ಕೇಂದ್ರ ಸರ್ಕಾರದ ವಿರುದ್ಧ ವಿಶ್ವಾಸಘಾತುಕ ದಿನಾಚರಣೆ
Team Udayavani, May 27, 2018, 4:15 PM IST
ರಾಯಚೂರು: ದಿನಬಳಕೆ, ಅಡುಗೆ ಅನಿಲ, ತೈಲ ಬೆಲೆ ನಿಯಂತ್ರಿಸದೆ, ಕೊಟ್ಟ ಭರವಸೆ ಈಡೇರಿಸದೆ ನಾಲ್ಕನೇ ವರ್ಷದ ಸಂಭ್ರಮಾಚರಣೆ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿ ವಿಶ್ವಾಸಘಾತುಕ ದಿನ ಆಚರಿಸಿದರು. ನಗರದ ಅಂಬೇಡ್ಕರ್ ವೃತ್ತದಲ್ಲಿ ಧರಣಿ ಕುಳಿತ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ತರಕಾರಿ ಹಾರ ಹಾಕಿಕೊಂಡು, ಖಾಲಿ ಸಿಲಿಂಡರ್ ಮುಂದಿಟ್ಟುಕೊಂಡು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಅಚ್ಛೆ ದಿನ್ ಆಯೇಗಾ ಎಂದು ನಾಲ್ಕು ವರ್ಷ ದೇಶದ ಜನರನ್ನು ವಂಚಿಸಿದ್ದಾರೆ. ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಯಾವೊಂದು ಭರವಸೆ ಈಡೇರಿಸಿಲ್ಲ. ಆದರೆ, ಈಗ ಯಶಸ್ವಿ ನಾಲ್ಕನೇ ವರ್ಷ ಸಂಭ್ರಮಾಚರಣೆ ಮಾಡುತ್ತಿರುವುದು ಜನರ ವಿಶ್ವಾಸಕ್ಕೆ ಮಾಡಿದ ದ್ರೋಹವಾಗಿದೆ. ಹೀಗಾಗಿ ಈ ದಿನವನ್ನು ನಾವು ವಿಶ್ವಾಸಘಾತುಕ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದರು.
ಅಡುಗೆ ಅನಿಲ ದರ ಗಗನಕ್ಕೇರಿದೆ. ತೈಲ ಬೆಲೆ 80 ರೂ. ತಲುಪಿದೆ. ದಿನಬಳಕೆ ವಸ್ತುಗಳು ಬಡವರ ಕೈಗೆಟುಕದಂತಾಗಿದೆ. ಆದರೆ, ಬಡವರ ಪರ ಎಂದು ಬಡಾಯಿ ಕೊಚ್ಚಿಕೊಳ್ಳುವ ಪ್ರಧಾನಿ, ದೇಶದ ಜನರನ್ನು ಕಷ್ಟದಲ್ಲಿರಿಸಿದ್ದಾರೆ. ನೋಟು ಅಮಾನ್ಯಿಕರಣ, ಜಿಎಸ್‌ಟಿಯಂಥ ಆರ್ಥಿಕ ನೀತಿ ಜಾರಿಗೊಳಿಸುವ ಮೂಲಕ
ದೇಶದ ಜನರನ್ನು ಸಂಕಷ್ಟಕ್ಕೀಡು ಮಾಡಿದ್ದಾರೆ. ರಾಜ್ಯ ಜಲ ವಿವಾದಗಳ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸದೆ ರಾಜ್ಯದ ರೈತರನ್ನು ಸಂಕಷ್ಟಕ್ಕೀಡು ಮಾಡಿದ್ದಾರೆ. ಹೀಗಾಗಿ ಈ ದಿನವನ್ನು ವಿಶ್ವಾಸಘಾತುಕ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.
ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಿರ್ಮಲಾ ಬೆಣ್ಣೆ, ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ, ಮುಖಂಡರಾದ ಪಾರಸಮಲ್
ಸುಖಾಣಿ, ನಗರಸಭೆ ಉಪಾಧ್ಯಕ್ಷ ಜಯಣ್ಣ, ಜಿ.ಬಸವರಾಜ ರೆಡ್ಡಿ, ಕೆ.ಶಾಂತಪ್ಪ, ರುದ್ರಪ್ಪ ಅಂಗಡಿ, ಜಿ.ಶಿವಮೂರ್ತಿ, ಅಬ್ದುಲ್ ಕರೀಂ, ಅಮರೇಗೌಡ ಹಂಚಿನಾಳ, ದರೂರು ಬಸವರಾಜ ಪಾಟೀಲ, ವಸಂತಕುಮಾರ್ ಅರೋಲಿ ಸೇರಿ ಅನೇಕ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.