ಶೇ.50ರಷ್ಟು ಮಹಿಳೆಯರಲ್ಲಿ ರಕ್ತಹೀನತೆ: ಜಂಬೂನಾಥ


Team Udayavani, Sep 23, 2017, 1:18 PM IST

9-Feb-4.jpg

ರಾಯಚೂರು: ದೇಶದ ಶೇ.50ರಷ್ಟು ಮಹಿಳೆಯರು ರಕ್ತ ಹೀನತೆ ಕೊರತೆಯಿಂದ ಬಳಲುತ್ತಿದ್ದಾರೆ. ಮಕ್ಕಳು, ಕಿಶೋರಿಯರು, ಗರ್ಭಿಣಿಯರು ಹಾಗೂ ಬಾಣಂತಿಯರಲ್ಲಿ ಶೇ. 80ರಷ್ಟು ಜನರು ಅದಕ್ಕೆ ಸಂಬಂಧಿತ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಕೃಷಿ ವಿಶ್ವವಿದ್ಯಾಲಯ ಕುಲಸಚಿವ ಗುತ್ತಿ ಜಂಬೂನಾಥ ಹೇಳಿದರು.

ನಗರದ ಕೃಷಿ ವಿವಿ ವಿಜ್ಞಾನ ಕೇಂದ್ರದಲ್ಲಿ ಬೆಳಗಾವಿ ಸೇವಕ್‌ ಸಂಸ್ಥೆ, ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಪರಿಷತ್‌ ಸಹಯೋಗದಲ್ಲಿ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ ಪೌಷ್ಟಿಕಾಂಶ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಕೌಟುಂಬಿಕ ಬಡತನದಿಂದ ಪೌಷ್ಟಿಕ ಮತ್ತು ಸಂತುಲಿತ ಆಹಾರ ಸೇವನೆಕೊರತೆ ಎದುರಿಸುತ್ತಿದ್ದಾರೆ. ರಕ್ತಹೀನತೆ ಕುರಿತು ಜಾಗೃತಿಯಿಲ್ಲ. ಇದರಿಂದ ಮಹಿಳೆಯರಲ್ಲಿ ಸಂತಾನೋತ್ಪತ್ತಿ ಸಂಬಂಧಿತ ಆರೋಗ್ಯ ಸಮಸ್ಯೆ, ದೇಹದಲ್ಲಿ ರಕ್ತದ ನಷ್ಟದ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಕಬ್ಬಿಣಾಂಶ ಕೊರತೆಯಿಂದ ಮಹಿಳೆಯರಲ್ಲಿ ಗಂಭೀರ ಸಮಸ್ಯೆ ಕಾಣಿಸಿಕೊಳ್ಳುತ್ತಿವೆ ಎಂದು ಹೇಳಿದರು.

ರಕ್ತ ಹೀನತೆ ಮತ್ತು ಪೌಷ್ಟಿಕತೆ ಕುರಿತು ಅರಿವು ಮೂಡಿಸಬೇಕು. ಮಹಿಳೆ ಆರೋಗ್ಯವಾಗಿದ್ದರೆ ಕುಟುಂಬ ಹಾಗೂ ಸದೃಢ ಸಮಾಜ ನಿರ್ಮಿಸಲು ಸಾಧ್ಯ. ಮಹಿಳೆಯರು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದರು.

ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ| ಎಸ್‌.ಕೆ. ಮೇಟಿ ಮಾತನಾಡಿ, ಮಹಿಳೆಯರಲ್ಲಿ ಪೋಷಕಾಂಶಗಳ ಕೊರತೆ ನೀಗಿದಾಗ ಮಾತ್ರ ದೇಶದಲ್ಲಿ ಬಡತನ ನಿರ್ಮೂಲನೆಯಾಗಿದೆ ಎನ್ನಬಹುದು. ಮಣ್ಣಿನ ಗುಣ, ಬೆಳೆ ಗುಣ ಹಾಗೂ ಮನುಷ್ಯ ಗುಣಗಳು ಒಗ್ಗೂಡಿದರೆ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಸಂಸ್ಥೆ ಪ್ರಧಾನ ಪರಿವೀಕ್ಷಕ ಆನಂದ ಲೋಬೋ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರಟಗಿ ಸ್ವಯಂ ಸೇವಾ ಸಂಸ್ಥೆಯ ಶಿಲ್ಪಾ ಬೀರಾದಾರ ಕಾರ್ಯಕ್ರಮದ ಕುರಿತು ಅಭಿಪ್ರಾಯ ಹಂಚಿಕೊಂಡರು.

ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಯ ವಿವಿಧ ಮಹಿಳಾ ಸ್ವ-ಸಹಾಯ ಗುಂಪುಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ಐಸಿಎಆರ್‌ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನ ಹಾಗೂ ಮುಖ್ಯಸ್ಥ ಡಾ| ರವಿ ಎಂ.ವಿ.ಸ್ವಾಗತಿಸಿದರು. ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನ ವಿಭಾಗದ ವಿಜ್ಞಾನಿ ಡಾ| ಅನುಪಮಾ ಸಿ. ವಂದಿಸಿದರು. ತೋಟಗಾರಿಕಾ ವಿಭಾಗದ ವಿಜ್ಞಾನಿ ಹೇಮಲತಾ ಕೆ.ಜೆ. ನಿರೂಪಿಸಿದರು.

ಟಾಪ್ ನ್ಯೂಸ್

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.