ಸೌಹಾರ್ದ ಜೀವನ ಸಾಗಿಸಲು ಸಲಹೆ
Team Udayavani, Jul 13, 2018, 3:22 PM IST
ಲಿಂಗಸುಗೂರು: ಸಾಮಾಜಿಕ ಬಹಿಷ್ಕಾರದಂತಹ ಹೀನ ಕೆಲಸಕ್ಕೆ ಹೋಗದೇ ಒಂದೇ ಊರಿನಲ್ಲಿ ಸೌಹಾರ್ದದಿಂದ ಬದುಕು ಸಾಗಿಸಬೇಕೆಂದು ಸಹಾಯಕ ಆಯುಕ್ತ ಎಂ.ಪಿ.ಮಾರುತಿ ಹೇಳಿದರು.
ಪಟ್ಟಣದ ಸಹಾಯಕ ಆಯುಕ್ತರ ಕಚೇರಿಯಲ್ಲಿ ತಾಲೂಕಿನ ಯರಜಂತಿ ಗ್ರಾಮದಲ್ಲಿ ದಲಿತ ಕುಟಂಬಗಳಿಗೆ ಸಾಮಾಜಿಕ ಬಹಿಷ್ಕಾರ ವಿಷಯವಾಗಿ ನಡೆದ ಅಧಿಕಾರಿಗಳು, ದಲಿತರ ಹಾಗೂ ಗ್ರಾಮಸ್ಥರ ಸಭೆಯಲ್ಲಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಅಣ್ಣ-ತಮ್ಮ ಇದ್ದಂತೆ. ತಾರತಮ್ಯ ಮಾಡಬಾರದು. ಸಾಮಾಜಿಕ
ಬಹಿಷ್ಕಾರ ಹಾಕವುದು ಸರಿಯಲ್ಲ. ಇದು ಕಾನೂನಿಗೆ ವಿರುದ್ಧವಾಗಿದೆ. ಎರಡೂ ಕೋಮಿನವರಿಗೆ ಕರೆಸಿ ಸಂಧಾನ ಮಾಡಿಸಿ. ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಗ್ರಾಮದ ಹಿರಿಯರಿಗೆ ಸಲಹೆ ನೀಡಿದರು.
ಯರಜಂತಿ ಗ್ರಾಮದಲ್ಲಿ ದಲಿತರಿಗೆ ಕುಡಿಯುವ ನೀರಿಗಾಗಿ 5 ಲಕ್ಷ ರೂ. ಅನುದಾನ ಒದಗಿಸಲಾಗುವುದು ಹಾಗೂ ಅಗತ್ಯ ಸೌಲಭ್ಯ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಅಂಗನವಾಡಿ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪ್ರವೇಶಾತಿಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಬಿಇಒ ಹಾಗೂ ಸಿಡಿಪಿಒಗೆ ಸೂಚಿಸಿದರು.
ಆಕ್ರೋಶ: ಯರಜಂತಿ ಗ್ರಾಮದಲ್ಲಿ ಬಹಿಷ್ಕಾರ ವಿಷಯವನ್ನು ಬಹಿರಂಗಪಡಿಸಿದ್ದು ಮಾಧ್ಯಮದವರು. ಅವರನ್ನು ದೂರವಿಟ್ಟು ಸಭೆ ನಡೆಸುವುದು ಎಷ್ಟರಮಟ್ಟಿಗೆ ಸರಿ ಎಂದು ಮುಖಂಡ ಮೋಹನ ಗೋಸ್ಲೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಸ್‌ಪಿ ಎಸ್.ಎಚ್.ಸುಬೇದಾರ, ತಹಶೀಲ್ದಾರ್ ಚಾಮರಾಜ ಪಾಟೀಲ, ಸಿಪಿಐ ವಿ.ಎಸ್.ಹಿರೇಮಠ, ಬಿಇಒ ಚಂದ್ರಶೇಖರ ಬಂಡಾರಿ, ಸಿಡಿಪಿಒ ಪ್ರೇಮಮೂರ್ತಿ, ಸಮಾಜ ಕಲ್ಯಾಣಾಧಿಕಾರಿ ರವಿ, ದಸಂಸ ಮುಖಂಡರಾದ ಹನುಮಂತ ವೆಂಕಟಾಪುರ, ಅಜ್ಜಪ್ಪ ಕರಡಕಲ್, ಶಿವಪ್ಪ ಯರಜಂತಿ, ನಾಗಪ್ಪ, ಹುಲಗಮ್ಮ, ಹನುಮಮ್ಮ, ಈರಮ್ಮ,
ಮಹಾದೇವಪ್ಪ ಪರಾಂಪುರ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.