ಶಾಸಕರ ನಿವಾಸಕ್ಕೆ ಅನ್ನದಾತರ ದಂಡು
Team Udayavani, Jan 17, 2022, 12:53 PM IST
ಸಿಂಧನೂರು: ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಿತಿ ನಿರ್ಬಂಧ ತೆರವುಗೊಳಿಸಿ ಕೃಷಿ ಉತ್ಪನ್ನವನ್ನು ಖರೀದಿಸುವಂತೆ ರಾಜ್ಯ ಸರಕಾರದ ಗಮನ ಸೆಳೆಯಲು ಬೆಂಗಳೂರಿಗೆ ತೆರೆಳುತ್ತಿರುವೆ. ಈ ಹೋರಾಟದಲ್ಲಿ ಯಶಸ್ಸು ಲಭಿಸಲಿದ್ದು, ಅನಿವಾರ್ಯವಾದರೆ ಹೋರಾಟಕ್ಕೆ ಇಳಿಯುತ್ತೇನೆ ಎಂದು ಶಾಸಕ ವೆಂಕಟರಾವ್ ನಾಡಗೌಡ ಹೇಳಿದರು.
ನಗರದ ತಮ್ಮ ನಿವಾಸದಲ್ಲಿ ಭಾನುವಾರ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿ, ಅವರು ಈ ಭರವಸೆ ನೀಡಿದರು. ಈ ಮೊದಲು ರಾಜ್ಯ ಸರಕಾರದ ಮನವೊಲಿಸಲು ಎಲ್ಲ ರೀತಿಯ ಪ್ರಯತ್ನ ಮಾಡಿದ್ದೇನೆ. ನಾನು ಮತ್ತು ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದಾಗ, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಖರೀದಿಗೆ ಮಿತಿ ತೆರವುಗೊಳಿಸುವ ವಿಶ್ವಾಸ ಇದೆ. ಕೋವಿಡ್ ಮತ್ತು ಲಾಕ್‌ಡೌನ್ ಹಿನ್ನೆಲೆಯಲ್ಲಿ ಮತ್ತೆ ಮುಖ್ಯಮಂತ್ರಿಗಳ ಭೇಟಿ ಸಾಧ್ಯವಾಗಿರಲಿಲ್ಲ. ನಾಳೆಯೇ ಬೆಂಗಳೂರಿಗೆ ಹೊರಡುತ್ತಿದ್ದು, ಈ ಬಗ್ಗೆ ಮಾತನಾಡಲಾಗುವುದು. ಆಹಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೂ ಮನವರಿಕೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಹಿಂದೇಟು ಹಾಕುವುದಿಲ್ಲ. ಒಂದು ವೇಳೆ ಸರಕಾರ ಖರೀದಿ ಮಿತಿಯನ್ನು ತೆಗೆಯದಿದ್ದರೆ, ನಾನೇ ಮುಂದೆ ನಿಂತು ರೈತರ ಪರವಾಗಿ ದೊಡ್ಡ ಮಟ್ಟದ ಹೋರಾಟಕ್ಕೆ ಇಳಿಯುತ್ತೇನೆ ಎಂದರು.
ಬಾದರ್ಲಿ, ಅಲಬನೂರು, ಮಾಡಿಸಿರವಾರ, ಗೋಮರ್ಸಿ, ಉದ್ನಾಳ್ ಸೇರಿದಂತೆ ಅನೇಕ ಗ್ರಾಮದ ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.