ಬಳೆ ಕುಟುಂಬದ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ
Team Udayavani, Nov 22, 2021, 2:59 PM IST
ದೇವದುರ್ಗ: ಮದುವೆ ಮಾಡುವುದು, ಮನೆ ಕಟ್ಟುವುದು ಬಡವರ ಪಾಲಿಗೆ ಕಷ್ಟವೇ ಸರಿ. ಮಠ-ಮಾನ್ಯಗಳು ಮಾಡಬೇಕಾದಂತಹ ಸಾಮೂಹಿಕ ವಿವಾಹಗಳು ಬಳೆ ಕುಟುಂಬದವರು ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.
ತಾಲೂಕಿನ ಮಸರಕಲ್ ಗ್ರಾಮದ ಹೊರವಲಯದ ಮರಸಿಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ವಿರುಪಾಕ್ಷಪ್ಪ ಬಳೆ ಕುಟುಂಬದ ಮದುವೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಂದೆ, ತಾಯಿ ಆಸ್ತಿಯಿಂದ ಮದುವೆ ಆಗುವ ಬದಲು ಸ್ವಂತ ಶಕ್ತಿ ಮೇಲೆ ದುಡಿದು ಮದುವೆ ಮಾಡಿಕೊಳ್ಳಬೇಕು. ವರದಕ್ಷಿಣೆ ಕಿರುಕುಳ ನೀಡದೇ, ಕಾನೂನು ವಿರುದ್ಧ ಹೋಗದೇ ಸ್ವಂತ ಬಲದಿಂದಲೇ ಬದುಕು ಕಟ್ಟಿಕೊಳ್ಳಲು ಮುಂದಾಗಿ. ಪ್ರತಿಯೊಬ್ಬರಲ್ಲೂ ಸಂಸ್ಕಾರ, ಸಮಾನತೆ, ಬೇಧಭಾವ ಮಾಡದೇ ಎಲ್ಲರನ್ನೂ ಒಂದೇ ಭಾವನೆಯಿಂದ ನೋಡುವ ಮನೋಭಾವ ರೂಢಿಸಿಕೊಳ್ಳಬೇಕು ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಬಸವರಾಜ ಪಾಟೀಲ್ ಇಟಗಿ ಮಾತನಾಡಿ, ಸಾಮೂಹಿಕ ವಿವಾಹಗಳ ಮೂಲಕ ದುಂದು ವೆಚ್ಚಕ್ಕೆ ಕಡಿವಾಣ ಹಾಕಲಾಗುತ್ತದೆ. ಇಂತಹ ಕಾರ್ಯಕ್ರಮ ಆಯೋಜಿಸುವುದರಿಂದ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.
ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 70 ನವ ಜೋಡಿಗಳು ದಾಂಪತ್ಯ ಜೀವಕ್ಕೆ ಕಾಲಿಟ್ಟರು. ಇದೇ ಸಂದರ್ಭದಲ್ಲಿ ವೀರತಪಸ್ವಿ ವೀರಭದ್ರ ಶಿವಾಚಾರ್ಯರು, ಶುಂಭು ಸೋಮನಾಥ ಶಿವಾಚಾರ್ಯ ಸ್ವಾಮಿಗಳು, ಬೂದಿಬಸವೇಶ್ವರ ಸ್ವಾಮಿಗಳು, ಮುರುಘೇಂದ್ರ ಸ್ವಾಮಿಗಳು, ಸೋಮಶೇಖರ ಸ್ವಾಮಿಗಳು, ಶಿವಣ್ಣತಾತಾ ಮುಂಡರಗಿ, ಸಾಂಬಯ್ಯಪ್ಪ ಜಾಗಟಗಲ್, ಲಿಂಗಯ್ಯ ಪಟ್ಟದ ಪೂಜಾರಿ ಮಸರಕಲ್, ಕರೆಮ್ಮ ಗೋಪಾಲಕೃಷ್ಣ, ಪುರಸಭೆ ಅಧ್ಯಕ್ಷ ಹನುಮಗೌಡ ಶಂಕರಬಂಡಿ, ವಿರುಪಾಕ್ಷಪ್ಪ ಬಳೆ, ಸುನಂದ ಬಳೆ, ಮಹಾಂತೇಶ ಅತ್ತನೂರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.