![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 22, 2021, 6:06 PM IST
ರಾಯಚೂರು: ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಕೋವಿಡ್ -19 ಕಾರಣಕ್ಕೆ ಜಿಲ್ಲಾಡಳಿತ ಹಾಗೂ ಸಮುದಾಯದ ಸಹಯೋಗದಲ್ಲಿ ಗುರುವಾರ ಸರಳವಾಗಿ ಆಚರಿಸಲಾಯಿತು. ನಗರದ ಅಂಬಿಗರ ಚೌಡಯ್ಯ ವೃತ್ತದಲ್ಲಿ ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಯಂತಿ ಕಾರ್ಯಕ್ರಮಕ್ಕೆ ಚೌಡಯ್ಯನವರ ಪ್ರತಿಮೆಗೆ ಮಾಲಾರ್ಪಣೆ ಮೂಲಕ ಚಾಲನೆ ನೀಡಲಾಯಿತು.
ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿ ವೀರಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜಯಂತಿ ನಿಮಿತ್ತ ಪುತ್ಥಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಗಣ್ಯರು, ಸಮಾಜ ಬಾಂಧವರು ಪೂಜೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.
ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷಿ, ನಗರಸಭೆ ಅಧ್ಯಕ್ಷ ಈ.ವಿನಯ್ ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಎನ್. ಶಂಕ್ರಪ್ಪ, ತಹಶೀಲ್ದಾರ್ ಡಾ| ಹಂಪಣ್ಣ, ನಗರಸಭೆ ಪ್ರಭಾರ ಪೌರಾಯುಕ್ತ ಎಚ್. ವೆಂಕಟೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ನಾಯಕ, ನಗರಸಭೆ ಸದಸ್ಯ ಜಿಂದಪ್ಪ, ಈ.ಶಶಿರಾಜ, ಶರಣಬಸವ ಬಲ್ಲಟಿಗಿ, ಕಡಗೋಳ ಆಂಜನೇಯ, ಕಡಗೋಳ ಶರಣಪ್ಪ, ಬಾಬುರಾವ್, ಕಡಗೋಳ ರಾಮಚಂದ್ರ, ಬಂಡೇಶ ವಲ್ಕಂದಿನ್ನಿ, ಮುಕ್ತಿಯಾರ್ ಪಾಷಾ, ರವೀಂದ್ರ ಜಲ್ದಾರ, ತ್ರಿವಿಕ್ರಮ ಜೋಶಿ ಇದ್ದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.