ವಿಕಲಚೇತನರಲ್ಲಿರಲಿ ಸಾಧನೆಯ ಹಂಬಲ: ಶರತ್
Team Udayavani, Dec 4, 2018, 2:09 PM IST
ರಾಯಚೂರು: ವಿಕಲತೆ ಎನ್ನುವುದು ದೇಹಕ್ಕೆ ಹೊರತು ಮನಸಿಗಲ್ಲ. ಅಂಗವೈಕಲ್ಯವನ್ನು ದೌರ್ಬಲ್ಯ ಎಂದು ಭಾವಿಸದೆ ನಿಮಗಿರುವ ವಿಶೇಷ ಶಕ್ತಿಯಿಂದ ಸಾಧನೆ ಮಾಡಿ ಎಂದು ಜಿಲ್ಲಾಧಿಕಾರಿ ಶರತ್.ಬಿ ಹೇಳಿದರು.
ಜಿಲ್ಲಾಡಳಿತ, ಜಿಪಂ, ನಗರಸಭೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸೋಮವಾರ ನಗರದ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ವಿಶೇಷಚೇತನರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲರಿಗೂ ಒಂದಲ್ಲ ಒಂದು ನ್ಯೂನ್ಯತೆ ಇರುತ್ತದೆ. ಅದನ್ನು ಮೆಟ್ಟಿ ನಿಲ್ಲಬೇಕು. ವಿಶೇಷಚೇತನರು ಕೂಡ ನಾನು ಅಶಕ್ತ ಎಂಬ
ಖನ್ನತೆ ಬಿಟ್ಟು ಇತರರಂತೆ ಸಾಧಿ ಸುವ ಹಂಬಲ ಹೊಂದಬೇಕು. ದೈಹಿಕ ಶಕ್ತಿ ಇಲ್ಲದಿದ್ದರೇನಂತೆ ಬೌದ್ಧಿಕವಾಗಿ ಸಾಮಾನ್ಯರಿಗಿಂತ
ಹೆಚ್ಚು ಶಕ್ತಿ ನಿಮ್ಮಲ್ಲಿದೆ ಎನ್ನುವುದನ್ನು ಮನಗಾಣಬೇಕು ಎಂದರು.
ಇಲ್ಲಿ ಕೆಲವೆಡೆ ವಿಕಲಚೇತನರು ಎಂದು ನಮೂದಿಸಲಾಗಿದೆ. ಅದನ್ನು ವಿಶೇಷಚೇತನರು ಎಂದು ಬಳಸುವುದು ಸೂಕ್ತ. ಮುಂದೆ ಅದೇ ರೀತಿ ಬಳಸಿ. ಅಲ್ಲದೇ, ಯಾವುದೇ ಅಧಿಕಾರಿಗಳು ತಮ್ಮ ಕಚೇರಿಗೆ ಬರುವ ವಿಶೇಷಚೇತನರ ಬಳಿ ಖುದ್ದು ತೆರಳಿ ಸಮಸ್ಯೆ ಆಲಿಸಿ ಎಂದು ಸೂಚಿಸಿದರು. ಜಿಲ್ಲೆಯಲ್ಲಿ ವಿಕಲಚೇತನರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳು,
ಸಂಘಟನೆಗಳ ಜತೆ ಚರ್ಚಿಸಿ ಪರಿಹಾರ ಕ್ರಮಗಳನ್ನು ಜರುಗಿಸಲಾಗುವುದು ಎಂದರು.
ದೇವದುರ್ಗದ ಮನೋಚೈತನ್ಯ ಸಂಸ್ಥೆ ಅಧ್ಯಕ್ಷ ಬಸನಗೌಡ ದೇಸಾಯಿ ಉಪನ್ಯಾಸ ನೀಡಿ, ಸರ್ಕಾರ ವಿಕಲಚೇತನರಿಗಾಗಿ
ನೀಡಿರುವ ಶೇ.5ರಷ್ಟು ಮೀಸಲಾತಿಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದರು.
ಭಂಡಾರಿ ಆಸ್ಪತ್ರೆಯ ವೈದ್ಯ ಡಾ| ರಿಯಾಜುದ್ದೀನ್, ರೋಟರಿ ಕ್ಲಬ್ ಅಧ್ಯಕ್ಷ ಶಿವಶಂಕರ ಮಾತನಾಡಿದರು. ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿಶೇಷಚೇತನರ ಒಳಿತಿಗಾಗಿ ಕೆಲಸ ಮಾಡಿದ ಸಂಘ-ಸಂಸ್ಥೆಗಳು ಮತ್ತು ಸ್ವಯಂ ಸೇವಕರನ್ನು ಸನ್ಮಾನಿಸಲಾಯಿತು.
ಜಿಪಂ ಸಿಇಒ ನಲಿನ್ ಅತುಲ್, ವಿಕಲಚೇತನ ಇಲಾಖೆ ಅಧಿಕಾರಿ ಶ್ರೀದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಭಾರ ಉಪನಿರ್ದೇಶಕ ವೀರನಗೌಡ, ವಿವಿಧ ಸಂಘಟನೆಗಳ ಮುಖಂಡರಾದ ಪವನ ಪಾಟೀಲ, ಅನಿಲ ಕುಮಾರ, ರಾಘವೇಂದ್ರ, ಮಹ್ಮದ್ ಅಲಿ, ಹುಸೇನ್ ಪಾಷಾ ಬನ್ನಿಗೋಳ, ಬಾಬುಮಿಯ್ಯ, ಲಿಂಗನಗೌಡ, ರμ, ಹೊನ್ನಪ್ಪ ಸೇರಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.