ಸಿಂಧನೂರು: ತಾಯಿ ಮಕ್ಕಳ ಆಸ್ಪತ್ರೆ ಸ್ಥಳ ವಿವಾದ ಇತ್ಯರ್ಥಕ್ಕೆ ಸರ್ವಪಕ್ಷ ಸಭೆ
Team Udayavani, Feb 5, 2022, 12:44 PM IST
ಸಿಂಧನೂರು: ನಗರದಿಂದ ದೂರದಲ್ಲಿರುವ ಕಲ್ಲೂರು ಗ್ರಾಮದಲ್ಲಿ ತಾಯಿ, ಮಕ್ಕಳ ಆಸ್ಪತ್ರೆ ನಿರ್ಮಾಣ ಬೇಡ ಎಂಬ ವಿವಾದ ಕೊನೆಗೂ ತಾರ್ಕಿಕ ತಿರುವು ಪಡೆದಿದೆ.
ನೀರಾವರಿ ಇಲಾಖೆಯ ಜಾಗ ಪಡೆದುಕೊಳ್ಳುವ ಪ್ರಯತ್ನ ಆರಂಭವಾಗಿದ್ದು, ಫೆ.14 ರಂದು ಬೆಂಗಳೂರಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಿರ್ಧರಿಸಲಾಗಿದೆ.
ಶಾಸಕ ವೆಂಕಟರಾವ್ ನಾಡಗೌಡ ಅವರ ಅಧ್ಯಕ್ಷತೆಯಲ್ಲಿ ಇಲ್ಲಿನ ತಹಶೀಲ್ ಕಚೇರಿಯಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಆಸ್ಪತ್ರೆ ನಿರ್ಮಿಸಲು ಹೊಸ ಹುಡುಕಾಟದ ಬಗ್ಗೆ ಪ್ರಸ್ತಾಪಿಸಲಾಯಿತು.
ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರು, ಪಿಡಬ್ಲ್ಯುಡಿ ಕ್ಯಾಂಪಿನಲ್ಲಿರುವ ನೀರಾವರಿ ಇಲಾಖೆಯಲ್ಲಿ 29 ಎಕರೆ ಜಮೀನಿನ ಪೈಕಿ ಕೆಲವು ಕಡೆ ಖಾಲಿಯಿದೆ. ಆಸ್ಪತ್ರೆಗೆ ಬೇಕಾದ ಜಾಗವನ್ನು ಅಲ್ಲಿ ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು.
ಯಾವುದೇ ಕಾರಣಕ್ಕೂ ಕಲ್ಕೂರು ಗ್ರಾಮದ ಸ್ಮಶಾನದಲ್ಲಿ ಆಸ್ಪತ್ರೆ ನಿರ್ಮಿಸಲು ಒಪ್ಪುವುದಿಲ್ಲ ಎಂದು ಬಸನಗೌಡ ಬಾದರ್ಲಿ ಆಕ್ಷೇಪಿಸಿದರು.
ಬಳಿಕ ನೀರಾವರಿ ಇಲಾಖೆಯ ಜಾಗವನ್ನು ಆರೋಗ್ಯ ಇಲಾಖೆಗೆ ಪಡೆದುಕೊಳ್ಳಬೇಕಾದರೆ, ಸರಕಾರದ ಮಟ್ಟದಲ್ಲಿ ತೀರ್ಮಾನ ಆಗಬೇಕಾಗುತ್ತದೆ ಎಂಬ ಬಗ್ಗೆ ಚರ್ಚಿಸಲಾಯಿತು.
ಸರಕಾರದಿಂದ ಈ ಕುರಿತು ಆದೇಶ ಪಡೆಯುವುದಕ್ಕಾಗಿ ಬೆಂಗಳೂರಿಗೆ ನಿಯೋಗ ತೆರಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ.ಕರಿಯಪ್ಪ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರೂಪಾಪುರ, ಬಿಜೆಪಿ ಮಂಡಲ ಅಧ್ಯಕ್ಷ ಹನುಮೇಶ್ ಸಾಲಗುಂದಾ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.