ಮತದಾನ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಕಡ್ಡಾಯ
Team Udayavani, Jul 26, 2022, 4:54 PM IST
ರಾಯಚೂರು: ಸಾರ್ವಜನಿಕರು ಮತದಾನದ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ನೋಂದಣಿ ಮಾಡಿಸುವ ಪ್ರಕ್ರಿಯೆಗೆ ವಿವಿಧ ರಾಜಕೀಯ ಪಕ್ಷದ ಮುಖಂಡರು ಅಗತ್ಯ ನೆರವು ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ| ಕೆ.ಆರ್.ದುರುಗೇಶ್ ತಿಳಿಸಿದರು.
ನಗರದ ಡಿಸಿ ಕಚೇರಿಯ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಸೋಮವಾರ ಕೇಂದ್ರ ಚುನಾವಣೆ ಆಯೋಗ ಆದೇಶದ ಪ್ರಕಾರ ಗುರುತಿನ ಚೀಟಿಗೆ ಆಧಾರ್ ನೋಂದಣಿಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದರು.
ಆ.1ರಿಂದ ಡಿ.31ವರೆಗೆ ಹೊಸ ಮತದಾರರು ಸೇರ್ಪಡೆ ಹಾಗೂ ಮತದಾನ ಗುರುತಿನ ಚೀಟಿಗೆ ಆಧಾರ್ ನೋಂದಣಿ ಮಾಡಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಿಇಒ, ಡಿಇಒ ಹಾಗೂ ಇಆರ್‌ಒಗಳ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳು ಮತ್ತು ವಿಶೇಷ ಶಿಬಿರಗಳನ್ನು ನಡೆಸಲಾಗುವುದು. ಇದಕ್ಕೆ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸರ್ಕಾರೇತರ ಸಂಸ್ಥೆ (ಎನ್ ಜಿಒ) ಗಳು ಸಹಕರಿಸಬೇಕು ಎಂದರು.
ಕೇಂದ್ರ ಹಾಗೂ ರಾಜ್ಯ ಚುನಾವಣೆ ಆದೇಶ ಪ್ರಕಾರ ಮತದಾನ ಗುರುತಿನ ಚೀಟಿಗೆ ಆಧಾರ್ ನೋಂದಣಿ ಮಾಡುವುದು ಕಡ್ಡಾಯ. ಗರುಡ ಮತ್ತು ವಿಎಚ್ ಆ್ಯಪ್‌ಗ್ಳ ಮೂಲಕ ನೋಂದಣಿ ಮಾಡುವಂತೆ ಸಾರ್ವಜನಿಕರಿಗೆ ಸಲಹೆ ನೀಡಬೇಕು. ಅಲ್ಲದೆ ಈ ಕುರಿತು ಮುಂದಿನ ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದರು.
ಆಫ್‌ಲೈನ್‌ನಲ್ಲಿ 6ಬಿ ಫಾರಂನಲ್ಲಿ ಮತದಾರರಿಂದ ಸ್ವಯಂ ಪ್ರೇರಣೆ ಮೂಲಕ ಆಧಾರ್ ಸಂಖ್ಯೆ ಸಂಗ್ರಹಿಸಲು ಮನೆ-ಮನೆಗೆ ಬಿಎಲ್ ಒಗಳನ್ನು ನೇಮಿಸುತ್ತೇವೆ. ಆಧಾರ್ ಕಾರ್ಡ್ ಎಲ್ಲ ಭಾರತೀಯ ನಾಗರಿಕರಿಗೆ ಅತ್ಯಗತ್ಯ ದಾಖಲೆಯಾಗಿದೆ. ಇದು ಗುರುತಿನ ಪ್ರಾಥಮಿಕ ರೂಪವಾಗಿದೆ. ಮತ್ತು ಡ್ರೈವಿಂಗ್ ಲೈಸೆನ್ಸ್, ಪ್ರಯಾಣ ಟಿಕೆಟ್‌ಗಳು ಮತ್ತು ಮುಂತಾದ ಸೇವೆಗಳ ಸಮೂಹ ಪಡೆಯುವ ಅಗತ್ಯವಿದೆ ಎಂದರು. ವಿವಿಧ ಪಕ್ಷದ ವಕ್ತಾರರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.