ಅರಕೇರಾ ಬಸ್ ನಿಲ್ದಾಣ ಅವ್ಯವಸ್ಥೆ ತಾಣ
Team Udayavani, Sep 17, 2019, 3:34 PM IST
ದೇವದುರ್ಗ: ಶಾಸಕ ಕೆ.ಶಿವನಗೌಡ ನಾಯಕ ಅವರ ಸ್ವಗ್ರಾಮ ಅರಕೇರಾದ ಬಸ್ ನಿಲ್ದಾಣ ಅವ್ಯವಸ್ಥೆಯ ಆಗರವಾಗಿದೆ. ಪ್ರಯಾಣಿಕರಿಗೆ ಕುಡಿಯುವ ನೀರು, ಶೌಚಾಲಯದಂತಹ ಸೌಲಭ್ಯಗಳು ಮರೀಚಿಕೆಯಾಗಿವೆ. ಸ್ವಚ್ಛತೆ ಮಾಯವಾಗಿದೆ.
ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಗುಟ್ಕಾ ತಿಂದು ಉಗಿಯಲಾಗಿದೆ. ಕುಡಿಯುವ ನೀರು, ಆಸನ ವ್ಯವಸ್ಥೆ ಇಲ್ಲದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಪ್ರಯಾಣಿಕರು ಕುಡಿಯುವ ನೀರಿಗಾಗಿ ಪಕ್ಕದ ಹೋಟೆಲ್ಗಳ ಮೊರೆ ಇಲ್ಲವೇ ನೀರಿನ ಬಾಟಲಿ ಖರೀದಿಸುವುದು ಅನಿವಾರ್ಯವಾಗಿದೆ.
ಬಸ್ ನಿಲ್ದಾಣದಲ್ಲಿ ಶೌಚಾಲಯ ಇದ್ದರೂ ಇಲ್ಲದಂತಾಗಿದೆ. ನಿರ್ವಹಣೆ ಮತ್ತು ನೀರಿನ ಕೊರತೆಯಿಂದಾಗಿ ಶೌಚಾಲಯಕ್ಕೆ ಬೀಗ ಜಡಿಯಲಾಗಿದೆ. ಪ್ರಯಾಣಿಕರು ಮಲ, ಮೂತ್ರ ವಿಸರ್ಜನೆಗೆ ಜಾಗೆ ಹುಡುಕಿಕೊಂಡು ಹೋಗುವಂತಾಗಿದೆ.
ಕುಡುಕರ ತಾಣ: ಅರಕೇರಾ ಬಸ್ ನಿಲ್ದಾಣದಲ್ಲಿ ರಾತ್ರಿಯಾಗುತ್ತಿದ್ದಂತೆ ಕೆಲ ಕಿಡಿಗೇಡಿಗಳ ಕಾಟ ಹೆಚ್ಚುತ್ತದೆ. ಕೆಲವರು ಬಸ್ ನಿಲ್ದಾಣದ ಆವರಣದಲ್ಲೇ ಮದ್ಯ ಸೇವಿಸುತ್ತಿದ್ದಾರೆ. ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಮದ್ಯದ ಬಾಟಲಿ, ಪೌಚ್‌ಗಳು ಬಿದ್ದಿರುತ್ತವೆ. ಇದರಿಂದ ರಾತ್ರಿ ಬಸ್ ನಿಲ್ದಾಣಕ್ಕೆ ಆಗಮಿಸುವ ಮಹಿಳೆಯರು, ಪ್ರಯಾಣಿಕರು ಮುಜುಗರ ಪಡುವಂತಾಗಿದೆ. ಬಸ್ ನಿಲ್ದಾಣದಲ್ಲೇ ಇಂತಹ ಚಟುವಟಿಕೆ ನಡೆಯುತ್ತಿದ್ದರೂ ಅಧಿಕಾರಿಗಳು ಮೌನ ವಹಿಸಿದ್ದು ಅನುಮಾನಕ್ಕೆಡೆ ಮಾಡಿದೆ.
ಖಾಸಗಿ ವಾಹನಗಳ ಕಾಟ: ಅರಕೇರಾ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅಬ್ಬರ ಹೆಚ್ಚಾಗಿದೆ. ಸರಕಾರಿ ಬಸ್ ನಿಲ್ದಾಣಕ್ಕಿಂತ ಖಾಸಗಿ ವಾಹನಗಳ ನಿಲ್ದಾಣ ಎಂಬಂತಾಗಿದೆ. ಕಡಿವಾಣ ಹಾಕಲು ಅಧಿಕಾರಿಗಳು ಹಿಂದೇಟು ಹಾಕುತ್ತಿರುವುದರಿಂದ ನಿಲ್ದಾಣದ ಒಳಗಡೆಯೇ ಖಾಸಗಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ.
ಅಸ್ವಚ್ಛತೆ: ಅರಕೇರಾ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಸಿಬ್ಬಂದಿ ಇಲ್ಲದ್ದರಿಂದ ಅಸ್ವಚ್ಛತೆ ವಾತಾವರಣವಿದೆ. ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದೆ. ಗುಟ್ಕಾ ತಿಂದು ಉಗಿಯಲಾಗಿದೆ.
ರಾಜಕೀಯ ಶಕ್ತಿ ಕೇಂದ್ರ: ಅರಕೇರಾ ಗ್ರಾಮ ರಾಯಚೂರು ಜಿಲ್ಲೆಯ ರಾಜಕೀಯ ಶಕ್ತಿ ಕೇಂದ್ರವಾಗಿದೆ. ಮಾಜಿ ಸಂಸದ ಬಿ.ವಿ. ನಾಯಕ, ದಿ| ಶಾಸಕ ಎ. ವೆಂಕಟೇಶ ನಾಯಕ, ಹಾಲಿ ಶಾಸಕ ಕೆ. ಶಿವನಗೌಡ ಅವರ ಸ್ವಗ್ರಾಮವಾಗಿದೆ. ಇಂತಹ ಘಟಾನುಘಟಿ ನಾಯಕರ ತವರಿನ ಬಸ್ ನಿಲ್ದಾಣದ ಅಭಿವೃದ್ಧಿಗೆ ನಾಯಕರು ಒತ್ತು ನೀಡದಿರುವುದು ವಿಪರ್ಯಾಸವಾಗಿದೆ. ಮಾದರಿ ತಾಲೂಕು ಮಾಡುವ ಕನಸು ಹೊಂದಿರುವ, ಕಾರ್ಯಕ್ರಮದ ವೇದಿಕೆಗಳಲ್ಲಿ ಕೋಟಿ-ಕೋಟಿ ಅನುದಾನ ತರುವುದಾಗಿ ಹೇಳುವ ಅವರ ಊರಿನ ಬಸ್ ನಿಲ್ದಾಣ ಸುಧಾರಣೆಗೆ ಏಕೆ ಮುಂದಾಗಿಲ್ಲ ಎನ್ನುವ ಪ್ರಶ್ನೆ ಜನರನ್ನು ಕಾಡುತ್ತಿದೆ. ಇನ್ನಾದರೂ ಬಸ್ ನಿಲ್ದಾಣ ಸುಧಾರಣೆಗೆ ಶಾಸಕರು ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
•ನಾಗರಾಜ ತೇಲ್ಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.