ಕರಾಳ ಕಾಯಿದೆಗಳೇ ಕೃಷಿಗೆ ಮರಣ ಶಾಸನ

Team Udayavani, Oct 29, 2021, 2:14 PM IST

19former

ಸಿಂಧನೂರು: ಈ ದೇಶದಲ್ಲಿ ರೈತರನ್ನು ದುರ್ಬಲಗೊಳಿಸುವ ಮೂರು ಕೃಷಿ ಕಾಯಿದೆಗಳು ಜಾರಿಯಾದ ಬಳಿಕ ಸರಕಾರದ ಆಹಾರ ನಿಗಮ ಸೇರಿದಂತೆ ಇತರೆಡೆ ಖರೀದಿ ನಿರ್ಬಂಧಿಸಲಾಗಿದೆ. ಇಂತಹ ಹೊತ್ತಿನಲ್ಲಿ ಬೆಂಬಲ ಬೆಲೆಯಡಿ ಖರೀದಿ ಕೆಂದ್ರ ಕೇಳುತ್ತಿರುವ ನಮಗೆ ಕರಾಳ ಕಾಯಿದೆ ಅರಿವು ಇಲ್ಲವೆಂಬಂತಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.

ನಗರದ ಎಪಿಎಂಸಿ ಆವರಣದಲ್ಲಿ ಗುರುವಾರ ರಾಜ್ಯ ರೈತ ಸಂಘದಿಂದ ಹಮ್ಮಿಕೊಂಡಿದ್ದ ಬೃಹತ್‌ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಮೂರು ಕೃಷಿ ವಿರೋಧಿ ಕಾಯಿದೆ ಜಾರಿಗೆ ಬಂದಾಗ ಪಂಜಾಬ್‌, ಹರಿಯಾಣ, ಉತ್ತರಾಖಂಡ್‌ ಸೇರಿ ಇತರ ರಾಜ್ಯದ ರೈತರು ಜಾಗೃತವಾಗಿದ್ದಾರೆ. ಇದೇ ಕಾರಣಕ್ಕೆ ಇಂದಿಗೂ ಬೃಹತ್‌ ಹೋರಾಟ ದೆಹಲಿಯಲ್ಲಿ ಚಾಲ್ತಿಯಲ್ಲಿದೆ. ಆದರೆ, ಇದೀಗ ಪ್ರಧಾನ ಮಂತ್ರಿಗಳು ಬೆಂಬಲ ಬೆಲೆ ಘೋಷಣೆ ಹೆಸರಿನಲ್ಲಿ ರೈತರೊಂದಿಗೆ ಚೆಲ್ಲಾಟ ಆರಂಭಿಸಿದ್ದಾರೆ. ಅಗತ್ಯ ವಸ್ತುಗಳ ಖರೀದಿ ಕಾಯಿದೆ ತಿದ್ದುಪಡಿ ಮಾಡಿದ ದಿನವೇ ಆಹಾರ ನಿಗಮ ಮುಚ್ಚಲಾಗಿದೆ. ಖರೀದಿಗೆ ಅವಕಾಶವೇ ಇಲ್ಲ. ರೈತರ ಉತ್ಪನ್ನಗಳನ್ನು ಮುಂದೆ ಸರಕಾರ ಖರೀದಿಸುವುದೇ ಇಲ್ಲ. ಈಗ ದೆಹಲಿಯಲ್ಲಿ ಹೋರಾಟ ಜೀವಂತ ಇರುವ ಹಿನ್ನೆಲೆಯಲ್ಲಿ ರೈತರನ್ನು ವಂಚಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಭತ್ತ ಖರೀದಿಗೆ ಬೆಂಬಲ ಬೆಲೆಯನ್ನು ಕೇಳುತ್ತಿರುವ ಸಂದರ್ಭದಲ್ಲಿ ಇಂದು ಜಾರಿಯಾಗಿರುವ ಕಾಯಿದೆಗಳ ಹಾನಿಯನ್ನು ಅರ್ಥ ಮಾಡಿಕೊಳ್ಳಬೇಕಿದೆ. ಗೋಧಿ, ಭತ್ತ ಸೇರಿ ಯಾವುದೇ ಉತ್ಪನ್ನ ಸರಕಾರದ ಏಜೆನ್ಸಿಗಳು ಖರೀದಿ ಮಾಡುವುದಿಲ್ಲ ಎಂಬುದು ಈಗಾಗಲೇ ಪಂಜಾಬ್‌, ಹರಿಯಾಣ, ಉತ್ತರಾಖಂಡ್‌, ಉತ್ತರ ಪ್ರದೇಶ, ಮಧ್ಯ ಪ್ರದೇಶಕ್ಕೆ ಅರ್ಥವಾಗಿದೆ. ಅಲ್ಲಿ ಕೃಷಿ ವಿರೋಧಿ ಕಾಯಿದೆಗಳಿಗೆ ಅನುಮತಿ ನೀಡಿಲ್ಲ. ಆದರೆ, ಕರ್ನಾಟಕದಲ್ಲಿ ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಬಿ.ಎಸ್‌. ಯಡಿಯೂರಪ್ಪನವರು ಒಪ್ಪಿಗೆ ಸೂಚಿಸಿದ್ದಾರೆ. ಇನ್ನು ಎಚ್‌.ಡಿ. ಕುಮಾರಸ್ವಾಮಿ ಅವರು ಕೂಡ ಇದಕ್ಕೆ ಸಾಥ್‌ ನೀಡಿ, ಸೈ ಎಂದಿದ್ದಾರೆ.

ಇದನ್ನೂ ಓದಿ: ಅಸಂಘಟಿತ ಕಾರ್ಮಿಕರಿಗಾಗಿ ಇ-ಶ್ರಮ್ ಯೋಜನೆ

ಇದನ್ನು ರಾಜ್ಯದ ರೈತರು ಅರ್ಥ ಮಾಡಿಕೊಳ್ಳಬೇಕು ಎಂದರು. ರೈತ ಸಂಘದ ತಾಲೂಕು ಅಧ್ಯಕ್ಷ ಶಿವರಾಜ ಸಾಸಲಮರಿ ಅಧ್ಯಕ್ಷತೆ ವಹಿಸಿದ್ದರು. ರೈತ ಮುಖಂಡ ಬಸವರಾಜ ಗೋಡಿಹಾಳ, ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ.ಕಾರ್ತಿಕ್‌, ಕಾರ್ಯದರ್ಶಿ ಹನುಮಂತಪ್ಪ ಹೊಳೆಯಾಚಿ, ಬಳ್ಳಾರಿ ಘಟಕದ ಜಿಲ್ಲಾಧ್ಯಕ್ಷ ಜಿ.ವಿ.ಗೌಡ, ಕೊಪ್ಪಳ ಜಿಲ್ಲಾಧ್ಯಕ್ಷ ನಜೀರ್‌ಸಾಬ ಮೂಲಿಮನಿ, ಜಿಲ್ಲಾ ಉಪಾಧ್ಯಕ್ಷ ರಾಮಯ್ಯ ಜವಳಗೇರಾ, ಜಿಲ್ಲಾ ಪ್ರಧಾನ ಕಾರ್ಯದರ್ಸಿ ನರಸಪ್ಪ ದೇವಸುಗೂರು, ತಿಮ್ಮಣ್ಣ ಭೋವಿ, ಮಹಾದೇವ ಏಗನೂರು, ರಾಜಾಸಾಬ್‌, ಜಿ.ರಾಮಬಾಬು, ಕೆ.ವೈ. ಬಸವರಾಜ ನಾಯಕ, ತಾಯಪ್ಪ, ಶಿವಪುತ್ರಗೌಡ ನಂದಿಹಾಳ, ರಂಗಪ್ಪ ನಾಯಕ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.