ಕೆರೆ ಮಲಿನ ತಡೆಗೆ ಗ್ರಾಮಸ್ಥರಿಗೆ ಸಲಹೆ
Team Udayavani, Apr 16, 2018, 4:43 PM IST
ಬಳಗಾನೂರು: ಸಮೀಪದ ಗೋನವಾರ ಹಾಗೂ ದುಮತಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡ ಕೆರೆ ಪುನಶ್ಚೇತನ ಕಾಮಗಾರಿಗೆ ಹೈದರಾಬಾದ್ ಕರ್ನಾಟಕ ಪ್ರಾದೇಶಿಕ ನಿರ್ದೇಶಕ ಗಂಗಾಧರ ರೈ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರು ಹಮ್ಮಿಕೊಂಡ ಸಮಾಜಮುಖೀ ಕಾರ್ಯಕ್ರಮಗಳಲ್ಲಿ ಕೆರೆಗಳ ಅಭಿವೃದ್ಧಿ ಕೂಡಾ ಒಂದಾಗಿದೆ. ಕ್ಷೇತ್ರದ ಸಹಕಾರ ಗ್ರಾಮಸ್ಥರ ಸಹಯೋಗದಲ್ಲಿ ಸುಮಾರು 165 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕೆರೆಗಳ ಪುನಶ್ಚೇತನ ಮಾಡುವ ಮೂಲಕ ಶುದ್ಧ ಕುಡಿಯುವ ನೀರು ಒದಗಿಸುವುದು ಉದ್ದೇಶವಾಗಿದೆ. ಕೆರೆ ಮಲಿನವಾಗದಂತೆ ಗ್ರಾಮಸ್ಥರು ಜಾಗ್ರತೆ ವಹಿಸಬೇಕು ಎಂದರು.
ಕೆರೆ ಪುನಶ್ಚೇತನ ಸಮಿತಿ ಅಧ್ಯಕ್ಷ ನೀಲಕಂಠಪ್ಪ ನಾಯಕ ಮಾತನಾಡಿ, ಗ್ರಾಮೀಣ ಜನರ ಸಂಕಷ್ಟಗಳನ್ನು ದೂರ ಮಾಡುವುದು ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಉದ್ದೇಶವಾಗಿದೆ ಎಂದರು. ಶ್ರೀ ಗಪೂರ ತಾತಾ ಹಾಗೂ ಶ್ರೀ ಮಲ್ಲಯ್ಯ ತಾತನವರು ಸಾನಿಧ್ಯ ವಹಿಸಿದ್ದರು. ಜಿಲ್ಲಾ ನಿರ್ದೇಶಕ ಎಚ್.ಎಲ್. ಮುರಳೀಧರ, ತಾಲೂಕಿನ ಯೋಜನಾಧಿಕಾರಿ ಎಂ.ಮಂಜುನಾಥ, ಕೃಷಿ ಮೇಲ್ವಿಚಾರಕ ವೀರೇಂದ್ರ ಅಗ್ಗಿಮಠ, ವಲಯ ಮೇಲ್ವಿಚಾರಕ ಭರತ, ಸೇವಾಪ್ರತಿನಿಧಿ ರಾಜೇಶ್ವರಿ, ರತ್ನಮ್ಮ, ಶರಣಮ್ಮ ಸೇರಿದಂತೆ ಗ್ರಾಮದ ಮುಖಂಡರು, ಕೆರೆ ಪುನಶ್ಚೇತನ ಸಮಿತಿ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.