ನ್ಯಾಯಸಮತ ಚುನಾವಣೆಗೆ ಕ್ರಮ
Team Udayavani, Apr 30, 2018, 12:11 PM IST
ಚಿತ್ರದುರ್ಗ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಹಾಗೂ ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸ್ವೀಪ್ ಸಮಿತಿ ವತಿಯಿಂದ ಭಾನುವಾರ ಆಯೋಜಿಸಿದ್ದ “ಸದೃಢ ಪ್ರಜಾಪ್ರಭುತ್ವದಲ್ಲಿ ನಾನೂ ಭಾಗಿ’ ಸಹಿ ಸಂಗ್ರಹ ಅಭಿಯಾನ ಹಾಗೂ ಎಫಿಕ್ ಬೈಕ್ ರೈಡ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು. ಮಹಿಳೆಯರು ಸ್ವಾವಲಂಬಿಯಾಗಿ ಬಾಳಲು ಚುನಾವಣೆಯಲ್ಲಿ ಸಕ್ರಿಯರಾಗಿ ಭಾಗವಹಿಸಬೇಕು. ಮಹಿಳಾ ಸ್ನೇಹಿ ಸರ್ಕಾರಗಳನ್ನು ತರಬೇಕಾದರೆ ಭಾಗವಹಿಸುವಿಕೆ ಅತೀ ಮುಖ್ಯ. ಯಾರೂ ಸಹ ಮಹಿಳಾ ಸಬಲೀಕರಣ ಮಾಡಲು ಸಾಧ್ಯವಿಲ್ಲ. ಇದು ನಮ್ಮ ಬುದ್ಧಿವಂತಿಕೆ ಹಾಗೂ ಮನಸ್ಸಿನಿಂದಲೇ ಪ್ರಾರಂಭವಾಗಬೇಕು. ಈ ಹಿನ್ನೆಲೆಯಲ್ಲಿ ಮಹಿಳೆಯರು ಮನೆಯಿಂದ ಹೊರಬಂದು ಮತದಾನ ಮಾಡಿದಾಗ ಇದು ಸಾಧ್ಯವಾಗಲಿದೆ ಎಂದರು.
ಎಫಿಕ್ ರೈಡ್ ಬೈಕ್ ರ್ಯಾಲಿಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ನಿಜವಾಗಲು ಇದು ಅರ್ಥ ಪೂರ್ಣವಾದ ಕಾರ್ಯಕ್ರಮ. ಬೆಂಗಳೂರಿನಿಂದ ಈ ರೈಡರ್ಸ್ ಆಗಮಿಸಿದ್ದು, ಚಿತ್ರದುರ್ಗ ನಗರದ ವಿವಿಧ ಬಡಾವಣೆಗಳಲ್ಲಿ ಹಾಗೂ ತಾಲೂಕಿನ ಹಲವು ಗ್ರಾಮಗಳಲ್ಲಿ ಸಂಚರಿಸುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಕೈಜೋಡಿಸಿದ್ದಾರೆ ಎಂದು ತಿಳಿಸಿದರು.
ಜಿಪಂ ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪಿ.ಎನ್. ರವೀಂದ್ರ ಮಾತನಾಡಿ, ಮತದಾರರ ಜಾಗೃತಿಗೆ ಬೈಕ್ ರ್ಯಾಲಿ ಹಾಗೂ ಸಹಿ ಸಂಗ್ರಹ ಅಭಿಯಾನ ಏರ್ಪಡಿಸಲಾಗಿದೆ. ಜೊತೆಗೆ ಶಾಲಾ ಮಕ್ಕಳ ಪೋಷಕರಿಂದ ಮತದಾನ ಸಂಕಲ್ಪ ಪತ್ರವನ್ನು ಪಡೆಯುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ. ಚಿತ್ರದುರ್ಗ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿನ ನೂತನ್ ವಿದ್ಯಾಸಂಸ್ಥೆಯಲ್ಲಿ ಪೋಷಕರಿಂದ ಮತದಾನ ಸಂಕಲ್ಪ ಪತ್ರ ಪಡೆಯಲು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಉಪವಿಭಾಗಾಧಿಕಾರಿ ಹಾಗೂ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಜವರೇಗೌಡ, ತಹಶೀಲ್ದಾರ್ ಮೋಹನ್ ಕುಮಾರ್, ಪೌರಾಯುಕ್ತ ಎಂ.ಕೆ. ನಲವಡಿ, ಎಫಿಕ್ ರೈಡರ್ಸ್ ತಂಡದ ದಶಮಿ ಮೋಹನ್, ಅಖೀಲೇಶ್, ನೂತನ್ ಸಂಸ್ಥೆಯ ಮಂಜುನಾಥ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.