ಅಗತ್ಯ ಸೌಲಭ್ಯ ಕಲ್ಪಿಸಲು ಅನುದಾನ ಮೀಸಲಿಡಿ
Team Udayavani, Mar 26, 2022, 12:56 PM IST
ರಾಯಚೂರು: ನಗರದಲ್ಲಿನ ಜ್ವಲಂತ ಸಮಸ್ಯೆಗಳ ವಿಚಾರದಲ್ಲಿ ನಗರಾಡಳಿತ ತೋರಿದ ದಿವ್ಯ ನಿರ್ಲಕ್ಷ್ಯದ ವಿರುದ್ಧ ವಿವಿಧ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಜನರಿಗೆ ಬೇಕಾದ ಯಾವೊಂದು ಸೌಲಭ್ಯ ಕಲ್ಪಿಸುವಲ್ಲಿ ನಗರಸಭೆ ಮುಂದಾಗುತ್ತಿಲ್ಲ ಎಂದು ದೂರಿದರು. ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಒಕ್ಕೋರಲಿನಿಂದ ಒತ್ತಾಯಿಸಿದ ಸಂಘಟನೆಗಳ ಮುಖಂಡರು, ನಗರಸಭೆ ವೈಫಲ್ಯದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು.
ನಗರಸಭೆ ಬಜೆಟ್‌ನಲ್ಲಿ ಶುದ್ಧ ಕುಡಿವ ನೀರು ಪೂರೈಕೆ, ಸ್ವಚ್ಛತೆ, ಕಸ ವಿಲೇವಾರಿ, ಶೌಚಗೃಹ ನಿರ್ಮಾಣ, ಆರೋಗ್ಯ ವಲಯಕ್ಕೆ ಅನುದಾನ ಮೀಸಲಿಡುವಂತೆ ಸಂಘ-ಸಂಸ್ಥೆಗಳು ಒತ್ತಾಯಿಸಿದವು.
ಸಂಘಟನೆ ಮುಖಂಡ ಬಾಸ್ಕರ್ ಬಾಬು ಮಾತನಾಡಿ, ಸಫಾಯಿ ಕರ್ಮಚಾರಿಗಳ ಬಡಾವಣೆಯಲ್ಲಿ ಮೂಲ ಸೌಲಭ್ಯ ಕಲ್ಪಿಸಬೇಕು. ಗುರುತಿನ ಚೀಟಿ ನೀಡಿದರೆ ಸರ್ಕಾರಿ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ ಎಂದರು.
ಹೋರಾಟಗಾರ ಎನ್. ಮಹಾವೀರ್ ಮಾತನಾಡಿ, ನಗರಕ್ಕೆ ಇಂದಿಗೂ ಅಶುದ್ಧ ನೀರು ಪೂರೈಕೆಯಾಗುತ್ತಿದ್ದು, ಶುದ್ಧೀಕರಣ ಮಾಡಿ ಪೂರೈಸಬೇಕು. ಪ್ರತಿ ಬಡಾವಣೆಯಲ್ಲಿ ಎರಡು ಸಾರ್ವಜನಿಕ ಶೌಚಗೃಹ ನಿರ್ಮಿಸುವಂತೆ ಒತ್ತಾಯಿಸಿದರು.
ಸಂಘಟನೆ ಮುಖಂಡ ರಾಜು ಪಟ್ಟಿ ಮಾತನಾಡಿ, ಬಿಆರ್‌ಬಿ ಕಾಲೇಜ್ ಹತ್ತಿರದ ಮುಕ್ತಿಧಾಮದಲ್ಲಿ ಶವ ಸಂಸ್ಕಾರ ಮಾಡುವ ವಿದ್ಯುತ್ ಯಂತ್ರ ಕೆಟ್ಟುಹೋದ ಪರಿಣಾಮ ಕಟ್ಟಿಗೆ ತಂದು ಶವ ಸಂಸ್ಕಾರ ಮಾಡಲಾಗುತ್ತಿದೆ. ಕೂಡಲೇ ಯಂತ್ರ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ನಗರಸಭೆ ಮಳಿಗೆಗಳ ದುರ್ಬಳಕೆ ತಡೆಯಲು ಕೂಡಲೇ ಮಳಿಗೆಗಳ ಹರಾಜು ಪ್ರಕ್ರಿಯೆ ನಡೆಸಬೇಕು. ನಗರಸಭೆ ಸದಸ್ಯರ ಬೆಂಬಲಿಗರೇ ಕಡಿಮೆ ದರಕ್ಕೆ ಮಳಿಗೆ ಪಡೆದು ದುಬಾರಿ ಬಾಡಿಗೆಗೆ ಬೇರೆಯವರಿಗೆ ನೀಡಿದ್ದಾರೆ. ನಗರಸಭೆಗೆ ನಷ್ಟವುಂಟು ಮಾಡಲಾಗುತ್ತಿದೆ. ಅಂಗವಿಕಲರಿಗೆ, ಪರಿಶಿಷ್ಟರಿಗೆ ಮಳಿಗೆಗಳಲ್ಲಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.
ಕ್ರಾಂತಿಯೋಗಿ ಬಸವೇಶ್ವರ ಸೇವಾ ಸಂಘದ ಅಧ್ಯಕ್ಷ ರಾಜೇಶ ಕುಮಾರ ಮಾತನಾಡಿ, ನಗರಸಭೆ ಕಚೇರಿಯಲ್ಲಿ ಶೌಚಗೃಹದ ವ್ಯವಸ್ಥೆ ಮಾಡಬೇಕು. ಮಹಿಳಾ ಸಿಬ್ಬಂದಿಗೆ ಸಮಸ್ಯೆಯಾಗುತ್ತಿದೆ. ನಗರಸಭೆಗೆ ವಿವಿಧ ಕೆಲಸಗಳಿಗೆ ಬರುವ ಮಹಿಳೆಯರಿಗೂ ತೊಂದರೆ ಆಗುತ್ತಿದೆ ಎಂದರು.
ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳ ಜನರಿಗೆ ರುದ್ರಭೂಮಿ ಸಮಸ್ಯೆಯಿದ್ದು, ನಗರಸಭೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ಪೌರಾಯುಕ್ತ ಮುನಿಸ್ವಾಮಿ ಮಾತನಾಡಿ, ಎಲ್ಲರ ಸಲಹೆ, ಸೂಚನೆ ಆಲಿಸಿದ್ದು, ಈ ಕುರಿತು ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.