆ ನಿಲ್ದಾಣ ಹತ್ತಿರ ಸೋಲಾರ್‌ ಡಿಜಿಟಲ್‌ ವಾಲ್‌ಗ‌ಳನ್ನು ಅಳವಡಿಸಿದ್ದು, ಅವುಗಳಲ್ಲಿ ಜಿಲ್ಲೆಯ 11 ಪ್ರವಾಸಿ ತಾಣಗಳ ಮಾಹಿತಿ ಪ್ರಕಟಗೊಳ್ಳಲಿದೆ. ಅದರ ಜತೆಗೆ ಪ್ರವಾಸಿ ತಾಣಗಳ ದೊಡ್ಡ ದೊಡ್ಡ ಚಿತ್ರಗಳನ್ನು ಸಿದ್ಧಪಡಿಸಿದ್ದು, ನಗರದ ಪ್ರಮುಖ ಸ್ಥಳಗಳಲ್ಲಿ ಅಳವಡಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.

ಡಿಜಿಟಲ್‌ ಬೋರ್ಡ್‌ನಲ್ಲಿ ರಾಯಚೂರು ಕೋಟೆ, ಮಾವಿನ ಕೆರೆ, ಕುರ್ವಾಪುರದ ದತ್ತಪೀಠ, ಪಂಚಮುಖೀ ಆಂಜನೇಯ ಸ್ವಾಮಿ ದೇವಸ್ಥಾನ, ಮಸ್ಕಿ ಅಶೋಕ ಶಾಸನ, ಮುದಗಲ್‌ ಕೋಟೆ, ಹಟ್ಟಿ ಚಿನ್ನದ ಗಣಿ, ಕಲ್ಲೂರು ಮಹಾಲಕ್ಷ್ಮೀ, ಗಬ್ಬೂರಿನ ಐತಿಹಾಸಿಕ ಸ್ಮಾರಕಗಳು, ಅಂಬಾಮಠ ಸಿಂಧನೂರು, ಗುರುಗುಂಟ ಅಮರೇಶ್ವರ ದೇವಸ್ಥಾನಗಳ ಮಾಹಿತಿ ಇರಲಿದೆ. ಇಷ್ಟೊಂದು ಪ್ರವಾಸಿ ತಾಣಗಳಿಗೆ ಜನರನ್ನು ಕೈ ಬೀಸಿ ಕರೆಯುವ ಪ್ರವಾಸೋದ್ಯಮ ಇಲಾಖೆ, ಒಮ್ಮೆಯಾದರೂ ಅದರಲ್ಲಿನ ಕೆಲ ಸ್ಥಳಗಳಿಗೆ ಭೇಟಿ ನೀಡಿ ಬರಬೇಕಿದೆ. ಪ್ರಚಾರಕ್ಕಾಗಿ ಲಕ್ಷಗಟ್ಟಲೇ ಹಣ ಸುರಿಯುವ ಮುನ್ನ ಆ ಸ್ಥಳಗಳಲ್ಲಿ ಕನಿಷ್ಠ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತ, ಸರ್ಕಾರದೊಟ್ಟಿಗೆ ಚರ್ಚಿಸಿ ಅಭಿವೃದ್ಧಿಗೆ ಮುಂದಾಗಬೇಕಿದೆ.

ನಿರ್ವಹಣೆ ಕಾಣದ ತಾಣಗಳು

ಸರ್ಕಾರ ಪ್ರಚಾರ ಮಾಡುತ್ತಿರುವ ಕೆಲ ತಾಣಗಳು ನಿರ್ವಹಣೆ ಇಲ್ಲದೇ ಅಕ್ಷರಶಃ ಹಾಳು ಕೊಂಪೆಯಾಗಿವೆ. ರಾಯಚೂರು ಕೋಟೆಯೇ ಹುಲ್ಲು ಬೆಳೆದು, ಹೋಗಲು ದಾರಿ ಇಲ್ಲದೇ ಹಾಳು ಸೂಸುತ್ತಿದೆ. ಕೋಟೆಯನ್ನೆಲ್ಲ ಒತ್ತುವರಿ ಮಾಡಿಕೊಂಡಿದ್ದು ಹೇಳುವವರು ಕೇಳುವವರೇ ಇಲ್ಲದ ಸ್ಥಿತಿ ಇದೆ.

ಕೋಟೆ ಆರಂಭದಲ್ಲಿ ಸ್ಥಾಪಿಸಿದ್ದ ವಾಚನಾಲಯ ಕೂಡ ಹಾಳು ಬಿದ್ದು, ಮೊಣಕಾಲುದ್ದ ಹುಲ್ಲು ಬೆಳೆದಿದೆ. ಕೋಟೆ ಮೇಲೆ ಅಳವಡಿಸಿದ್ದ ಕುರ್ಚಿಗಳೆಲ್ಲ ಹಾಳಾಗಿದ್ದು, ವಿದ್ಯುದ್ದೀಪಗಳು ಹಾಳಾಗಿವೆ. ಕೋಟೆ ಅಭಿವೃದ್ಧಿ ಸಮಿತಿ ಕೂಡ ಇದ್ದೂ ಇಲ್ಲದಂತಾಗಿದೆ. ಇನ್ನೂ ಮಾವಿನ ಕೆರೆಯಂತೂ ಗಬ್ಬು ನಾರುವ ತಾಣವಾಗಿ ಮಾರ್ಪಟ್ಟಿದ್ದು, ಅದನ್ನು ಆಸ್ವಾದಿಸಲು ಒಂದು ಸುಂದರ ಸ್ಥಳ ಕೂಡ ಮಾಡಿಲ್ಲ. ಚರಂಡಿ ನೀರನ್ನೆಲ್ಲ ಕೆರೆಗೆ ಹರಿಸಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಕೆರೆ ಒತ್ತುವರಿಯಾಗುತ್ತಿದ್ದು ತಡೆಯುವ ಇಚ್ಛಾಶಕ್ತಿ ಯಾರಿಗೂ ಕಾಣುತ್ತಿಲ್ಲ. ಅದೆಲ್ಲದಕ್ಕಿಂತ ಎಂಟು ಕೋಟಿ ರೂ. ಹಣ ಮೀಸಲಿಟ್ಟಿದ್ದರೂ ಈವರೆಗೆ ಅಭಿವೃದ್ಧಿ ಕೆಲಸ ಶುರುವಾಗಿಲ್ಲ. ಗಬ್ಬೂರಿನ ಐತಿಹಾಸಿಕ ಸ್ಥಳ ವಿಜಯನಗರ ಸಾಮ್ರಾಜ್ಯಕ್ಕೆ ಒಳಪಟ್ಟಿತ್ತು. ಅಲ್ಲಿ ಇಂದಿಗೂ ಅನೇಕ ದೇಗುಲಗಳು ನೆಲದೊಳಗೆ ಅವಿತು ಹೋಗಿವೆ ಎನ್ನುತ್ತಾರೆ ಇತಿಹಾಸ ತಜ್ಞರು.

ಎಲ್ಲ ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡಿದರೆ ಇದೊಂದು ಅದ್ಭುತ ಪ್ರೇಕ್ಷಣೀಯ ಸ್ಥಳವಾಗುವುದರಲ್ಲಿ ಶಂಕೆ ಬೇಡ. ಆದರೆ, ಪ್ರವಾಸೋದ್ಯಮ ಇಲಾಖೆಯಾಗಲಿ, ಪ್ರಾಚ್ಯವಸ್ತು ಇಲಾಖೆಯಾಗಲಿ ಈ ಸ್ಥಳದ ಬಗ್ಗೆ ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಒಂದು ವಿಜಯ ವಿಠ್ಠಲ ದೇವಸ್ಥಾನ ಉತ್ಖನನ ಮಾಡಿದ್ದು, ಅದನ್ನು ನೋಡಲು ಹೋಗಬೇಕಷ್ಟೇ. ಕುರ್ವಪುರ ದತ್ತಪೀಠಕ್ಕೆ ಹೋಗಲು ಇಂದಿಗೂ ಕೃಷ್ಣ ನದಿಯಲ್ಲಿ ತೆಪ್ಪದ ಮೂಲಕವೇ ಹೋಗಬೇಕು. ಸೇತುವೆ ನಿರ್ಮಾಣ ಕಾರ್ಯ ಇಂದಿಗೂ ನನೆಗುದಿಗೆ ಬಿದ್ದಿದೆ. ಕಾಟಾಚಾರಕ್ಕೆ ಪ್ರಚಾರ ಮಾಡುತ್ತಿರುವ ಪ್ರವಾಸೋದ್ಯಮ ಇಲಾಖೆ ನಡೆ ಹಾಸ್ಯಾಸ್ಪದ ಎನಿಸುತ್ತಿದೆ.

ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳ ಬಗ್ಗೆ ಪ್ರಚಾರ ಮಾಡುವ ಉದ್ದೇಶದಿಂದ ಡಿಜಿಟಲ್‌ ವಾಲ್‌ ಅಳವಡಿಸಲಾಗಿದೆ. ಅದರ ಜತೆಗೆ ಕೆಲವೊಂದು ದೊಡ್ಡ ಫೋಟೋಗಳನ್ನು ಅಳವಡಿಸಲು ಸರ್ಕಾರದ ಆದೇಶವಾಗಿದ್ದರಿಂದ ಕ್ರಮ ವಹಿಸಲಾಗಿದೆ. ನಾನು ಈಚೆಗೆ ಪ್ರಭಾರನಾಗಿ ಅಧಿಕಾರ ವಹಿಸಿಕೊಂಡಿದ್ದು, ಪ್ರವಾಸಿಗಳ ತಾಣಗಳ ಸ್ಥಿತಿಗತಿ ಕುರಿತು ಶೀಘ್ರದಲ್ಲೇ ಮಾಹಿತಿ ಪಡೆದು ಕ್ರಮ ವಹಿಸುವೆ. -ಎಂ.ಡಿ. ಬಿಲಾಲ್‌, ಪ್ರಭಾರ ಸಹಾಯಕ ನಿರ್ದೇಶಕ, ಪ್ರವಾಸೋದ್ಯಮ ಇಲಾಖೆ

-ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEP-training

National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.